Published on: March 25, 2023
ಮಾದಕ ವಸ್ತು ಮತ್ತು ರಾಷ್ಟ್ರೀಯ ಭದ್ರತೆ ಸಮ್ಮೇಳನ
ಮಾದಕ ವಸ್ತು ಮತ್ತು ರಾಷ್ಟ್ರೀಯ ಭದ್ರತೆ ಸಮ್ಮೇಳನ
ಸುದ್ದಿಯಲ್ಲಿ ಏಕಿದೆ? ಬೆಂಗಳೂರಿನಲ್ಲಿ ಮಾದಕ ದ್ರವ್ಯ ಕಳ್ಳಸಾಗಣೆ, ರಾಷ್ಟ್ರೀಯ ಭದ್ರತೆ ಕುರಿತ ದಕ್ಷಿಣ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಸಮ್ಮೇಳನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿದರು.
ಮುಖ್ಯಾಂಶಗಳು
- ಸಮ್ಮೇಳನದಲ್ಲಿ ದಕ್ಷಿಣದ 5 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
- ಶಿವಮೊಗ್ಗದಲ್ಲಿ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ತೆರೆಯಲು ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ಸರ್ಕಾರದ ನಡುವೆ ತಿಳುವಳಿಕೆ ಪತ್ರಕ್ಕೂ ಸಹಿ ಹಾಕಲಾಯಿತು.
ಮಾದಕ ದ್ರವ್ಯ ಜಾಲ ದಮನಕ್ಕೆ ಸರ್ಕಾರ ತೆಗೆದೊಕೊಂಡ ಕ್ರಮಗಳು
- ಮಾದಕ ದ್ರವ್ಯಗಳ ಪ್ರಕರಣಗಳನ್ನು ಅದರ ಮೂಲದಿಂದ ಅಂತಿಮ ಹಂತದವರೆಗೆ ಅದರ ಸಂಪೂರ್ಣ ಜಾಲವನ್ನು ಮಟ್ಟಹಾಕಲು ಸಂಪೂರ್ಣ ತನಿಖೆ ನಡೆಸಬೇಕು ಗೃಹ ಸಚಿವಾಲಯವು ಸಾಂಸ್ಥಿಕ ರಚನೆ, ಸಬಲೀಕರಣ ಮತ್ತು ಎಲ್ಲಾ ಮಾದಕ ದ್ರವ್ಯ ಏಜೆನ್ಸಿಗಳ ಸಮನ್ವಯ ಬಲಪಡಿಸುವ 3 ಅಂಶಗಳ ಸೂತ್ರ ಅಳವಡಿಸಿಕೊಂಡಿದೆ. ಮಾದಕ ದ್ರವ್ಯಗಳನ್ನು ಹತ್ತಿಕ್ಕಲು ಸಮಗ್ರ ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ.
- 3 ಅಂಶಗಳ ಸೂತ್ರ : ಗಾಂಜಾ, ಅಫೀಮು ಬೆಳೆಯುವ ಪ್ರದೇಶಗಳ ಗುರುತಿಸುವಿಕೆ ಮತ್ತು ನಿಯಂತ್ರಣಕ್ಕೆ ಡ್ರೋನ್, ಕೃತಕ ಬುದ್ದಿಮತ್ತೆ(AI) ಮತ್ತು ಉಪಗ್ರಹ ಮ್ಯಾಪಿಂಗ್ ಬಳಸಬೇಕು.
- ದೇಶದಿಂದ ಡ್ರಗ್ಸ್ ಹಾವಳಿಯನ್ನು ತೊಡೆದು ಹಾಕಲು ಕೇಂದ್ರ ಸರ್ಕಾರದ ಅಭಿಯಾನದ ನಾಲ್ಕು ಆಧಾರ ಸ್ತಂಭಗಳಿವೆ. ಡ್ರಗ್ಸ್ ಪತ್ತೆ, ನೆಟ್ವರ್ಕ್ ನಾಶ, ಅಪರಾಧಿಗಳ ಬಂಧನ ಮತ್ತು ಮಾದಕ ವ್ಯಸನಿಗಳ ಪುನರ್ವಸತಿ.
