Published on: October 20, 2021
‘ರಾಣಿ ಚೆನ್ನಮ್ಮ ಪಡೆ’
‘ರಾಣಿ ಚೆನ್ನಮ್ಮ ಪಡೆ’
ಸುದ್ಧಿಯಲ್ಲಿ ಏಕಿದೆ? ಮಹಿಳೆಯರು ಮತ್ತು ಮಕ್ಕಳ ವಿರುದ್ಧ ನಡೆಯುವ ಅಪರಾಧ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಮಹಿಳಾ ಅಧಿಕಾರಿಗೊಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಿದೆ.
- ಬೆಂಗಳೂರು ನಗರ ಪೊಲೀಸ್ ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಮಹಾದೇವ್ ಜೋಶಿ ಅವರ ಕನಸಿನ ಕೂಸಾಗಿದ್ದು, ಈ ತಂಡಕ್ಕೆ ರಾಣಿ ಚನ್ನಮ್ಮ ಪಡೆ ಎಂದು ನಾಮಕರಣ ಮಾಡಲಾಗಿದೆ.
- ಮಹಿಳೆಯರಿಂದ, ಮಹಳೆಯರಿಗಾಗಿ, ಮಹಿಳಯರಿಗೋಸ್ಕರ ರಾಣಿ ಚನ್ನಮ್ಮ ಪಡೆ ತಯಾರಾಗಿದ್ದು, ತರಬೇತಿ ಪಡೆದ 31 ಮಹಿಳಾ ಪೊಲೀಸ್ ಅಧಿಕಾರಿಗಳು ತಂಡದಲ್ಲಿರಲಿದ್ದಾರೆ.
ಉದ್ದೇಶ
- ಇಂದಿನ ಅನಿಶ್ಚಿತ ಕಾಲದಲ್ಲಿ ಮಹಿಳೆಯರನ್ನು ಹೆಚ್ಚು ಸ್ವಾವಲಂಬಿ ಮತ್ತು ಸ್ವತಂತ್ರರನ್ನಾಗಿ ಮಾಡುವ ಉದ್ದೇಶವಾಗಿದೆ.
- ವಿಶೇಷ ತಂಡದ ಉದ್ದೇಶಗಳು ಮಹಿಳೆಯರಿಗೆ ಮೂಲಭೂತ ಸ್ವಯಂ-ರಕ್ಷಣಾ ತಂತ್ರಗಳ ಬಗ್ಗೆ ಶಿಕ್ಷಣ ನೀಡುವುದು ಮತ್ತು ತರಬೇತಿ ನೀಡುವುದು, ಜೊತೆಗೆ ಮಹಿಳೆಯರು ಮತ್ತು ಮಕ್ಕಳ ಸಂಬಂಧಿತ ಕಾನೂನುಗಳ ಬಗ್ಗೆ ಅರಿವು ಮೂಡಿಸುವುದು-‘ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ, ಮತ್ತು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ (NDPS) ಆಕ್ಟ್ ಇವುಗಳ ಬಗ್ಗೆ ಅರಿವು ಮೂಡಿಸುವುದು ಪ್ರಮುಖ ಉದ್ದೇಶವಾಗಿದೆ.
- ಸಾಮಾಜಿಕ ಮಾಧ್ಯಮ ಮತ್ತು ಸೈಬರ್ ಅಪರಾಧಗಳ ಬಗ್ಗೆ ಜಾಗೃತಿಯನ್ನೂ ಹಂಚಿಕೊಳ್ಳಲಾಗುತ್ತಿದೆ. ಮಹಿಳೆಯರು ಮತ್ತು ಮಕ್ಕಳ ಚಿಕಿತ್ಸೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಕೂಡ ಯೋಜನೆಯ ಭಾಗವಾಗಿದೆ ಎಂದು ತಿಳಿಸಿದ್ದಾರೆ. ಈ ವಿಭಾಗವು ಮಹಿಳಾ ಆಯೋಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಎನ್ಜಿಒಗಳು ಮತ್ತು ಇತರ ಸಂಸ್ಥೆಗಳೊಂದಿಗೆ ಸಹ ಸಹಯೋಗ ಹೊಂದಿದೆ.