Published on: June 8, 2022

ಪ್ಯಾರಾ ಶೂಟಿಂಗ್ ವಿಶ್ವಕಪ್

ಪ್ಯಾರಾ ಶೂಟಿಂಗ್ ವಿಶ್ವಕಪ್

ಸುದ್ಧಿಯಲ್ಲಿಏಕಿದೆ?

ಟೋಕಿಯೊ ಪ್ಯಾರಾಲಿಂಪಿಕ್ಸ್ ನ ಚಾಂಪಿಯನ್ ಅವನಿ ಲೇಖರಾ ಅವರು ಇದೀಗ ಫ್ರಾನ್ಸ್ ನ ಚಟಿರಾಕ್ಸ್ ನಲ್ಲಿ ನಡೆಯುತ್ತಿರುವ ಪ್ಯಾರಾ ಶೂಟಿಂಗ್ ವಿಶ್ವಕಪ್ ನ ವನಿತೆಯ 10 ಮೀ. ಏರ್ ರೈಫಲ್ ಸ್ಟಾಂಡಿಂಗ್ ಎಸ್ಎಚ್ 1ರಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. 

ಮುಖ್ಯಾಂಶಗಳು

  • ಪ್ಯಾರಾ ಶೂಟಿಂಗ್ ವಿಶ್ವಕಪ್‌ನಲ್ಲಿ 250.6 ರ ವಿಶ್ವ ದಾಖಲೆಯೊಂದಿಗೆ ಚಿನ್ನದ ಪದಕ ಗೆಲ್ಲುವ ಮೂಲಕ 20 ವರ್ಷದ ಲಖೇರಾ ಅವರು 2024ರ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಅರ್ಹತೆ ಗಳಿಸಿಕೊಂಡರು.
  • ಪ್ಯಾರಾ ಶೂಟಿಂಗ್ ವಿಶ್ವಕಪ್ ಮಿಶ್ರ 10 ಮೀ. ಏರ್ ರೈಫಲ್ ಸ್ಟಾಡಿಂಗ್ ಎಸ್ಎಚ್2ನಲ್ಲಿ 253.1 ಅಂಕದೊಂದಿಗೆ ಶ್ರೀಹರ್ಷ ದೇವರ್ಡಿ ಚಿನ್ನದ ಪದಕ ಗೆದ್ದಿದ್ದಾರೆ.