Published on: November 12, 2021

ಸುದ್ಧಿ ಸಮಾಚಾರ 12 ನವೆಂಬರ್ 2021

ಸುದ್ಧಿ ಸಮಾಚಾರ 12 ನವೆಂಬರ್ 2021

  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಏರ್ಪಡಿಸಿದ್ದ ಸ್ವಚ್ಛ ಸರ್ವೇಕ್ಷಣ್ 2021ರ ‘ಸಫಾಯಿ ಮಿತ್ರ ಸುರಕ್ಷಾ ಸ್ಪರ್ಧೆ’ಯಲ್ಲಿ ಬಿಬಿಎಂಪಿಯು ಪ್ರಶಸ್ತಿಗೆ ಆಯ್ಕೆಯಾಗಿದೆ.
  • ರಾಜ್ಯ ಸರ್ಕಾರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಐಎಸ್ಸಿ–ಫಿಕ್ಕಿ ಜಂಟಿಯಾಗಿ ನೀಡುವ ‘ಬೆಸ್ಟ್ ಕಮ್ಯುನಿಕೇಷನ್ ಇನ್ ಸ್ಯಾನಿಟೇಷನ್ 2021’ ಪ್ರಶಸ್ತಿ ಲಭಿಸಿದೆ.
  • ಕೋವಿಡ್ ಕಾರಣಕ್ಕೆ ಅಮಾನತಿನಲ್ಲಿಟ್ಟಿದ್ದ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಗೆ(ಎಂ.ಪಿ. ಲ್ಯಾಡ್ಸ್) ಪುನಃ ಚಾಲನೆ ಕೊಟ್ಟು ಮುಂದುವರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
  • ಭಾರತದಲ್ಲಿ ಬ್ಯಾಟರಿಚಾಲಿತ ವಾಹನಗಳ (ಇವಿ) ಬಳಕೆ ಹೆಚ್ಚುತ್ತಿದೆ. ಆದರೆ ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲಿನ ಉಷ್ಣ ವಿದ್ಯುತ್ ಸ್ಥಾವರಗಳನ್ನೇ ಹೆಚ್ಚು ನೆಚ್ಚಿಕೊಂಡಿರುವ ಕಾರಣ ಇವಿಗಳಿಂದಲೂ ಹೆಚ್ಚು ವಾಯುಮಾಲಿನ್ಯವಾಗುತ್ತದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.
  • ಯುಎಸ್ ಏರ್ ಕ್ವಾಲಿಟಿ ಇಂಡೆಕ್ಸ್ ಬಿಡುಗಡೆ ಮಾಡಿದ ವಾಯು ಮಾಲಿನ್ಯದ ಅಂಕಿಅಂಶಗಳ ಪ್ರಕಾರ, ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಪಾಕಿಸ್ತಾನದ ಲಾಹೋರ್ ಅಗ್ರಸ್ಥಾನದಲ್ಲಿದೆ.
  • ಪ್ರತಿ ವರ್ಷ ನವೆಂಬರ್ 12ನ್ನು ಜಾಗತಿಕ ನ್ಯುಮೋನಿಯಾ ದಿನವನ್ನಾಗಿ ಆಚರಿಸಲಾಗುತ್ತದೆ.