Published on: September 8, 2023

ಭೂಗತ ವಿದ್ಯುತ್ ಟ್ರಾನ್ಸ್‌ಫಾರ್ಮರ್’ ಕೇಂದ್ರ

ಭೂಗತ ವಿದ್ಯುತ್ ಟ್ರಾನ್ಸ್‌ಫಾರ್ಮರ್’ ಕೇಂದ್ರ

ಸುದ್ದಿಯಲ್ಲಿ ಏಕಿದೆ? ಭಾರತದಲ್ಲಿ ಮೊದಲ ಬಾರಿಗೆ ಬೆಂಗಳೂರಿನ ಮಲ್ಲೇಶ್ವರಂ ವಾರ್ಡ್‌ನ ಫುಟ್‌ಪಾತ್ ಅಡಿಯಲ್ಲಿ ಟ್ರಾನ್ಸ್‌ಫಾರ್ಮರ್(ಪರಿವರ್ತಕ)  ಕೇಂದ್ರವನ್ನು ಸ್ಥಾಪಿಸಲಾಗಿದೆ.

ಮುಖ್ಯಾಂಶಗಳು

  • 2020ರ ಮೇ ನಲ್ಲಿ ಕಾಮಗಾರಿ ಆರಂಭಿಸಿ 2023ರ ಮೇ ನಲ್ಲಿ ಪೂರ್ಣಗೊಳಿಸಿದೆ.
  • ಭೂಗತ ಪ್ರದೇಶದಲ್ಲಿ ಅಲ್ಲಿನ ಯಂತ್ರಗಳು ಕಾರ್ಯನಿರ್ವಹಿಸುವ ವೇಳೆ ಬಿಸಿಯಾಗದಂತೆ ತಾಪಮಾನ ನಿಯಂತ್ರಿತ ಮತ್ತು ಹವಾನಿಯಂತ್ರಿತ ವ್ಯವಸ್ಥೆ ಕಲ್ಪಿಸಲಾಗಿದೆ.
  • ಸಹಯೋಗ: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)
  • ಸಾಮರ್ಥ್ಯ: 500 ಕೆವಿಎ ಸಾಮರ್ಥ್ಯದ ಪರಿವರ್ತಕ’ವನ್ನು ಅಳವಡಿಸಲಾಗಿದೆ.

ಉದ್ದೇಶ

  • ಬೆಂಗಳೂರು ಜನ-ಜಾನುವಾರುಗಳಿಗೆ ವಿದ್ಯುತ್ ಅವಘಡಗಳಿಂದ ತಪ್ಪಿಸುವುದು, ಪಾದಚಾರಿ ಮಾರ್ಗಗಳನ್ನು ವಿದ್ಯುತ್ ಪರಿವರ್ತಕಗಳಿಂದ ಮುಕ್ತಗೊಳಿಸುವುದು. ಅಗ್ನಿ ಅವಘಡವಾಗುವುದನ್ನು ತಪ್ಪಿಸಬಹುದಾಗಿದೆ.

ಸಾಮಾನ್ಯ ಪರಿವರ್ತಕ ಮತ್ತು  ಭೂಗತ ಪರಿವರ್ತಕಗಳಿಗೆ ಇರುವ ವ್ಯತ್ಯಾಸ

ಸಾಮಾನ್ಯ ಪರಿವರ್ತಕಗಳನ್ನು ರಸ್ತೆಗಳಲ್ಲಿ ನೇತು ಹಾಕಿರಲಾಗುತ್ತದೆ. ಆದರೆ, ಹೊಸ ಪದ್ಧತಿಯಲ್ಲಿ ಪರಿವರ್ತಕ ಮತ್ತು ಆರ್‌ಎಂಯುಗಳು ಪೂರ್ಣವಾಗಿ ನೆಲದಡಿ ಬರುತ್ತವೆ. ನೇತು ಹಾಕಿರುವ ಪರಿವರ್ತಕಗಳು ಆಯಿಲ್ (ತೈಲ) ಟೈಪ್ ಪರಿವರ್ತಕಗಳಾಗಿರುತ್ತವೆ. ಇದು 500 ಕೆವಿಎ ತೈಲರಹಿತ ಡ್ರೈ ಟೈಪ್ ಪರಿವರ್ತಕವಾಗಿದೆ. ಇದರಿಂದ ಅಗ್ನಿ ಅವಘಡವಾಗುವುದನ್ನು ತಪ್ಪಿಸಬಹುದಾಗಿದೆ