Published on: January 4, 2023
ಸಿದ್ದೇಶ್ವರ ಶ್ರೀಗಳು
ಸಿದ್ದೇಶ್ವರ ಶ್ರೀಗಳು
ಸುದ್ದಿಯಲ್ಲಿ ಏಕಿದೆ? ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಜ.02 ರಂದು ಸಂಜೆ ಲಿಂಗೈಕ್ಯರಾಗಿದ್ದು ಅವರ ಅಂತ್ಯಕ್ರಿಯೆ ಆಶ್ರಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.
ಶ್ರೀ ಸಿದ್ದೇಶ್ವರ ಸ್ವಾಮಿಜಿ ಬಗ್ಗೆ ಮಾಹಿತಿ
- ಜನನ : ವಿಜಯಪುರ ಜೀವಂತ ದೇವರು ಎಂದು ಪ್ರಸಿದ್ಧರಾದ ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಸ್ವಾಮಿಜಿ ಅವರು ಕರ್ನಾಟಕ ರಾಜ್ಯ ವಿಜಯಪುರ ಜಿಲ್ಲೆ ಬಿಜ್ಜರಗಿ ಗ್ರಾಮದ ಸಾಮಾನ್ಯ ರೈತ ಕುಟುಂಬದಲ್ಲಿ 1941 ಅಕ್ಟೋಬರ್ 24 ರಂದು ಜನಿಸಿದರು. ಇವರ ಪೂರ್ವಾಶ್ರಮದ ಹೆಸರು ಸಿದ್ದಗೊಂಡಪ್ಪ
ವಿದ್ಯಾಭ್ಯಾಸ:
- ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಾಸು ಮಾಡಿದರು.
- ಆ ಅವಧಿಯಲ್ಲಿಯೇ ತಮ್ಮ ಗುರುಗಳಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ “ಸಿದ್ದಾಂತ ಶಿಖಾಮಣಿ “ಎಂಬ ಪುಸ್ತಕ ಬರೆದು ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದರು.ಆಗ ಅವರಿಗೆ ಕೇವಲ 19 ವರ್ಷ.
- ಅವರ ಉಪನ್ಯಾಸ ಸರಣಿಯ “ಬದುಕುವದು ಹೇಗೆ,” ನಾವು ಹೇಗೆ ಬದುಕಬೇಕು / ದಾರಿ ಮಾಡಿಕೊಳ್ಳಬೇಕು “ಲಕ್ಷಾಂತರ ಭಾರತೀಯರನ್ನು ರೂಪಾಂತರಿಸಿದೆ.
- ಭಾರತದ ಸಂತರು ಮತ್ತು ಸಿಯರ್ಸ್ ಕೃತಿಗಳ ಆಧಾರದ ಮೇಲೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ.
ಪ್ರಚವನಗಳ ಮೂಲಕ ಪ್ರಸಿದ್ಧಿ
- ಸಿದ್ದೇಶ್ವರ ಶ್ರೀಗಳು ಉಪನಿಷತ್ತುಗಳು, ಭಗವದ್ಗೀತೆ, ಯೋಗಸೂತ್ರ, ವಚನಶಾಸ್ತ್ರ ಮುಂತಾದ ವಿಷಯಗಳ ಬಗೆಗೆ ಸಾವಿರಾರು ಪ್ರವಚನ ಮಾಡಿದ್ದಾರೆ. ತಾವು ಗುರುಗಳಿಂದ ಕಲಿತ ಜ್ಞಾನವನ್ನು ಬಳಸಿಕೊಂಡು ಬೋಧಪ್ರದ ಪ್ರವಚನಗಳನ್ನು ನೀಡುತ್ತಿದ್ದಾರೆ. ಗಹನವಾದ ವೇದಾಂತ ತತ್ವಗಳನ್ನು ಅತ್ಯಂತ ಸರಳವಾಗಿ ಜನಮಾನಸದಲ್ಲಿ ಉಳಿಯುವಂತೆ ವಿವರಿಸುವುದು ಅವರ ವೈಶಿಷ್ಟ್ಯವಾಗಿದೆ.
ಪ್ರಶಸ್ತಿಗಳ ನಿರಾಕರಣೆ :
ಅವರ ನಿಸ್ವಾರ್ಥ ಸೇವೆಯನ್ನು ಕಂಡು ಕೇಂದ್ರ ಸರ್ಕಾರ ಎರಡನೇ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಯಾದ ಪದ್ಮಶ್ರೀ, ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಹೀಗೆ ತಮಗೆ ಸಂದ ಎಷ್ಟೋ ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಅವರು ವಿನಮೃವಾಗಿಯೇ ನಿರಾಕರಿಸಿದ್ದರು.