Published on: June 6, 2022

ವಿದ್ಯುತ್ ಅದಾಲತ್

ವಿದ್ಯುತ್ ಅದಾಲತ್

ಸುದ್ಧಿಯಲ್ಲಿ ಏಕಿದೆ?

ರಾಜ್ಯದಲ್ಲಿ ಪ್ರತಿ 3ನೇ ಶನಿವಾರ ವಿದ್ಯುತ್ ಅದಾಲತ್ ನಡೆಸಬೇಕು ಎಂದು ಇಂಧನ ಸಚಿವ ಸುನೀಲ್​ ಕುಮಾರ್​ಅವರು ಸೂಚನೆ ನೀಡಿದ್ದಾರೆ.

ಮುಖ್ಯಾಂಶಗಳು

  • ಯಾವಾಗ? ಪ್ರತಿ ತಿಂಗಳ 3ನೇ ಶನಿವಾರ
  • ಯಾರೆಲ್ಲ ಭಾಗವಹಿಸಬೇಕು? ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಭೇಟಿ ನೀಡಬೇಕು.

ಉದ್ದೇಶ        

  • ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳ ಬಗ್ಗೆ ಅರಿತು, ತಕ್ಷಣ ಪರಿಹಾರ ಮಾಡಲು ಆಂದೋಲನ ರೀತಿಯ ಕಾರ್ಯಕ್ರಮ ರೂಪಿಸಬೇಕು.

ಎಲ್ಲ ಹಳ್ಳಿಗಳಿಗೆ ಭೇಟಿ :

  • ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕರಮಟ್ಟದ ಅಧಿಕಾರಿಗಳಿಂದ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ವರೆಗಿನ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಹೋಗಿ, ಸಮಸ್ಯೆ ಆಲಿಸಿ, ಪರಿಹಾರ ನೀಡಬೇಕು. ಎಲ್ಲರೂ ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡಬೇಕು

ಇ-ಮೇಲ್​ ಮೂಲಕ ಸರ್ಕಾರಕ್ಕೆ ವಿವರ :

  • ವಿವಿಧ ಹಂತದ ಅಧಿಕಾರಿಗಳು ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡಿ, ಅಭಿಯಾನವನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸಬೇಕು. ಅಭಿಯಾನದ ವಿವರಗಳನ್ನು ಪ್ರತಿ ತಿಂಗಳು ನಿಗದಿತ ನಮೂನೆಯಲ್ಲಿ ನಮೂದಿಸಿ, ಮಾಹಿತಿಯನ್ನು ಸಂಬಂಧಪಟ್ಟ ವ್ಯವಸ್ಥಾಪಕ ನಿರ್ದೇಶಕರಿಗೆ ಕಳುಹಿಸಬೇಕು.