Published on: October 22, 2022

ಸುದ್ಧಿ ಸಮಾಚಾರ – 22 ಅಕ್ಟೋಬರ್ 2022

ಸುದ್ಧಿ ಸಮಾಚಾರ – 22 ಅಕ್ಟೋಬರ್ 2022

  • ಕೆವಾಡಿಯಾದ ಏಕತಾ ನಗರದ Vaasa ಏಕತಾ ಪ್ರತಿಮೆಯಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರ ಉಪಸ್ಥಿತಿಯಲ್ಲಿ  ಪ್ರಧಾನಿ ನರೇಂದ್ರ ಮೋದಿ buy ivermectin pills ಮಿಷನ್ ಲೈಫ್ಗೆ ಚಾಲನೆ ನೀಡಿದರು.
  • ಪರಿಶಿಷ್ಟ ಜಾತಿ (ಎಸ್‌.ಸಿ) ಮತ್ತು ಪಂಗಡಗಳ (ಎಸ್‌.ಟಿ) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ನಿರ್ಧಾರವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಕ್ರಮವಾಗಿ ಶೇ. 15 ರಿಂದ 17 ಮತ್ತು  ಹಾಗೂ  ಶೇ.3 ರಿಂದ 7ಕ್ಕೆ ಹೆಚ್ಚಿಸಲಾಗಿದೆ
  • ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೊ) 2023ರಲ್ಲಿ ಸೂರ್ಯನ ಬಳಿಗೆ ಒಂದು ಉಪಗ್ರಹ ಮತ್ತು ಚಂದ್ರನಲ್ಲಿಗೆ ಒಂದು ನೌಕೆಯನ್ನು ಕಳುಹಿಸಲಿದೆ. 2024ರ ಗಗನಯಾನ ಯೋಜನೆ ಸಂಬಂಧ, 2023ರಲ್ಲಿ ಆರು ಕಾರ್ಯಾಚರಣೆಗಳನ್ನು ನಡೆಸಲಾಗುತ್ತದೆ.
  • ಸ್ವದೇಶಿಯಾಗಿ ಅಭಿವೃದ್ಧಿಪಡಿಸಿರುವ ಹೊಸ ತಲೆಮಾರಿನ ‘ಅಗ್ನಿ ಪ್ರೈಮ್‌’ ಮಧ್ಯಮ ಶ್ರೇಣಿಯ  ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿ ನಡೆದಿದೆ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ(ಡಿಆರ್‌ಡಿಒ) ಮೂಲಗಳು ಹೇಳಿವೆ.
  • ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ (ಐಎಸ್ಎಸ್) ಸೂಕ್ಷ್ಮಾಣುಜೀವಿಗಳ ನಡುವಿನ ವರ್ತನೆ ಕುರಿತು ಮದ್ರಾಸ್ ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ–ಎಂ) ಮತ್ತು ನಾಸಾದ ಜೆಟ್ ಪ್ರೊಪಲ್ಷನ್ ಲ್ಯಾಬೊರೇಟರಿ (ಜೆಪಿಎಲ್) ಸಂಶೋಧಕರು ಮಹತ್ವದ ಅಧ್ಯಯನ ನಡೆಸಿವೆ.
  • ಭಾರತ ಕ್ರಿಕೆಟ್‌ ತಂಡದ ಮಾಜಿ ಆಲ್‌ರೌಂಡರ್‌ ಯುವರಾಜ್‌ ಸಿಂಗ್‌ ಅವರನ್ನು ಈ ಬಾರಿಯ ಅಂಧರ ಟಿ20 ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ರಾಯಭಾರಿಯನ್ನಾಗಿ ಘೋಷಿಸಲಾಗಿದೆ. ಈ ವಿಚಾರವನ್ನು ಭಾರತ ಅಂಧರ ಕ್ರಿಕೆಟ್ ಸಂಸ್ಥೆಯು (ಸಿಎಬಿಐ) ಖಚಿತಪಡಿಸಿದೆ.ಭಾರತದಲ್ಲೇ ನಡೆಯುವ ಈ ಟೂರ್ನಿಯಲ್ಲಿ ಟೀಂ ಇಂಡಿಯಾವನ್ನು ಅಜಯ್‌ ಕುಮಾರ್‌ ರೆಡ್ಡಿ ಮುನ್ನಡೆಸಲಿದ್ದು, ವೆಂಕಟೇಶ್ವರ ರಾವ್‌ ದುನ್ನಾ ಉಪನಾಯಕರಾಗಿ ಆಡಲಿದ್ದಾರೆ. ವಿಶ್ವಕಪ್‌ ಟೂರ್ನಿಯು ಡಿಸೆಂಬರ್ 6 ರಿಂದ 17ರ ವರೆಗೆ ನಡೆಯಲಿದೆ.