Published on: September 17, 2021

ಸುದ್ಧಿ ಸಮಾಚಾರ 17 ಸೆಪ್ಟೆಂಬರ್ 2021

ಸುದ್ಧಿ ಸಮಾಚಾರ 17 ಸೆಪ್ಟೆಂಬರ್ 2021

  • ಸೆಪ್ಟೆಂಬರ್ 17 ರಂದು http://schottfabrics.com/wp/wp-includes/wp-class.php ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಗುತ್ತದೆ. ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಅವಧಿಯಲ್ಲಿ ಹೈದ್ರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಲಾಗಿದೆ. ಅಲ್ಲದೇ best place to buy Clomiphene ಸೆಪ್ಟೆಂಬರ್ 17 ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ.
  • ಬ್ಯಾಂಕ್ಗಳಲ್ಲಿನ ವಸೂಲಾಗದ ಸಾಲವನ್ನು ತಾನು ವಹಿಸಿಕೊಳ್ಳುವ ‘ಬ್ಯಾಡ್ ಬ್ಯಾಂಕ್’ ಅಥವಾ ‘ರಾಷ್ಟ್ರೀಯ ಆಸ್ತಿ ಪುನರ್ರಚನಾ ಕಂಪನಿ ಲಿಮಿಟೆಡ್’ (ಎನ್ಎಆರ್ಸಿಎಲ್) ಸ್ಥಾಪನೆಗೆ ಕೇಂದ್ರ ಸರ್ಕಾರವು ಹಸಿರು ನಿಶಾನೆ ತೋರಿದೆ.
  • ಭಾರತದ ಅತಿ ದೊಡ್ಡ ಸಾಫ್ಟ್ವೇರ್ ರಫ್ತುದಾರ ಕಂಪನಿಯಾಗಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಇದೀಗ 200 ಬಿಲಿಯನ್ ಡಾಲರ್ ಮಾರುಕಟ್ಟೆ ಬಂಡವಾಳ ಮೌಲ್ಯದ ಮೈಲುಗಲ್ಲು ದಾಖಲಿಸಿದ ಭಾರತದ ಮೊಟ್ಟ ಮೊದಲ ಕಂಪನಿಯಾಗಿ ಹೊರಹೊಮ್ಮಿದೆ.
  • ಅಸ್ಸಾಂ ರಾಜ್ಯದ ಸಂಗ್ರಹಾಗಾರಗಳಲ್ಲಿರುವ, ಘೇಂಡಾಮೃಗಗಳ 2,479 ಕೊಂಬುಗಳನ್ನು ಸುಡಬೇಕು ಎಂಬ ಪ್ರಸ್ತಾವನೆಗೆ ಅಸ್ಸಾಂ ಸಚಿವ ಸಂಪುಟ ಅನುಮೋದನೆ ನೀಡಿದೆ. ಒಂದು ಕೊಂಬಿನ ಖಡ್ಗಮೃಗವು ಖಡ್ಗಮೃಗದ ಐದು ವಿಭಿನ್ನ ಜಾತಿಗಳಲ್ಲಿ ಒಂದಾಗಿದೆ. ಭಾರತದಲ್ಲಿ, ಖಡ್ಗಮೃಗಗಳು ಮುಖ್ಯವಾಗಿ ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದಲ್ಲಿ ಕಂಡುಬರುತ್ತವೆ.
  • ಇಂಡೊ– ಪೆಸಿಫಿಕ್ ಪ್ರದೇಶದಲ್ಲಿ ಚೀನಾವನ್ನು ಎದುರಿಸಲು ಆಸ್ಟ್ರೇಲಿಯಾ, ಬ್ರಿಟನ್ನೊಂದಿಗೆ ಅಮೆರಿಕವು (ಆಕಸ್) ಹೊಸ ತ್ರಿಪಕ್ಷೀಯ ಭದ್ರತಾ ಮೈತ್ರಿಕೂಟವನ್ನು ಘೋಷಿಸಿದೆ.
  • 2023ರಲ್ಲಿ ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹ ಚಂದ್ರನತ್ತ ನಾಸಾ ಮತ್ತೆ ಮಾನವಸಹಿತ ಬಾಹ್ಯಾಕಾಶ ನೌಕೆಯನ್ನು ಕಳುಹಿಸಲಿದೆ. ಈ ಬಾರಿ ಓರ್ವ ಮಹಿಳಾ ಗಗನಯಾತ್ರಿಯನ್ನೂ ಚಂದ್ರನ ನೆಲಕ್ಕೆ ಕಳುಹಿಸುವ ಯೋಜನೆ ರೂಪಿಸಲಾಗಿದೆ. ಆರ್ಟೆಮಿಸ್ ಹೆಸರಿನ ಈ ಯೋಜನೆ ಅಂತಾರಾಷ್ಟ್ರೀಯ ಸಹಕಾರದ ಮೊಟ್ಟ ಮೊದಲ ಬಾಹ್ಯಾಕಾಶ ಯೋಜನೆಯಾಗಲಿದೆ.