Published on: December 21, 2021

ಸುದ್ಧಿ ಸಮಾಚಾರ 21 ಡಿಸೆಂಬರ್ 2021

ಸುದ್ಧಿ ಸಮಾಚಾರ 21 ಡಿಸೆಂಬರ್ 2021

 • ವಿವಾದಾತ್ಮಕ ಮತಾಂತರ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆ ದಟ್ಟವಾಗಿದೆ. ವಿಧೇಯಕದಲ್ಲಿ ಬಲವಂತದ ಮತಾಂತರಕ್ಕೆ ಹತ್ತು ವರ್ಷದ ವರೆಗೂ ಶಿಕ್ಷೆ ಕೊಡುವ ಅವಕಾಶ ಇದೆ.
 • ಕೊರೊನಾ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗಿ ಕಾಡಿದೆ. ಮಕ್ಕಳಲ್ಲಿ ಅಪೌಷ್ಟಿಕತೆ ಸೇರಿದಂತೆ ಬಾಲ್ಯದಲ್ಲಿ ಎದುರಾಗುತ್ತಿರುವ ಆರೋಗ್ಯ ಸಮಸ್ಯೆಗೆ ತಾಯಿಯ ಎದೆ ಹಾಲು ರಾಮಬಾಣ. ಇದರ ಮಹತ್ವ ಅರಿತಿರುವ ರಾಜ್ಯ ಸರಕಾರವು ‘ನೋರಾ ಹೆಲ್ತ್ ಕೇರ್’ ಯೋಜನೆ ಮೂಲಕ ಕೇರ್ ಕಂಪ್ಯಾನಿಯನ್ ಪ್ರೋಗ್ರಾಮ್ ಅನ್ನು ರಾಜ್ಯಾದ್ಯಂತ ಹಮ್ಮಿಕೊಂಡಿದೆ.
 • ಸರಕಾರದ ನಾನಾ ಇಲಾಖೆಗಳು, ಎಸ್‌ಎಸ್‌ಎಲ್‌ಸಿ, ಪಿಯುಸಿ, ಸರಕಾರಿ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಲಭ್ಯವಿರುವ ಅಧಿಕೃತ ದತ್ತಾಂಶವನ್ನು ಉದ್ಯೋಗದಾತ ಕಂಪೆನಿಗಳು, ಸಂಸ್ಥೆಗಳೊಂದಿಗೆ ತ್ವರಿತಗತಿಯಲ್ಲಿ ಹಂಚಿಕೊಳ್ಳಲು ‘ಇ-ಸಹಮತಿ’ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ.
 • ಕರ್ನಾಟಕ ರಾಜ್ಯ ಪೊಲೀಸ್(ಕೆಎಸ್ ಪಿ) ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಅವಕಾಶ ನೀಡುವ ಮೂಲಕ ಸ್ವಾಗತಾರ್ಹ ಮತ್ತು ಪ್ರಗತಿಪರ ಹೆಜ್ಜೆ ಇಟ್ಟಿದ್ದು, ಕೆಎಸ್‌ಆರ್‌ಪಿ ಮತ್ತು ಭಾರತೀಯ ರಿಸರ್ವ್ ಬೆಟಾಲಿಯನ್ (ಐಆರ್‌ಬಿ) ವಿಶೇಷ ಮೀಸಲು ಸಬ್‌ಇನ್‌ಸ್ಪೆಕ್ಟರ್ ಹುದ್ದೆಗೆ ಪುರುಷ, ಮಹಿಳೆಯರು ಮತ್ತು ತೃತೀಯ ಲಿಂಗಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
 • ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸುವ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿದೆ.
 • ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕೊತಾದಲ್ಲಿನಡೆಯುವ ‘ದುರ್ಗಾ ಪೂಜೆ’ಗೆ ವಿಶ್ವಸಂಸ್ಥೆ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೊ)ಯು ಪಾರಂಪರಿಕ ಸ್ಥಾನಮಾನ ನೀಡಿದೆ.
 • ಅಗ್ನಿ ಸರಣಿಯ ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡ ಹೊಸ ತಲೆಮಾರಿನ ಅಗ್ನಿ ಪ್ರೈಮ್ ಕ್ಷಿಪಣಿಯನ್ನು ಒಡಿಶಾದ ಕರಾವಳಿಯಿಂದ ಯಶಸ್ವಿಯಾಗಿ ಪ್ರಯೋಗಿಸಲಾಗಿದೆ. ಈ ಕ್ಷಿಪಣಿ ಅಣ್ವಸ್ತ್ರಗಳನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ.
 • ಭಾರತ ಮತ್ತು ತೈವಾನ್ ದ್ವಿಪಕ್ಷೀಯವಾಗಿ ಆರ್ಥಿಕ ಒಪ್ಪಂದಕ್ಕೆ ಮಾತುಕತೆ ನಡೆಸಲಿವೆ. ಉಭಯ ರಾಷ್ಟ್ರಗಳು ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಮಾತುಕತೆಯನ್ನು ಆರಂಭಿಸಿವೆ.
 • ಫಿಲಿಪ್ಪೀನ್ಸ್‌ನಲ್ಲಿ ಭೀಕರ ಗಾಳಿಯನ್ನು ತರುತ್ತಿರುವ ರೈ ತೂಫಾನು ನೂರಾರು ಮಂದಿಯನ್ನು ಬಲಿ ತೆಗೆದುಕೊಂಡಿದೆ. ಮನೆಗಳು, ಕಟ್ಟಡಗಳು ತೂಫಾನಿನ ಹೊಡೆತಕ್ಕೆ ನೆಲಸಮವಾಗಿವೆ. ಸಾವಿರಾರು ಮಂದಿ ಮನೆಗಳನ್ನು ಕಳೆದುಕೊಂಡಿದ್ದಾರೆ.
 • ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೂತಾನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿ ನ್ಗಾಡಾಗ್ ಪೆಲ್ ಗಿ ಖೋರ್ಲೊಗೆ ಭಾಜನಾರಾಗಿದ್ದು ಭೂತಾನ್ ಪ್ರಧಾನಿ ಲೋಟೆ ತ್ಶೆರಿಂಗ್ ಪ್ರದಾನ ಮಾಡಿದ್ದಾರೆ.
 • ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರನ್ನು ಉತ್ತರಾಖಂಡ ರಾಜ್ಯದ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಲಾಗಿದೆ.