Published on: March 8, 2023

ಪ್ಯಾರಾಚೂಟ್‌ಗಳ ಪರೀಕ್ಷೆ ಯಶಸ್ವಿ

ಪ್ಯಾರಾಚೂಟ್‌ಗಳ ಪರೀಕ್ಷೆ ಯಶಸ್ವಿ


ಸುದ್ದಿಯಲ್ಲಿ ಏಕಿದೆ? ಮಾನವಸಹಿತ ಗಗನಯಾನಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೊ), ಗಗನಯಾನಿಗಳನ್ನು ಹೊತ್ತ ಕೋಶವನ್ನು (ಮಾಡ್ಯೂಲ್) ಇಳಿಸುವಲ್ಲಿ ಬಳಕೆಯಾಗುವ ಪ್ಯಾರಾಚೂಟ್‌ಗಳನ್ನು ಯಶಸ್ವಿಯಾಗಿ ಪರೀಕ್ಷೆಗೆ ಒಳಪಡಿಸಿದೆ.


ಮುಖ್ಯಾಂಶಗಳು

  • ಗಗನಯಾನಿಗಳನ್ನು ಹೊತ್ತ ಕೋಶವು ಭೂಮಿಗೆ ಇಳಿಯುವಾಗ ಒಟ್ಟು 10 ಪ್ಯಾರಾಚೂಟ್‌ಗಳು ಹಲವು ಹಂತಗಳಲ್ಲಿ ಕೆಲಸ ಮಾಡುತ್ತವೆ. ಮೊದಲ ಎರಡು ಹಂತದಲ್ಲಿ ಕೆಲಸ ಮಾಡುವ ಒಟ್ಟು ನಾಲ್ಕು ಪ್ಯಾರಾಚೂಟ್‌ಗಳ ವ್ಯವಸ್ಥೆಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
  • ಮಾನವಸಹಿತ ಬಾಹ್ಯಾಕಾಶ ಯಾನವನ್ನು ಸಾಧ್ಯವಾಗಿಸುವುದು ಗಗನಯಾನ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಮೂವರು ಗಗನಯಾನಿಗಳನ್ನು 400 ಕಿಲೋಮೀಟರ್ ಎತ್ತರದ ಕಕ್ಷೆಗೆ ಸೇರಿಸಲಾಗುತ್ತದೆ. ಮೂರು ದಿನಗಳ ಬಳಿಕ ಅವರು ಭೂಮಿಗೆ ವಾಪಸಾಗಲಿದ್ದಾರೆ. ದೇಶದ ಮೊದಲ ಮಾನವಸಹಿತ ಗಗನಯಾನವು 2024ರ ಕೊನೆಯಲ್ಲಿ ಕೈಗೂಡಲಿದೆ.

ಪ್ಯಾರಾಚೂಟ್‌ ತಂತ್ರಜ್ಞಾನ ಅಭಿವೃದ್ಧಿ:  ಗಗನಯಾನ ಕಾರ್ಯಾಚರಣೆಗೆಂದೇ ಇಸ್ರೊ, ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರ ಮತ್ತು ಏರಿಯಲ್ ಡೆಲಿವರಿ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್‌ ಜಂಟಿಯಾಗಿ ಈ ಅಭಿವೃದ್ಧಿಪಡಿಸಿವೆ.

 ಪರೀಕ್ಷೆ

  • ಪ್ಯಾರಾಚೂಟ್‌ ತಂತ್ರಜ್ಞಾನವನ್ನು ಚಂಡೀಗಡದ ಟರ್ಮಿನಲ್ ಬ್ಯಾಲಿಸ್ಟಿಕ್ ರಿಸರ್ಚ್ ಲ್ಯಾಬೊರೇಟರಿಯಲ್ಲಿ (ಟಿಬಿಆರ್‌ಎಲ್)  ಪರೀಕ್ಷಿಸಲಾಗಿದೆ.
  • ಗಗನಯಾನಿಗಳನ್ನು ಹೊತ್ತ ಕೋಶವು ಬಾಹ್ಯಾಕಾಶದಿಂದ ಭೂಮಿಯ ವಾತಾವರಣವನ್ನು ಪ್ರವೇಶಿಸಿ, ನೆಲಕ್ಕೆ ಇಳಿಯುವಾಗ ಇರಬಹುದಾದ ಭೌತಿಕ ಸ್ಥಿತಿಯನ್ನು, ತೆರೆದ ಪ್ರಯೋಗಾಲಯದಲ್ಲಿ ನಿರ್ಮಿಸಿ ಈ ಪರೀಕ್ಷೆ ನಡೆಸಲಾಗಿದೆ.

ಈ ಪ್ರಯೋಗಾಲಯದಲ್ಲಿ ಇರುವ ಹಳಿಗಳ ಮೇಲೆ ರಾಕೆಟ್‌ ಚಾಲಿತ ಯಂತ್ರವನ್ನು ಚಲಾಯಿಸಲಾಗಿದೆ. ಯಂತ್ರದ ಹಿಂಭಾಗದಲ್ಲಿ ಈ ಪ್ಯಾರಾಚೂಟ್‌ಗಳನ್ನು ಅಳವಡಿಸಲಾಗಿತ್ತು. ‘ಪ್ಯಾರಾಚೂಟ್‌ಗಳು ಸರಿಯಾಗಿ ಕಾರ್ಯ ನಿರ್ವಹಿಸಿವೆ