ಮಾದಕ ವಸ್ತುಗಳ ವಿರುದ್ಧ ಸರ್ಕಾರವು ಶೂನ್ಯ ಸಹಿಷ್ಣುತೆಯ ನೀತಿ ಅಳವಡಿಸಿಕೊಂಡಿದೆ:
ಕರ್ನಾಟಕ ರಾಜ್ಯದಲ್ಲಿ ಡ್ರಗ್ ನಿಯಂತ್ರಣಕ್ಕೆ ಗಂಭೀರ ಕ್ರಮ
- ರಾಜ್ಯದಲ್ಲಿ ಮಾದಕವಸ್ತು ನಿಯಂತ್ರಣಕ್ಕೆ ಗಂಭೀರ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕದಲ್ಲಿ ಮಾದಕವಸ್ತು ನಿಯಂತ್ರಣದಲ್ಲಿ ಜೀರೊ ಟಾಲರನ್ಸ್ ಜಾರಿಗೊಳಿಸಲಾಗಿದೆ.
- ಎನ್ಡಿಪಿಎಸ್ ಕಾಯ್ದೆಯನ್ನು ಸರಳೀಕರಣಗೊಳಿಸಿ ಹೆಚ್ಚಿನ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳುತ್ತಿದೆ. ಇದರಿಂದ ಮಾದಕವಸ್ತು ನಿಯಂತ್ರಣ ಮಾಡಲು ಸಾಧ್ಯವಿದೆ.
ಜನರ ಕರ್ತವ್ಯ ಮತ್ತು ಮುಂದಿನ ದಾರಿ
- ಮಾದಕ ವಸ್ತುಗಳ ಕಳ್ಳಸಾಗಣೆ, ಮಾರಾಟ, ಬಳಕೆ ವಿರುದ್ಧ ಹೋರಾಟದಲ್ಲಿ ಸುಧಾರಿತ ತಂತ್ರಜ್ಞಾನ ಬಳಸುವುದು ಮುಂದಿನ ಗುರಿಯಾಗಿರಬೇಕು.
- ಮಾದಕವಸ್ತು ಕಳ್ಳಸಾಗಣೆ ವಿರುದ್ಧ ಪರಿಣಾಮಕಾರಿ ಕ್ರಮಕ್ಕಾಗಿ NCORD ಪೋರ್ಟಲ್ ಮತ್ತು NIDAAN ವೇದಿಕೆಯ ಬಳಕೆ ಮಾಡುವುದು, ಮಾದಕ ದ್ರವ್ಯಗಳ ವಿರುದ್ಧದ ಹೋರಾಟದಲ್ಲಿ ನಿರ್ಣಾಯಕ ಕ್ರಮ ಕೈಗೊಳ್ಳಲು ವಿವಿಧ ರಾಜ್ಯಗಳಲ್ಲಿ ರಚನೆಯಾಗಿರುವ ಮಾದಕ ದ್ರವ್ಯ ನಿಗ್ರಹ ಕಾರ್ಯಪಡೆಯನ್ನು ಬಲಪಡಿಸುವುದು ಈ ಸಮಯದ ಅಗತ್ಯವಾಗಿದೆ.
- ಎನ್ಡಿಪಿಎಸ್ ಕಾಯ್ದೆಯ ವಿವಿಧ ನಿಬಂಧನೆಗಳನ್ನು ಸಹ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು.
- ಡ್ರಗ್ಸ್ ವಿರುದ್ಧದ ಹೋರಾಟ ಕೇವಲ ಸರ್ಕಾರ ಮಾತ್ರ ಮಾಡುವುದಲ್ಲ, ಜನತೆಯೂ ಕೈಜೋ ಡಿಸಬೇಕು ಆಗ ಮಾತ್ರ ಈ ಸಮಸ್ಯೆ ನಿರ್ಮೂಲನೆ ಮಾಡಲು ಸಾಧ್ಯವಾಗಲಿದೆ.
- ಸಹಕಾರ, ಸಮನ್ವಯ ಮತ್ತು ಸಹಯೋಗವನ್ನು ಹೆಚ್ಚಿಸುವ ಮೂಲಕ ಮಾದಕ ದ್ರವ್ಯ ಮುಕ್ತ ಭಾರತ ಮಾಡಲು ಎಲ್ಲಾ ಇಲಾಖೆಗಳು ಮತ್ತು ಸಂಸ್ಥೆಗಳು ಮುಂದಾಗಬೇಕು.
- ಕರಾವಳಿ ಭದ್ರತೆ ಮತ್ತು ಸಮುದ್ರ ಮಾರ್ಗಗಳ ಮೇಲೆ ಗಮನ ಹೆಚ್ಚಿಸುವ ಅವಶ್ಯಕತೆಯಿದೆ ಮತ್ತು ದಕ್ಷಿಣ ಸಮುದ್ರ ಮಾರ್ಗದಲ್ಲಿ ಬಿಗಿಯಾದ ನಿಗಾ ಇಡಬೇಕು.