ಸಾಹಿತಿ ಸಾರಾ ಅಬೂಬಕ್ಕರ
ಸಾಹಿತಿ ಸಾರಾ ಅಬೂಬಕ್ಕರ
ಸುದ್ದಿಯಲ್ಲಿ ಏಕಿದೆ? ಕನ್ನಡದ ಹೆಸರಾಂತ ಸಾಹಿತಿ ಸಾರಾ ಅಬೂಬಕ್ಕರ್ (87) ವಯೋಸಹಜ ಕಾರಣಗಳಿಂದ
ನಿಧನ ಹೊಂದಿದ್ದಾರೆ
ಸಾರಾ ಅಬೂಬಕ್ಕರ್
• ಇವರು ಕಾಸರಗೋಡಿನ ಚಂದ್ರಗಿರಿ ತೀರದ ‘ಪುದಿಯಾ ಪುರ್ (ಹೊಸಮನೆ) ತರವಾಡು ಮನೆಯಲ್ಲಿ 1936ರಲ್ಲಿ ಜನಿಸಿದ್ದರು. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದರು. ಕಾಸರಗೋಡಿನಲ್ಲಿ ಹೈಸ್ಕೂಲ್‌ವರೆಗೆ ಶಿಕ್ಷಣ ಪಡೆದರು. ಅರೆಬಿಕ್ ಕಲಿತಿದ್ದ ಅಜ್ಜಿ ಹೇಳುತ್ತಿದ್ದ ಕಥೆಗಳಿಂದ ಆಕರ್ಷಿತರಾಗಿ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದರು.
• ಮಹಿಳಾ ಸಮಾನತೆ, ಮಹಿಳಾ ಸಬಲೀಕರಣದ ಚಿಂತನೆ ಹೊಂದಿರುವ ಇವರು ಬಳಿಕ ಬರಹಗಾರರಾಗಿ ಜನಪ್ರಿಯರಾದರು.
• ಮಲಯಾಳ ಭಾಷೆಯಿಂದ ಕನ್ನಡಕ್ಕೆ ಅನೇಕ ಕೃತಿಗಳನ್ನು ಅನುವಾದಿಸಿದ್ದರು.
• ಸದಾ ಧಾರ್ಮಿಕ ಮೂಲಭೂತವಾದದ ವಿರುದ್ಧ ಧ್ವನಿ ಎತ್ತುತ್ತಿದ್ದ ಸಾರಾ, ಸ್ತ್ರೀ ಸಬಲೀಕರಣ ಹೋರಾಟದಲ್ಲೂ ಮುಂಚೂಣಿಯಲ್ಲಿದ್ದರು. ಹೆಣ್ಣುಮಕ್ಕಳು ವಿದ್ಯಾಭ್ಯಾಸ ಪಡೆದು ಸಬಲರಾಗಬೇಕು ಎಂಬ ಆಶಯ ಹೊಂದಿದ್ದ ಅವರು, ತಮ್ಮ ಕೃತಿಗಳಲ್ಲೂ ಇದನ್ನು ಬಲವಾಗಿ ಪ್ರತಿಪಾದಿಸಿದ್ದರು.
• ಅವರ ಆತ್ಮಕತೆ: ‘ಹೊತ್ತು ಕಂತುವ ಮುನ್ನ’
• ಕೃತಿಗಳು: ಚಂದ್ರಗಿರಿಯ ತೀರದಲ್ಲಿ, ಸಹನಾ, ವಜ್ರಗಳು, ಕದನವಿರಾಮ, ಸುಳಿಯಲ್ಲಿ ಸಿಕ್ಕವರು, ಪ್ರವಾಹ-ಸುಳಿ (ಸುಳಿಯಲ್ಲಿ ಸಿಕ್ಕವರು ಕೃತಿಯ ಭಾಗ-೨), ತಳ ಒಡೆದ ದೋಣಿ, ಪಂಜರ, ಇಳಿಜಾರು, ಕಾಣಿಕೆ
• 1984ರಲ್ಲಿ ರಚಿಸಿದ ಮೊದಲ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ ಮೂಲಕ ಖ್ಯಾತರಾಗಿದ್ದರು. ಇದು ಹಿಂದಿ, ತಮಿಳು, ತೆಲುಗು, ಮರಾಠಿ ಮತ್ತು ಒಡಿಯಾ ಭಾಷೆಗೆ ಅನುವಾದವಾಗಿದೆ. ಅನೇಕ ವಿಶ್ವವಿದ್ಯಾಲಯಗಳಲ್ಲಿ ಪಠ್ಯವಾಗಿತ್ತು.
• ಪ್ರಮುಖ ಕತೆಗಳು : ಚಪ್ಪಲಿಗಳು, ಪಯಣ, ಅರ್ಧರಾತ್ರಿಯಲ್ಲಿ ಹುಟ್ಟಿದ ಕೂಸು, ಖೆಡ್ಡ , ಸುಮಯ್ಯಾ, ಗಗನ ಸಖಿ
• ಪ್ರಮುಖ ಬಾನುಲಿ ನಾಟಕಗಳು: ಕಮರಿದ ಕನಸು, ಮಗಳು ಹುಟ್ಟಿದಳು, ತೇಲಾಡುವ ಮೋಡಗಳು, ತಾಳ
ಸಾರಾ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ’ ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ, ‘ಸಹನಾ’ ಕಾದಂಬರಿಗೆ ವರ್ಧಮಾನ ಪ್ರಶಸ್ತಿ, ‘ಸುಳಿಯಲ್ಲಿ ಸಿಕ್ಕವರು’ ಕೃತಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ ಹಾಗೂ ಸಂದೇಶ ಪ್ರಶಸ್ತಿ, ಅನುಪಮ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಮುಂತಾದ ಹಲವಾರು ಪ್ರಮುಖ ಪ್ರಶಸ್ತಿ ಗೌರವಗಳು ಸಂದಿವೆ.