Published on: December 23, 2021

ರಾಷ್ಟ್ರೀಯ ರೈತರ ದಿನ

ರಾಷ್ಟ್ರೀಯ ರೈತರ ದಿನ

ಸುದ್ಧಿಯಲ್ಲಿ ಏಕಿದೆ ?  ದೇಶದಲ್ಲಿ ಪ್ರತಿವರ್ಷವೂ ಡಿಸೆಂಬರ್ 23ನ್ನು ರಾಷ್ಟ್ರೀಯ ರೈತರ ದಿನ ಅಥವಾ ಕಿಸಾನ್ ದಿವಸ್ ಎಂದು ಆಚರಿಸಲಾಗುತ್ತದೆ.

ಚೌಧರಿ ಚರಣ್ ಸಿಂಗ್

  • ಭಾರತದ 5ನೇ ಪ್ರಧಾನ ಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಸ್ಮರಣಾರ್ಥ ಅವರ ಜನ್ಮದಿನವನ್ನು ಕಿಸಾನ್ ದಿವಸ್ ಎಂದು ಆಚರಿಸಲಾಗುತ್ತದೆ.
  • ಚೌಧರಿ ಚರಣ್ ಸಿಂಗ್ ಮೀರತ್ ನ ನೂರ್ಪುರ್ ನಲ್ಲಿ 1902ರ ಡಿಸೆಂಬರ್ 23ರಂದು ಜನಿಸಿದರು. ಕೃಷಿ ಆರ್ಥಿಕತೆಯ ಮಹತ್ವವನ್ನು ಅವರು ಅರಿತು ದೇಶದ ರೈತರ ಪರಿಸ್ಥಿತಿಯನ್ನು ಗುರುತಿಸಿ ಅದಕ್ಕೆ ಪೂರಕವಾದ ಯೋಜನೆಗಳನ್ನು ತಂದಿದ್ದರು.
  • ಜುಲೈ 1979ರಲ್ಲಿ ಪ್ರಧಾನಿಯಾಗಿ ಹುದ್ದೆ ವಹಿಸಿ 1980ರ ಜನವರಿಯವರಿಗೆ ಇದ್ದರು. ಈ ಅವಧಿಯಲ್ಲಿ ರೈತರ ಕಲ್ಯಾಣಕ್ಕೆ ಅವರು ತಂದ ಯೋಜನೆಗಳು ಇಂದಿಗೂ ಜನಪ್ರಿಯ. ರೈತರ ಪರವಾಗಿ ರೈತಸ್ನೇಹಿ ಯೋಜನೆಗಳನ್ನು ತಂದದ್ದಕ್ಕಾಗಿ ಅವರ ನೆನಪಿನಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ.
  • ಚೌಧರಿ ಚರಣ್ ಸಿಂಗ್ ಸ್ಮಾರಕವನ್ನು ಕಿಸಾನ್ ಘಾಟ್ ಎಂದು ಕರೆಯಲಾಗುತ್ತದೆ. ಲಕ್ನೊದ ಅಮೌಸಿ ವಿಮಾನ ನಿಲ್ದಾಣವನ್ನು ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ. ಮೀರತ್ ವಿಶ್ವವಿದ್ಯಾಲಯವನ್ನು ಸಹ ಚೌಧರಿ ಚರಣ್ ಸಿಂಗ್ ವಿ ವಿ ಎಂದು ಮರು ನಾಮಕರಣ ಮಾಡಲಾಗಿದೆ.

ದಿನಾಚರಣೆಯ ಮುಖ್ಯ ಉದ್ದೇಶ

  • ಮುಖ್ಯವಾಗಿ ರೈತರು ಸಮಾಜಕ್ಕೆ ನೀಡುವ ಕೊಡುಗೆಯ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದೇ ಈ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ. ರೈತರು ಅತ್ಯಂತ ಕಷ್ಟದ ಸ್ಥಿತಿಯಲ್ಲಿ ಹೇಗೆ ಬೆಳೆ ಬೆಳೆಸುತ್ತಾರೆ, ಅವರ ಬದುಕು ಹೇಗಿದೆ, ಅವರು ಹೇಗೆ ಜೀವನ ನಿರ್ವಹಣೆ ಮಾಡುತ್ತಾರೆ ಎಂಬುದರ ಬಗ್ಗೆ ಶ್ರೀಸಾಮಾನ್ಯನಿಗೆ ಅರಿವು ಮೂಡಿಸುವ ಸದಾಶಯವನ್ನು ಈ ದಿನ ಹೊಂದಿದೆ.