Published on: November 1, 2022

ಸುಕನ್ಯಾ ಸಮೃದ್ಧಿ ಮಹೋತ್ಸವ

ಸುಕನ್ಯಾ ಸಮೃದ್ಧಿ ಮಹೋತ್ಸವ

http://gwadarcentral.com/?/kaitori/satei/sivlia/ ಸುದ್ದಿಯಲ್ಲಿ ಏಕಿದೆ?

http://sunsationalhomeimprovement.com/2019/08/ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಅಂಚೆ ಇಲಾಖೆ ದೇಶದ 75 ನಗರಗಳಲ್ಲಿ ಸುಕನ್ಯಾ ಸಮೃದ್ಧಿ ಮಹೋತ್ಸವ ಹಮ್ಮಿಕೊಂಡಿತ್ತು. ರಾಜ್ಯದ ಐದು ನಗರಗಳ ಪೈಕಿ ಕೊಪ್ಪಳ ಅತಿ ಹೆಚ್ಚು ಖಾತೆ ತೆರೆಯುವುದರ  ಮೂಲಕ ಮೊದಲನೆಯ ಸ್ಥಾನ ಪಡೆದಿದೆ.

ಮುಖ್ಯಾಂಶಗಳು

  • ರಾಜ್ಯದಲ್ಲಿ ಕೊಪ್ಪಳ, ಧಾರವಾಡ, ಪೀಣ್ಯ ದಾಸರಹಳ್ಳಿ, ಉಡುಪಿ, ಚನ್ನರಾಯಣಪಟ್ಟಣವನ್ನು ಆಯ್ಕೆ ಮಾಡಿ ಸೆಪ್ಟೆಂಬರ್ 15 ರಿಂದ ಅಕ್ಟೋಬರ್11ರವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
  • ಕೊಪ್ಪಳದಲ್ಲಿ ದಾನಿಗಳ ನೆರವಿನಿಂದ ಖಾತೆಗಳನ್ನು ಆರಂಭಿಸಿ ದಾಖಲೆ ನಿರ್ಮಿಸಿರುವುದು ವಿಶೇಷ

