Published on: October 19, 2022

ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿ

ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿ

ಸುದ್ದಿಯಲ್ಲಿ ಏಕಿದೆ?

ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಗೆ (ಯುಎನ್‌ಎಚ್‌ಆರ್‌ಸಿ) ಸ್ವತಂತ್ರ ತಜ್ಞೆಯಾಗಿ ಕೋಲಾರ ಜಿಲ್ಲೆಯ ಕಸಬಾ ಕುರುಬರಹಳ್ಳಿ ಗ್ರಾಮದ ದಲಿತ ಯುವತಿ ಡಾ.ಕೆ.ಪಿ.ಅಶ್ವಿನಿ ನೇಮಕವಾಗಿದ್ದಾರೆ.

ಮುಖ್ಯಾಂಶಗಳು

 • ಜಿನೀವಾದಲ್ಲಿ ಮುಕ್ತಾಯವಾದ ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಯ ಅಧಿವೇಶನದಲ್ಲಿ ಅಶ್ವಿನಿ ಅವರ ನೇಮಕವನ್ನು ಅಧಿಕೃತವಾಗಿ ಘೋಷಿಸಲಾಗಿದೆ.  ಜಿನೆವಾದಲ್ಲಿ ನವೆಂಬರ್ 1ರಂದು ಅವರು ಅಧಿಕಾರ ಸ್ವೀಕರಿಸಲಿದ್ದಾರೆ.
 • ಅವರ ಅಧಿಕಾರ ಅವಧಿ ಆರು ವರ್ಷ. ಈ ಹುದ್ದೆಗೆ ನೇಮಕವಾದ ಏಷ್ಯಾ ಮತ್ತು ಭಾರತದ ಮೊದಲ ವ್ಯಕ್ತಿಯಾಗಿದ್ದಾರೆ.
 • ಸ್ವತಂತ್ರ ತಜ್ಞೆಯಾಗಿ ಆಗಿ ಇವರ ಕೆಲಸ :ಜಾಗತಿಕ ಮಟ್ಟದಲ್ಲಿಯ ವರ್ಣಭೇದ ನೀತಿ, ಜನಾಂಗೀಯ ತಾರತಮ್ಯ, ಕ್ಸೆನೋಫೋಬಿಯಾ(ವಿದೇಶಿಯರ ಬಗ್ಗೆ ಭಯ), ಅಸಹಿಷ್ಣುತೆಗೆ ಸಂಬಂಧಿಸಿದ ವಿಷಯಗಳನ್ನು ಇವರು ಸ್ವತಂತ್ರವಾಗಿ ನಿರ್ವಹಿಸಲಿದ್ದಾರೆ. ಈ ಬಗ್ಗೆ ಮಂಡಳಿಗೆ ಕಾಲಕಾಲಕ್ಕೆ ವರದಿ ಹಾಗೂ ಸಲಹೆ ನೀಡಲಿದ್ದಾರೆ.
 • ಜನಾಂಗೀಯತೆಯ ವಿಚಾರದ ಬಗ್ಗೆ 1994ರಿಂದ ಎಸ್‌ಆರ್ ಆಗಿ ನೇಮಕವಾಗಿರುವುದು ಅಶ್ವಿನಿ ಅವರು ಆರನೆಯವರು. ಈ ಮೊದಲು ಎಸ್‌ಆರ್‌ಗಳಾದ ಎಲ್ಲಾ ಐವರೂ ಕೂಡ ಆಫ್ರಿಕನ್ನರು.

ಡಾ.ಕೆ.ಪಿ.ಅಶ್ವಿನಿಯವರ ಬಗ್ಗೆ

 • ಕುರುಬರಹಳ್ಳಿ ಗ್ರಾಮದ ವಿ.ಪ್ರಸನ್ನಕುಮಾರ್ ಹಾಗೂ ಜಯಮ್ಮ ದಂಪತಿ ಪುತ್ರಿಯಾಗಿರುವ ಅಶ್ವಿನಿ ಅವರು ನವದೆಹಲಿಯ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದಿಂದ ಎಂ.ಫಿಲ್., ಪಿಎಚ್.ಡಿ ಪದವಿ ಪಡೆದಿದ್ದಾರೆ.  ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಕೆಲ ಕಾಲ ಉಪನ್ಯಾಸಕಿಯಾಗಿ, ಸೇಂಟ್‌ ಜೋಸೆಫ್ಸ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸಿದ್ದರು.
 • ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಾ ಒಡಿಶಾ ಮತ್ತು ಛತ್ತೀಸಗಡ ರಾಜ್ಯಗಳ ಆದಿವಾಸಿಗಳ ಮೇಲೆ ಅಲ್ಲಿಯ  ಗಣಿಗಾರಿಕೆಯಿಂದ ಆದ ಪರಿಣಾಮಗಳ ಬಗ್ಗೆ ವಿಶೇಷ ಆಧ್ಯಯನ ನಡೆಸಿದ್ದರು.
 • ಝರಿಯಾ: ವುಮೆನ್ಸ್ ಅಲಾಯನ್ಸ್ ಫಾರ್ ಡಿಗ್ನಿಟಿ ಅಂಡ್ ಈಕ್ವಾಲಿಟಿಎಂಬ ಎನ್‌ಜಿಒದ ಸಹ- ಸಂಸ್ಥಾಪಕಿ.

ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿ

 • ಮಾನವ ಹಕ್ಕುಗಳ ಮಂಡಳಿಯು ವಿಶ್ವಸಂಸ್ಥೆಯ ವ್ಯವಸ್ಥೆಯೊಳಗಿನ ಅಂತರ-ಸರ್ಕಾರಿ ಸಂಸ್ಥೆಯಾಗಿದ್ದು, ಪ್ರಪಂಚದಾದ್ಯಂತ ಮಾನವ ಹಕ್ಕುಗಳ ಪ್ರಚಾರ ಮತ್ತು ರಕ್ಷಣೆಯನ್ನು ಬಲಪಡಿಸುವ ಜವಾಬ್ದಾರಿಯನ್ನು ಹೊಂದಿದೆ.

ರಚನೆ

 • ಕೌನ್ಸಿಲ್ ಅನ್ನು 2006 ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ ರಚಿಸಿತು. ಇದು ಹಿಂದಿನ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗವನ್ನು ಬದಲಿಸಿತು.
 • ಮಾನವ ಹಕ್ಕುಗಳ ಹೈ ಕಮಿಷನರ್ ಕಚೇರಿ (OHCHR) ಮಾನವ ಹಕ್ಕುಗಳ ಮಂಡಳಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತದೆ.
 • ಸ್ವಿಟ್ಜರ್ಲೆಂಡ್‌ನ ಜಿನೀವಾದಲ್ಲಿ ಪ್ರಧಾನ ಕಛೇರಿಯನ್ನು ಹೊಂದಿದೆ.