Published on: November 10, 2023
‘ಮಾಂಗಲ್ಯ ಭಾಗ್ಯ’
‘ಮಾಂಗಲ್ಯ ಭಾಗ್ಯ’
ಸುದ್ದಿಯಲ್ಲಿ ಏಕಿದೆ? ಇತ್ತೀಚೆಗೆ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈ ಸಪ್ತಪದಿ ವಿವಾಹ ಯೋಜನೆಗೆ ‘ಮಾಂಗಲ್ಯ ಭಾಗ್ಯ’ ಎಂದು ಮರು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ.
ಮುಖ್ಯಾಂಶಗಳು
- ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದನ್ನು ಕಂಡು ಬಿ.ಎಸ್.ಯಡಿಯೂರಪ್ಪ ಅವರ ಅಧಿಕಾರವಧಿಯಲ್ಲಿ ವಧು-ವರರ ಸರಳ ವಿವಾಹಕ್ಕಾಗಿ ಜಾರಿಗೆ ತಂದಿದ್ದ ‘ಸಪ್ತಪದಿ’ ಸರಳ ಸಾಮೂಹಿಕ ವಿವಾಹ ಯೋಜನೆ ಯಾಗಿದೆ.
- ಈ ಯೋಜನೆಯನ್ನು ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ವಿಸ್ತರಿಸದ್ದು, ಈ ಯೋಜನೆಯನ್ನು ಆಯ್ದ 100 ದೇವಾಲಯಗಳಲ್ಲಿ ಮಾತ್ರ ಜಾರಿ ಮಾಡಲಾಗಿತ್ತು. ಇದೀಗ ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.
- ಯೋಜನೆಯಡಿಯಲ್ಲಿ ಸಾಮೂಹಿಕ ವಿವಾಹಕ್ಕೆ ಬೇಕಾಗುವ ವೆಚ್ಚವನ್ನು ದೇವಸ್ಥಾನದ ನಿಧಿಯಿಂದ ಭರಿಸಲಾಗುತ್ತದೆ. ಸದರಿ ದೇವಸ್ಥಾನದಿಂದ ಸಾಧ್ಯವಾಗದಿದ್ದಾಗ ಮಾತ್ರ ವಧು-ವರರಿಗೆ ನೀಡುವ ಆರ್ಥಿಕ ಸಹಾಯ ಧನವನ್ನು ಇಲಾಖೆಯ ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಭರಿಸಲಾಗುವುದು.
ಉದ್ದೇಶ
ಮದುವೆಗೆ ದುಂದು ವೆಚ್ಚ ಮಾಡುವ ಮೂಲಕ ಬಡ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದನ್ನು ತಪ್ಪಿಸುವುದಾಗಿದೆ.