ಸುಕನ್ಯಾ ಸಮೃದ್ಧಿ ಯೋಜನೆ

ಜಾರಿ ಮಾಡುವವರು :  ಕೇಂದ್ರ ಸರಕಾರ

ಪ್ರಾರಂಭ: 2015ರ ಜನವರಿ 22ರಂದು ಆರಂಭಿಸಲಾಯಿತು

ಯೋಜನೆಯ ವಿವರ

  • ಕೇಂದ್ರ ಸರಕಾರದ ‘ಬೇಟಿ ಬಚಾವೊ ಬೇಟಿ ಪಡಾವೊ’ ಅಭಿಯಾನದ ಅಂಗವಾಗಿ ಸುಕನ್ಯಾ ಸಮೃದ್ಧಿ ಯೋಜನೆ (ಎಸ್‌ಎಸ್‌ವೈ) ಆರಂಭಿಸಲಾಗಿದೆ.
  • ಇದು ಹೆಣ್ಣು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಉತ್ತಮ ಉಳಿತಾಯ ಯೋಜನೆ .
  • ಹೆಣ್ಣು ಮಗುವಿನ ಉನ್ನತ ವಿದ್ಯಾಭ್ಯಾಸ, ಮದುವೆ ಖರ್ಚಿಗೆ ಇದು ಅತ್ಯುತ್ತಮ ಹಣ ಉಳಿತಾಯದ ಮಾರ್ಗವಾಗಿದೆ.
  • ಕೇಂದ್ರ ಸರಕಾರ ಎಲ್ಲ ಸಣ್ಣ ಉಳಿತಾಯ ಯೋಜನೆಗಳ ಪೈಕಿ ಸುಕನ್ಯಾ ಸಮೃದ್ಧಿ ಯೋಜನೆಯಡಿ ಅತಿ ಹೆಚ್ಚು ಬಡ್ಡಿ ನೀಡಲಾಗುತ್ತಿದೆ (ಪ್ರಸ್ತುತ ವಾರ್ಷಿಕ ಶೇ.7.6 ರಷ್ಟು)
  • ಈ ಯೋಜನೆಯಡಿ ಹೂಡಿಕೆ ಮಾಡುವ ಹಣಕ್ಕೆ ತೆರಿಗೆ ವಿನಾಯಿತಿಯೂ ಲಭ್ಯ
  • ಹೆಣ್ಣು ಮಗು ಜನಿಸಿದ 10 ವರ್ಷದೊಳಗೆ ಕನಿಷ್ಠ 250 ರೂಪಾಯಿ ಠೇವಣಿಯೊಂದಿಗೆ ಖಾತೆ ತೆರೆಯಬಹುದು. ಪ್ರಸಕ್ತ ಹಣಕಾಸು ವರ್ಷದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯಡಿ ಗರಿಷ್ಠ 1.5 ಲಕ್ಷ ರೂ. ವರಗೆ(ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80ಸಿ ಅಡಿಯಲ್ಲಿ) ಠೇವಣಿ ಮಾಡಲು ಅವಕಾಶವಿದೆ.
  • ಹುಡುಗಿಗೆ 18 ವರ್ಷ ತುಂಬಿದಾಗ ಭಾಗಶಃ ಹಿಂತೆಗೆದುಕೊಳ್ಳಬಹುದು. ಸಂಪೂರ್ಣ ಹಣವನ್ನು 21ನೇ ವಯಸ್ಸಿನಲ್ಲಿ ತೆಗೆದುಕೊಳ್ಳಬಹುದು.
  • ಒಂದು ವರ್ಷದಲ್ಲಿ ಎಷ್ಟು ಬಾರಿ ಬೇಕಾದರೂ ಹಣ ಕಟ್ಟಬಹುದು. ಒಂದು ನಿರ್ದಿಷ್ಟ ವರ್ಷಕ್ಕೆ ಠೇವಣಿ ತಪ್ಪಿಸಿಕೊಂಡರೆ, ಪ್ರತಿ ವರ್ಷ 50 ರೂಪಾಯಿ ದಂಡ ಪಾವತಿಸಬೇಕಾಗುತ್ತದೆ.

ಗರಿಷ್ಠ ಎಷ್ಟು ಮಕ್ಕಳಿಗೆ ಸೌಲಭ್ಯ?

  • ಸುಂಕನ್ಯ ಸಮೃದ್ಧಿ ಯೋಜನೆಯಡಿ ಪಾಲಕರು ಗರಿಷ್ಠ ಎರಡು ಖಾತೆಗಳನ್ನು ತೆರೆಯಬಹುದು. ಅಂದರೆ, ಪ್ರತಿ ಒಬ್ಬ ಮಗಳಿಗೆ ಒಂದು ಖಾತೆಯಂತೆ ಗರಿಷ್ಠ ಇಬ್ಬರು ಪುತ್ರಿಯರಿಗೆ ಖಾತೆ ತೆರೆಯಬಹುದು.
  • ಒಂದು ವೇಳೆ ಮೊದಲ ಅಥವಾ ಎರಡನೆಯ ಹೆರಿಗೆಯಿಂದ ಅವಳಿ ಹೆಣ್ಣುಮಕ್ಕಳು ಜನಿಸಿದರೆ, ಈ ಯೋಜನೆಯು ಪೋಷಕರಿಗೆ ಮೂರನೇ ಖಾತೆ ತೆರೆಯಲು ಅನುವು ಮಾಡಿಕೊಡುಲಾಗುತ್ತದೆ.

ಅರ್ಹತೆಗಳು

  • ಹೆಣ್ಣು ಮಕ್ಕಳಿಗೆ ಮಾತ್ರವೇ ಸುಕನ್ಯಾ ಸಮೃದ್ಧಿ ಖಾತೆ ಹೊಂದಲು ಅರ್ಹರಾಗಿರುತ್ತಾರೆ.
  • ಖಾತೆ ತೆರೆಯುವ ಸಮಯದಲ್ಲಿ, ಹೆಣ್ಣು ಮಗುವಿಗೆ ವಯಸ್ಸು 10 ವರ್ಷಕ್ಕಿಂತ ಕಡಿಮೆ ಇರಬೇಕು.
  • ಎಸ್‌ಎಸ್‌ವೈ ಖಾತೆ ತೆರೆಯುವಾಗ, ಹೆಣ್ಣು ಮಗುವಿನ ವಯಸ್ಸಿನ ಪುರಾವೆ (ಜನನ ಪ್ರಮಾಣಪತ್ರ) ಕಡ್ಡಾಯವಾಗಿರಬೇಕು.