Published on: February 16, 2023
ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ
ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ
Darien ಸುದ್ದಿಯಲ್ಲಿ ಏಕಿದೆ? Seroquel and Quetiapine ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು (ವಿಐಎಸ್‌ಎಲ್) ಮುಚ್ಚುವುದಕ್ಕೆ ತೀರ್ಮಾನಿಸಿರುವ ಕೇಂದ್ರ ಸರ್ಕಾರ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ (ವಿಐಎಸ್ಎಲ್) ಕಾರ್ಯಾಚರಣೆಯನ್ನು ಸಂಪೂರ್ಣ ಸ್ಥಗಿತಗೊಳಿಸಲು ಮುಂದಾಗಿದೆ.
ಮುಖ್ಯಾಂಶಗಳು
- ಕಾರ್ಖಾನೆ ಸ್ಥಗಿತಗೊಳಿಸುವ ಬಗ್ಗೆ SAIL (ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ) ಆಡಳಿತ ಮಂಡಳಿಯಲ್ಲಿ ಪ್ರಸ್ತಾವನೆ ಅಂಗೀಕಾರವಾಗಿದೆ.
- ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ ತಯಾರಾದ ಕಬ್ಬಿಣ ಮತ್ತು ಉಕ್ಕು ದೇಶದ ರಕ್ಷಣಾ ಇಲಾಖೆಗೆ ನೀಡಲಾಗುತ್ತಿತ್ತು. ಅಷ್ಟೊಂದು ಉತೃಷ್ಠವಾದ ಕಬ್ಬಿಣ ಮತ್ತು ಉಕ್ಕು ಇಲ್ಲಿ ತಯಾರಾಗುತ್ತಿತ್ತು.
- ಕಾರ್ಖಾನೆ ಮತ್ತಷ್ಠು ಅಭಿವೃದ್ಧಿ ಕಾಣಲಿ ಎಂದು ರಾಜ್ಯ ಸರ್ಕಾರ 1989-90 ರಲ್ಲಿ ಕೇಂದ್ರ ಸರ್ಕಾರ ಮತ್ತು ಭಾರತೀಯ ಉಕ್ಕು ಪ್ರಾಧಿಕಾರಕ್ಕೆ ಕೇವಲ 1 ರೂಪಾಯಿಗೆ ಕಾರ್ಖಾನೆ ಸೇರಿದಂತೆ ಅದರ ಎಲ್ಲಾ ಆಸ್ತಿಗಳನ್ನು ನೀಡಿತ್ತು.
ಕಾರಣ
- ನಷ್ಟದಲ್ಲಿರುವ ಕಾರ್ಖಾನೆಯನ್ನು ಸರ್ಕಾರ ಖಾಸಗೀಕರಣಗೊಳಿಸಲು ಯೋಜಿಸಿತ್ತು. ಅದರಂತೆ 2019 ರ ಜುಲೈನಲ್ಲಿ ಕಾರ್ಖಾನೆಯ ಎಲ್ಲ ಪಾಲನ್ನು ಮಾರಾಟ ಮಾಡಲು ಟೆಂಡರ್ ಕರೆಯಲಾಗಿತ್ತು. ಆದರೆ, ನಷ್ಟದಲ್ಲಿರುವ ಘಟಕವನ್ನು ಮುನ್ನಡೆಸಲು ಯಾರೂ ಮುಂದೆ ಬರಲಿಲ್ಲ. ಹೀಗಾಗಿ ಘಟಕವನ್ನು ಬಂದ್ ಮಾಡಲಾಗುವುದು ಎಂದು ತಿಳಿಸಿದರು. ಹಳೆಯ ಯಂತ್ರೋಪಕರಣಗಳು, ನಿರಂತರ ನಷ್ಟ, ದೀರ್ಘಕಾಲದವರೆಗೆ ಇಲ್ಲಿನ ಯಂತ್ರಗಳು ಸ್ಥಗಿತಗೊಂಡಿರುವ ಕಾರಣ, ಘಟಕ ಅನುತ್ಪಾದಿತವಾಗಿದೆ.
ಕಾರ್ಖಾನೆಯ ವಿವರ
- ಕರ್ನಾಟಕ ರಾಜ್ಯದ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿದೆ. ಇದನ್ನು ಮೈಸೂರು ಐರನ್ ವರ್ಕ್ಸ್ ಎಂದು 1923 ರಲ್ಲಿ ಪ್ರಾರಂಭಿಸಲಾಯಿತು. ಕಾರ್ಖಾನೆಯಲ್ಲಿ 19 ಸಾವಿರಕ್ಕೂ ಹೆಚ್ಚು ಕಾರ್ಮಿಕರಿದ್ದರು. 100 ವರ್ಷದ ಇತಿಹಾಸ ಇರುವ ಕಾರ್ಖಾನೆಯನ್ನು ಉಳಿಸಿಕೊಳ್ಳಲು ಕಾರ್ಮಿಕರು ಹಲವು ಹೋರಾಟಗಳನ್ನು ಮಾಡಿದ್ದರು
- ಭದ್ರಾವತಿ ಕಬ್ಬಿಣ ಉಕ್ಕಿನ ಕಾರ್ಖಾನೆಯನ್ನು ಅಂದು ಸರ್.ಎಂ.ವಿಶ್ವೇಶ್ವರಯ್ಯ ಅವರ ಸಲಹೆ ಮೇರೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ್ದರು.