Published on: December 30, 2022

ರಾಮ ದೇವರ ಬೆಟ್ಟ

ರಾಮ ದೇವರ ಬೆಟ್ಟ

ಸುದ್ದಿಯಲ್ಲಿ ಏಕಿದೆ? ರಾಮನಗರದಲ್ಲಿರುವ ಪ್ರಸಿದ್ಧ ರಾಮ ದೇವರ ಬೆಟ್ಟದಲ್ಲಿ ಅಯೋಧ್ಯೆಯ ರಾಮ ಮಂದಿರದ ಮಾದರಿ ದೇವಾಲಯ ನಿರ್ಮಾಣ, ಅಭಿವೃದ್ಧಿಗೆ ಯೋಜನೆ ರೂಪಿಸಲು ಸಿಎಂ ಸೂಚನೆ ನೀಡಿದ್ದಾರೆ.

ಮುಖ್ಯಾಂಶಗಳು

  • ಜಿಲ್ಲೆಯ ಹೆಸರೇ ರಾಮನಗರವಾಗಿರುವುದರಿಂದ ರಾಮ ಮಂದಿರದ ಅಭಿವೃದ್ಧಿಯಾಗುವುದು ಸೂಕ್ತವಾಗಿದೆ. ಅಯೋಧ್ಯೆಯ ಮಾದರಿಯಲ್ಲೇ ದಕ್ಷಿಣ ಭಾರತದಲ್ಲಿ ರಾಮ ಮಂದಿರ ನಿರ್ಮಾಣವಾಗುವ ವಿಶ್ವಾಸವಿದೆ.
  • ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಆಹ್ವಾನಿಸಲಾಗುವುದು.

ಉದ್ದೇಶ

  • ರಾಮನಗರದಲ್ಲಿರುವ ರಾಮದೇವರ ಬೆಟ್ಟವನ್ನು ದಕ್ಷಿಣದ ಅಯೋಧ್ಯೆಯಾಗಿ ಮಾಡುವ ಉದ್ದೇಶ ಹೊಂದಿದ್ದೇವೆ.   ಅಲ್ಲಿರುವ ರಾಮನ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿ, ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡಿ, ಆ ಮೂಲಕ ರಾಮನಗರದ ರಾಮದೇವರ ಬೆಟ್ಟವನ್ನು ಹಿಂದೂ ಧಾರ್ಮಿಕ ಕೇಂದ್ರವನ್ನಾಗಿ ಮಾಡಲಾಗುವುದು.

ರಾಮದೇವರ ಬೆಟ್ಟ

  • ರಾಮದೇವರ ಬೆಟ್ಟವು ರಾಮನಗರ ಜಿಲ್ಲೆಯ ಐತಿಹಾಸಿಕ ಕುರುಹುಗಳಲ್ಲಿ ಒಂದು.
  • ಇದು ರಣಹದ್ದು ಸಂರಕ್ಷಣಾ ಧಾಮವಾಗಿ ಗುರುತಿಸಿಕೊಂಡಿದೆ.
  • ಹಿಂದಿ ಭಾಷೆಯ ಪ್ರಸಿದ್ಧ ಶೋಲೆ’ ಸಿನಿಮಾ ಚಿತ್ರೀಕರಣಗೊಂಡಿದ್ದು ಹೀಗಾಗಿ ಇದು ಶೋಲೆ ಬೆಟ್ಟ ಎಂದೇ ಹೆಸರುವಾಸಿ.
  • 850 ಎಕರೆಯಷ್ಟು ವಿಸ್ತಾರವಾದ ಅರಣ್ಯ ಹೊಂದಿರುವ ಈ ಬೆಟ್ಟವನ್ನು ರಾಜ್ಯ ಸರ್ಕಾರ ರಣಹದ್ದು ಸಂರಕ್ಷಣಾ ಧಾಮ ಎಂದು ಗುರುತಿಸಿದೆ. ಅರಣ್ಯ ಇಲಾಖೆ ಇದರ ನಿರ್ವಹಣೆ ಮಾಡುತ್ತಿದೆ.