Published on: December 23, 2022

ರಾಷ್ಟ್ರೀಯ ರೈತ ದಿನಾಚರಣೆ

ರಾಷ್ಟ್ರೀಯ ರೈತ ದಿನಾಚರಣೆ

ಸುದ್ದಿಯಲ್ಲಿ ಏಕಿದೆ? ದೇಶದಲ್ಲಿ ಪ್ರತಿವರ್ಷ ಡಿಸೆಂಬರ್ 23ನ್ನು ರಾಷ್ಟ್ರೀಯ ರೈತರ ದಿನ ಅಥವಾ ಕಿಸಾನ್ ದಿವಸ ಎಂದು ಆಚರಿಸಲಾಗುತ್ತದೆ.

ಮುಖ್ಯಾಂಶಗಳು

  • ಭಾರತದ 5ನೇ ಪ್ರಧಾನ ಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಸ್ಮರಣಾರ್ಥ ಅವರ ಜನ್ಮದಿನವನ್ನು ಕಿಸಾನ್ ದಿವಸ ಎಂದು ಆಚರಿಸಲಾಗುತ್ತದೆ.
  • 2001ರಿಂದ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನವನ್ನು ರಾಷ್ಟ್ರೀಯ ರೈತರ ದಿನವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿತು.
  • ಅಲ್ಪಾವಧಿಗೆ ಪ್ತಧಾನ ಮಂತ್ರಿಯಾಗಿದ್ದ ಚೌಧರಿ ಚಾರಣ ಸಿಂಗ ಅವರು ರೈತರ ಕಲ್ಯಾಣಕ್ಕೆ ಜಾರಿಗೊಳಿಸಿದ ಹಲವು ಯೋಜನೆಗಳು ಇಂದಿಗೂ ಜನಪ್ರಿಯ.
  • ಚೌಧರಿ ಚರಣ್ ಸಿಂಗ್ ಕೃಷಿ ಆರ್ಥಿಕತೆಯ ಮಹತ್ವವನ್ನು ಅವರು ಅರಿತು ದೇಶದ ರೈತರ ಪರಿಸ್ಥಿತಿಯನ್ನು ಗುರುತಿಸಿ ಅದಕ್ಕೆ ಪೂರಕವಾದ ಯೋಜನೆಗಳನ್ನು ತಂದಿದ್ದರು.
  • ರೈತರ ಪರವಾಗಿ ರೈತಸ್ನೇಹಿ ಯೋಜನೆಗಳನ್ನು ತಂದದ್ದಕ್ಕಾಗಿ ಅವರ ನೆನಪಿನಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ.

ಉದ್ದೇಶ

  • ಮುಖ್ಯವಾಗಿ ರೈತರು ಸಮಾಜಕ್ಕೆ ನೀಡುವ ಕೊಡುಗೆಯ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದೇ ಈ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ. ರೈತರು ಅತ್ಯಂತ ಕಷ್ಟದ ಸ್ಥಿತಿಯಲ್ಲಿ ಹೇಗೆ ಬೆಳೆ ಬೆಳೆಸುತ್ತಾರೆ, ಅವರ ಬದುಕು ಹೇಗಿದೆ, ಅವರು ಹೇಗೆ ಜೀವನ ನಿರ್ವಹಣೆ ಮಾಡುತ್ತಾರೆ ಎಂಬುದರ ಬಗ್ಗೆ ಶ್ರೀಸಾಮಾನ್ಯನಿಗೆ ಅರಿವು ಮೂಡಿಸುವ ದಿನವಾಗಿದೆ.

ರೈತರ ದಿನದ ಮಹತ್ವ

  • ರೈತರನ್ನು ಗುರುತಿಸಿ ಗೌರವಿಸುವ ನಿಟ್ಟಿನಲ್ಲಿ ರೈತರ ದಿನ ಬಹಳಷ್ಟು ಮಹತ್ವ ಪಡೆದುಕೊಂಡಿದೆ. ರೈತರಲ್ಲಿ ಹೊಸ ಕೃಷಿ ತಂತ್ರಜ್ಞಾನಗಳ ಬಗ್ಗೆ ಅರಿವು ಮೂಡಿಸಲು, ಅವರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರ ಸೂಚಿಸುವುದಕ್ಕಾಗಿಯೂ ಬಳಸಿಕೊಳ್ಳಲಾಗುತ್ತಿದೆ. ಕಡಿಮೆ ಇಳುವರಿ, ಸಾಲದ ಲಭ್ಯತೆ ಇಲ್ಲದಿರುವುದು, ಕಳಪೆ ಮೂಲಸೌಕರ್ಯ ಇತ್ಯಾದಿ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದೊಂದಿಗೆ ಈ ದಿನವನ್ನು ಆಚರಿಸಲಾಗುತ್ತಿದೆ. ರೈತರು ದೇಶಕ್ಕೆ ನೀಡುತ್ತಿರುವ ಕೊಡುಗೆಗೆ ಅವರಿಗೆ ಧನ್ಯವಾದ ಸಮರ್ಪಿಸಲು ಈ ದಿನವನ್ನು ಮಹತ್ವದ್ದೆಂದು ಪರಿಗಣಿಸಲಾಗಿದೆ.

ಚೌಧರಿ ಚರಣ್ ಸಿಂಗ್

  • ಇವರು ಮೀರತ್ ನ ನೂರ್ಪುರ್ ನಲ್ಲಿ 1902ರ ಡಿಸೆಂಬರ್ 23ರಂದು ಜನಿಸಿದರು.
  • ಚೌಧರಿ ಚರಣ್ ಸಿಂಗ್ ಅವರು ಅಲ್ಪಾವಧಿಗೆ ಭಾರತದ ಪ್ರಧಾನ ಮಂತ್ರಿಯಾಗಿದ್ದವರು. ಜುಲೈ 1979ರಲ್ಲಿ ಪ್ರಧಾನಿಯಾಗಿ ಹುದ್ದೆ ವಹಿಸಿ 1980ರ ಜನವರಿಯವರಿಗೆ ಇದ್ದರು.
  • ಜಮೀನ್ದಾರಿ ಪದ್ಧತಿಯನ್ನು ಸ್ಥಗಿತಗೊಳಿಸಿದ್ದ ಅವರು, ರೈತರಿಗೆ ನೆರವಾಗುವುದಕ್ಕಾಗಿ ಭೂಸಂರಕ್ಷಣಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದ್ದರು.
  • ಚೌಧರಿ ಚರಣ್ ಸಿಂಗ್ ಸ್ಮಾರಕವನ್ನು ಕಿಸಾನ್ ಘಾಟ್ ಎಂದು ಕರೆಯಲಾಗುತ್ತದೆ.
  • ಲಕ್ನೊದ ಅಮೌಸಿ ವಿಮಾನ ನಿಲ್ದಾಣವನ್ನು ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ.
  • ಮೀರತ್ ವಿಶ್ವವಿದ್ಯಾಲಯವನ್ನು ಸಹ ಚೌದರಿ ಚರಣ್ ಸಿಂಗ್ ವಿ ವಿ ಎಂದು ಮರು ನಾಮಕರಣ ಮಾಡಲಾಗಿದೆ.