Published on: November 6, 2021
ಶಂಕರಾಚಾರ್ಯ ಪ್ರತಿಮೆ
ಶಂಕರಾಚಾರ್ಯ ಪ್ರತಿಮೆ
ಸುದ್ಧಿಯಲ್ಲಿ ಏಕಿದೆ? ಉತ್ತರಾಖಂಡದ ಕೇದಾರನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ ಆದಿಗುರು ಶಂಕರಾಚಾರ್ಯ ಅವರ ಸುಂದರ ಪುತ್ಥಳಿಯನ್ನು ಕೆತ್ತಿದ್ದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್.
ಹಿನ್ನಲೆ
- 2013ರಲ್ಲಿ ಉತ್ತರಾಖಂಡದಲ್ಲಿ ಭಾರಿ ಪ್ರವಾಹ ಉಂಟಾಗಿ ಕೇದಾರನಾಥದಲ್ಲಿರುವ ಆದಿ ಶಂಕರಾಚಾರ್ಯರ ಸಮಾಧಿ ಕೊಚ್ಚಿಹೋಗಿತ್ತು. ನಂತರ ಅದರ ಮರುನಿರ್ಮಾಣದ ಭಾಗವಾಗಿ ಕೇಂದ್ರ ಹಾಗೂ ಉತ್ತರಾಖಂಡ ಸರ್ಕಾರಗಳು ಜಂಟಿಯಾಗಿ ಕೇದಾರೇಶ್ವರ ದೇವಾಲಯದ ಹಿಂಭಾಗದಲ್ಲಿ ಶಂಕರಾಚಾರ್ಯರ ಸಮಾಧಿ ಸ್ಥಳದಲ್ಲಿ ಪುತ್ಥಳಿ ಸ್ಥಾಪಿಸಿವೆ.
- ಶಂಕರಾಚಾರ್ಯರ ಪುತ್ಥಳಿ 12 ಅಡಿ ಎತ್ತರವಿದ್ದು, ಕುಳಿತ ಭಂಗಿಯಲ್ಲಿದೆ. 28 ಟನ್ ತೂಕದ ಪುತ್ಥಳಿ ಕೆತ್ತಲು ಹೆಗ್ಗಡದೇವನಕೋಟೆಯಿಂದ ತರಲಾದ 120 ಟನ್‌ನ ಕೃಷ್ಣಶಿಲೆ ಬಳಸಲಾಗಿದೆ.
- ಈ ಕಲ್ಲು ಮಳೆ, ಗಾಳಿ, ಬಿಸಿಲು ಹಾಗೂ ಕಠಿಣ ಹವಾಮಾನವನ್ನು ತಾಳಿಕೊಳ್ಳುವ ಸಾಮರ್ಥ್ಯ ಹೊಂದಿದೆ. ಪುತ್ಥಳಿಗೆ ಹೊಳಪು ಬರಲು ತೆಂಗಿನಕಾಯಿಯ ನೀರಿನಿಂದ ಪಾಲಿಶ್ ಮಾಡಲಾಗಿದೆ.