Published on: February 3, 2023

ಭದ್ರಾ ಮೇಲ್ದಂಡೆ ಯೋಜನೆ

ಭದ್ರಾ ಮೇಲ್ದಂಡೆ ಯೋಜನೆ


ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಮತ್ತು  ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲಾಗಿದೆ


ಯೋಜನೆಯ ವಿವರ

  • ಯೋಜನೆಯ ಘೋಷಣೆ: 2000 ಇಸವಿಯಲ್ಲೇ ಮಾಡಲಾಗಿತ್ತು. 2003ರಲ್ಲಿ ಆಡಳಿತಾತ್ಮಕ ಅನುಮೋದನೆ ಕೂಡಾ ಸಿಕ್ಕಿತ್ತು.
  • ಭದ್ರಾ ಮೇಲ್ದಂಡೆ ಯೋಜನೆಯಿಂದ ನೇರವಾಗಿ ಲಾಭ ಆಗೋದು ಮಧ್ಯ ಕರ್ನಾಟಕಕ್ಕೆ. ಈ ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ನೀರು ಒದಗಿಸುತ್ತೆ.
  • ಮಧ್ಯ ಕರ್ನಾಟಕದ ಐದೂವರೆ ಲಕ್ಷ ಎಕರೆ ಕೃಷಿ ಪ್ರದೇಶಕ್ಕೆ ಈ ಯೋಜನೆ ನೀರು ಕೊಡಲಿದೆ. ಜೊತೆಗೆ ಈ ಭಾಗದ 367 ಕೆರೆಗಳಿಗೆ ನೀರು ತುಂಬಿಸಲಿದೆ.
  • ಈ ಯೋಜನೆಯಿಂದ 787 ಗ್ರಾಮಗಳಿಗೆ ಪ್ರಯೋಜನ ಆಗಲಿದೆ.
  • ಒಟ್ಟಾರೆ 75 ಲಕ್ಷ ಜನರಿಗೆ ಈ ಯೋಜನೆಯಿಂದ ನೇರವಾಗಿ ಅನುಕೂಲ ಆಗುತ್ತೆ ಅನ್ನೋದು ನೀರಾವರಿ ತಜ್ಞರ ಲೆಕ್ಕಾಚಾರ. ಇನ್ನು ಈ ಯೋಜನೆಗೆ ಸರಿ ಸುಮಾರು 30 ಟಿಎಂಸಿ ನೀರು ಬಳಕೆ ಆಗುತ್ತೆ.

ಯೋಜನೆಯ ಜಾರಿ:

2 ಹಂತಗಳಲ್ಲಿ ಜಾರಿಗೆ ಬರಲಿದೆ.

  • ಪ್ಯಾಕೇಜ್‌ 1ರ ಅಡಿ ತುಂಗಾ ನದಿಯಿಂದ 17.5 ಟಿಎಂಸಿ ನೀರನ್ನ ಮೇಲಕ್ಕೆ ಎತ್ತಿ ಭದ್ರಾ ಜಲಾಶಯಕ್ಕೆ ಹರಿಸಲಾಗುತ್ತದೆ.
  • ಪ್ಯಾಕೇಜ್‌ 2ರ ಅಡಿ ಭದ್ರಾ ಜಲಾಶಯದಿಂದ ಸುಮಾರು 30 ಟಿಎಂಸಿ ನೀರನ್ನ ಮೇಲಕ್ಕೆ ಎತ್ತಿ ಅಜ್ಜಂಪುರದಲ್ಲಿ ಇರುವ ಸುರಂಗದವರೆಗೆ ಸಾಗಿಸುವ ಯೋಜನೆ ಇದೆ.

ರಾಷ್ಟ್ರೀಯ ಯೋಜನೆ:  ಭದ್ರಾ ಮೇಲ್ದಂಡೆ ಯೋಜನೆ ಇದೀಗ ರಾಷ್ಟ್ರೀಯ ಯೋಜನೆ. ಯಾವುದೇ ಒಂದು ನೀರಾವರಿ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದರೆ, ಕೇಂದ್ರ ಸರ್ಕಾರ ಈ ಯೋಜನೆಗೆ ಶೇಕಡಾ 60ರಷ್ಟು ಅನುದಾನ ನೀಡುತ್ತದೆ.

ಚಿತ್ರದುರ್ಗ ಶಾಖಾ ಕಾಲುವೆ

  • ಭದ್ರಾ ಮೇಲ್ದಂಡೆ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ 134.597 ಕಿ.ಮೀ ಉದ್ದದ ಕಾಲುವೆ ನಿರ್ಮಾಣವಾಗಲಿದೆ. ಈ ಎರಡು ಜಿಲ್ಲೆಗಳ 1,07,265 ಹೆಕ್ಟೇರ್ ಕ್ಷೇತ್ರಕ್ಕೆ ಹನಿ ನೀರಾವರಿ ಕಲ್ಪಿಸಿ 157 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.

ತುಮಕೂರು ಶಾಖಾ ಕಾಲುವೆ

  • ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ 84,900 ಹೆಕ್ಟೇರ್ ಕ್ಷೇತ್ರಕ್ಕೆ ಹನಿ ನೀರಾವರಿ ಕಲ್ಪಿಸಿ 131 ಕೆರೆಗಳಿಗೆ ನೀರನ್ನು ತುಂಬಿಸುವ ತುಮಕೂರು ಶಾಖಾ ಕಾಲುವೆಯನ್ನೂ ಭದ್ರಾ ಮೇಲ್ದಂಡೆ ಯೋಜನೆ ಒಳಗೊಂಡಿದೆ.

ಈ ತಾಲೂಕುಗಳಲ್ಲಿ ಕೆರೆ ತುಂಬಿಸುವ ಕಾಮಗಾರಿ

  • ಚಿತ್ರದುರ್ಗ ಶಾಖಾ ಕಾಲುವೆಯಿಂದ ಕವಲೊಡೆಯುವ ಹೊಳಲ್ಕೆರೆ, ಪಾವಗಡ, ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲ್ಲೂಕಿನ ಕೆರೆಗಳನ್ನು ತುಂಬಿಸುವ ಯೋಜನೆಯನ್ನು ಭದ್ರಾ ಮೇಲ್ದಂಡೆ ಯೋಜನೆ ಒಳಗೊಂಡಿದೆ. ಜೊತೆಗೆ ತುಮಕೂರು ಶಾಖಾ ಕಾಲುವೆಯಿಂದ ಕವಲೊಡೆಯುವ ಶಿರಾ, ಹಿರಿಯೂರು ಮತ್ತು ಚಿಕ್ಕನಾಯಕನಹಳ್ಳಿ ತಾಲೂಕಿನ ಕೆರೆಗಳನ್ನು ತುಂಬಿಸುವ ಕಾಮಗಾರಿಗಳು ನಡೆಯುತ್ತಿವೆ.