Published on: June 14, 2024

‘ಬ್ಲೂ ಗ್ರೀನ್ ಊರು’ ಅಭಿಯಾನ

‘ಬ್ಲೂ ಗ್ರೀನ್ ಊರು’ ಅಭಿಯಾನ

ಸುದ್ದಿಯಲ್ಲಿ ಏಕಿದೆ?  ಬೆಂಗಳೂರು ನಗರವನ್ನು ಹಸಿರಾಗಿಡಲು ‘ಬ್ಲೂ ಗ್ರೀನ್ ಊರು’ ಎಂಬ ಅಭಿಯಾನ ಆರಂಭಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮರಗಳನ್ನು ನೆಡಲು ಸಿದ್ಧತೆ ಮಾಡಲಾಗಿದೆ. ಜೊತೆಗೆ ಕ್ರೈಮೆಟ್ ಆ್ಯಕ್ಷನ್ ಸೆಲ್ ಕೂಡ ರಚಿಸಲಾಗಿದೆ.

ಏನಿದು ಅಭಿಯಾನ?

  • ಶಾಲಾ ಮಕ್ಕಳು ತಮ್ಮ ಪ್ರದೇಶದಲ್ಲಿ ಗಿಡ ನೆಟ್ಟು ಬೆಳೆಸುವ ಹಸಿರು ರಕ್ಷಕ ಕಾರ್ಯಕ್ರಮವನ್ನು 2023ರಲ್ಲಿ ಅನಾವರಣ ಮಾಡಲಾಗಿತ್ತು. ಈ ಕಾರ್ಯಕ್ರಮದ ಭಾಗವಾಗಿ ಈ ವರ್ಷ ಹೆಚ್ಚಿನ ಶಾಲೆಗಳನ್ನು ಸೇರಿಸಿಕೊಂಡು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 2 ಲಕ್ಷ ಗಿಡಗಳನ್ನು ನೆಡುವ ಗುರಿ ಹೊಂದಲಾಗಿದೆ.
  • ಶಾಲೆಗಳು ಪಾಲಿಕೆ ಜತೆ ಒಡಂಬಡಿಕೆ ಮಾಡಿಕೊಂಡಿದ್ದು, ಈ ಗಿಡಗಳು ಆರೋಗ್ಯಕರವಾಗಿ ಬೆಳೆಯುತ್ತಿವೆಯೇ ಎಂದು ಪರಿಶೀಲಿಸಲು ಮೊಬೈಲ್ ತಂತ್ರಾಂಶ ಸಿದ್ಧಪಡಿಸಲಾಗಿದೆ.
  • ಅಂತರ್ಜಲ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ‌ನಗರದಲ್ಲಿರುವ ತೆರೆದ ಬಾವಿಗಳ ಮಾಹಿತಿ ಪಡೆದು ಅಭಿವೃದ್ಧಿಪಡಿಸಲಾಗುವುದು. ನಗರದಲ್ಲಿ ಏಳು ಸಾವಿರ ಕೊಳವೆ ಬಾವಿಗಳು ಬತ್ತಿದ್ದವು. ಅವುಗಳ ಪುನಶ್ಚೇತನಕ್ಕಾಗಿ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ನಿರ್ಧರಿಸಲಾಗಿದೆ.