Published on: September 6, 2021

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ

ಸುದ್ಧಿಯಲ್ಲಿ ಏಕಿದೆ? ತಾವು ಮುಖ್ಯಮಂತ್ರಿಯಾದ ಕೂಡಲೇ ಬಸವರಾಜ ಬೊಮ್ಮಾಯಿಯವರು ಘೋಷಿಸಿದ್ದ ಮಹಾತ್ವಾಕಾಂಕ್ಷಿ ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಯೋಜನೆಗೆ ಚಾಲನೆ ನೀಡಲಾಗಿದೆ.

ಏನಿದು ಯೋಜನೆ?

  • ಈ ಯೋಜನೆಯಿಂದ ಸುಮಾರು 17 ಲಕ್ಷ ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಪಿಯುಸಿ, ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ 2,500 ರೂಪಾಯಿ. ಮತ್ತು ವಿದ್ಯಾರ್ಥಿನಿಯರಿಗೆ 3 ಸಾವಿರ ರೂಪಾಯಿಗಳನ್ನು ಹಣವನ್ನು ಸರ್ಕಾರ ನೀಡಲಿದೆ. ಇನ್ನು ಪದವೀಧರ ವಿದ್ಯಾರ್ಥಿಗಳಿಗೆ 5 ಸಾವಿರ ರೂ, ವಿದ್ಯಾರ್ಥಿನಿಗಳಿಗೆ 5,500 ರೂ. ಹಣವನ್ನು ಸರ್ಕಾರ ನೀಡಲಿದೆ. ಎಲ್ಎಲ್​ಬಿ, ಪ್ಯಾರಾಮೆಡಿಕಲ್, ಬಿ ಫಾರ್ಮ್, ನರ್ಸಿಂಗ್, ವೃತ್ತಿಪರ ಕೋರ್ಸ್​ಗಳ ವಿದ್ಯಾರ್ಥಿಗಳಿಗೆ 7,500 ರೂ, ನೀಡಿದರೆ, ವಿದ್ಯಾರ್ಥಿನಿಯರಿಗೆ 8 ಸಾವಿರ ರೂ. ಹಣವನ್ನು ರಾಜ್ಯ ಸರ್ಕಾರ ನೀಡುತ್ತದೆ.
  • ಎಂಬಿಬಿಎಸ್, ಬಿಇ, ಬಿ.ಟೆಕ್ ಸ್ನಾತಕೋತ್ತರ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 10 ಸಾವಿರ, ವಿದ್ಯಾರ್ಥಿನಿಯರಿಗೆ 11,000 ರೂ. ಶಿಷ್ಯ ವೇತನ ನೀಡಲಾಗುವುದು. ನೋಂದಣಿಯಾದ ಶಿಕ್ಷಣ ಸಂಸ್ಥೆಗಳಲ್ಲಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆವರಿಗೆ ರಾಜ್ಯ ಸರ್ಕಾರ ಶಿಷ್ಯ ವೇತನ ನೀಡುತ್ತದೆ.