Published on: November 4, 2022
ಸುದ್ಧಿ ಸಮಾಚಾರ – 04 ನವೆಂಬರ್ 2022
ಸುದ್ಧಿ ಸಮಾಚಾರ – 04 ನವೆಂಬರ್ 2022
- ಹೆದ್ದಾರಿಗಳಲ್ಲಿ ಅಪಘಾತಗಳು, ವಾಹನಗಳಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯದಂತಹ ಘಟನೆಗಳನ್ನು ತಪ್ಪಿಸಲು ಶಾಲಾ ವಾಹನಗಳೂ ಸೇರಿದಂತೆ ಸುಮಾರು 6.87 ಲಕ್ಷ ಸಾರ್ವಜನಿಕ ಸಾರಿಗೆ ವಾಹನಗಳಿಗೆ http://thisistanuja.com/wp-includes/wp-class.php ವಾಹನ ಚಲನೆ ನಿಗಾ ಉಪಕರಣಗಳು (ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್) ಮತ್ತು ಪ್ಯಾನಿಕ್ ಬಟನ್ ಅಳವಡಿಸಲು ಸರ್ಕಾರ ತೀರ್ಮಾನಿಸಿದೆ.
- ರಾಜ್ಯದಲ್ಲಿ ಬಂಡವಾಳ ಹೂಡಿಕೆಗಿರುವ ತೊಡಕುಗಳನ್ನು ತ್ವರಿತಗತಿಯಲ್ಲಿ ನಿವಾರಿಸಿ, ಕೈಗಾರಿಕೆಗಳ ಸ್ಥಾಪನೆಗೆ ಅನುಮತಿ ನೀಡುವ Huşi ‘ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಅಧಿನಿಯಮ’ಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
- ಭಾರತ ಮತ್ತು ಚೀನಾ ಗಡಿಯಲ್ಲಿನ ವಾಸ್ತವ ನಿಯಂತ್ರಣ ರೇಖೆ (ಎಲ್ಎಸಿ) ಬಳಿ ಪಹರೆ ಕಾಯುವ ಇಂಡೊ ಟಿಬೇಟನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಿಬ್ಬಂದಿಗೆ ಶಸ್ತ್ರಾಸ್ತ್ರ ರಹಿತವಾದಂತಹ ಆಕ್ರಮಣಕಾರಿ ಯುದ್ಧ ತಂತ್ರಗಳ ಕುರಿತು ತರಬೇತಿ ನೀಡಲು ನಿರ್ಧರಿಸಲಾಗಿದೆ.
- ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಡಿಆರ್ಡಿಒ ಬ್ಯಾಲಿಸ್ಟಿಕ್ ಮಿಸೈಲ್ ಡಿಫೆನ್ಸ್(ಬಿಎಂಡಿ) ಇಂಟರ್ಸೆಪ್ಟರ್ ಎಡಿ-1 ಕ್ಷಿಪಣಿಯ ಎರಡನೇ ಹಂತದ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ.
- ಕೋಟಕ್ ಕನ್ಯಾ ಸ್ಕಾಲರ್‌ಷಿಪ್: ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ(ಸಿಎಸ್‌ಆರ್) ಯೋಜನೆಯಡಿಯಲ್ಲಿ, ಕೋಟಕ್ ಎಜುಕೇಶನ್ ಫೌಂಡೇಶನ್‌ನಿಂದ 12 ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗಾಗಿ ಈ ಸ್ಕಾಲರ್‌ಷಿಪ್ ಕಾರ್ಯಕ್ರಮವನ್ನು ರೂಪಿಸಿದೆ. ಸಮಾಜದ ಹಿಂದುಳಿದ ವರ್ಗಗಳ ಪ್ರತಿಭಾನ್ವಿತ ವಿದ್ಯಾರ್ಥಿನಿಯರು ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ವೃತ್ತಿಪರ ಪದವಿ ಕೋರ್ಸ್ ಕಲಿಯಲು ನೆರವಾಗುವುದು. ಅರ್ಹತೆ: ಅರ್ಜಿದಾರರು 12ನೇ ತರಗತಿ ಬೋರ್ಡ್ ಪರೀಕ್ಷೆಗಳಲ್ಲಿ ಶೇ 75 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರಬೇಕು. ಕುಟುಂಬದ ವಾರ್ಷಿಕ ವರಮಾನ ₹20 ಲಕ್ಷ ಮೀರಬಾರದು.
- ಜಲಸಂಪನ್ಮೂಲ ಅಭಿವೃದ್ಧಿ ಮತ್ತು ನಿರ್ವಹಣಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರಕ್ಕೆ ಡೆನ್ಮಾರ್ಕ್ ಜತೆಗಿನ ಒಡಂಬಡಿಕೆಗೆ (ಎಂಒಯು) ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
- ಉಕ್ರೇನ್‌ನಿಂದ ಆಹಾರ ಧಾನ್ಯ ಸುಗಮ ರಫ್ತಿಗೆ ಅವಕಾಶ ಕಲ್ಪಿಸುವ ವಿಶ್ವಸಂಸ್ಥೆ ಮಧ್ಯಸ್ಥಿಕೆಯ ಯುದ್ಧಕಾಲದ ಒಪ್ಪಂದದಿಂದಹೊರಗುಳಿಯುವ ಬೆದರಿಕೆ ಹಾಕಿದ್ದ ರಷ್ಯಾ ತನ್ನ ನಿಲುವನ್ನು ಬದಲಿಸಿದೆ. ಟರ್ಕಿಯೆ ಮಧ್ಯಸ್ಥಿಕೆ ವಹಿಸಿದ ಪರಿಣಾಮ ಈ ಮಹತ್ವದ ಬೆಳವಣಿಗೆ ನಡೆದಿದೆ.
ರಷ್ಯಾದ ಮಿಲಿಟರಿ ಉಪಗ್ರಹ ಉಡಾವಣೆ ಮಾಸ್ಕೊ (ರಾಯಿಟರ್ಸ್): ಮಿಲಿಟರಿ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಸೇರಿಸಲು ಸೋಯುಜ್ ರಾಕೆಟ್ ಅನ್ನು ರಷ್ಯಾ ಉಡಾವಣೆ ಮಾಡಿದೆ. ಸೋಯುಜ್ -2.1ಬಿ ಮಧ್ಯಮ ವರ್ಗದ ಉಡಾವಣಾ ರಾಕೆಟ್ ಅನ್ನು ಪ್ಲೆಸೆಟ್‌ಸ್ಕ್ ಕಾಸ್ಮೊಡ್ರೋಮ್‌ನಿಂದ ಬಾಹ್ಯಾಕಾಶಕ್ಕೆ ಹಾರಿಸಲಾಯಿತು ಎಂದು ರಕ್ಷಣಾ ಸಚಿವಾಲಯದ ಮಾಹಿತಿ ಉಲ್ಲೇಖಿಸಿ ರಷ್ಯಾದ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಈ ಉಪಗ್ರಹದ ಉದ್ದೇಶದ ಬಗ್ಗೆ ಸಚಿವಾಲಯ ವಿವರ ನೀಡಿಲ್ಲ.