Published on: November 26, 2022
ಸುದ್ಧಿ ಸಮಾಚಾರ – 26 ನವೆಂಬರ್ 2022
ಸುದ್ಧಿ ಸಮಾಚಾರ – 26 ನವೆಂಬರ್ 2022
- ಚಿತ್ರನಟ ಬಿ.ಎಸ್. ದ್ವಾರಕೀಶ್, ಕಲಾವಿದ ಡಾ.ಟಿ. ಅನಿಲ್ ಕುಮಾರ್ ಮತ್ತು ಅಮೆರಿಕದ ಕನ್ನಡ ಕೂಟಗಳ ಸಂಘಟನೆ (ಅಕ್ಕ) ಅಧ್ಯಕ್ಷ ಅಮರನಾಥ್ ಗೌಡ ಅವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಪದವಿ ನೀಡಲು ನಿರ್ಧರಿಸಲಾಗಿದೆ.
- ನಟ ಅಮಿತಾಭ್ ಬಚ್ಚನ್ ರ ಅನುಮತಿ ಇಲ್ಲದೇ ಅವರ ಧ್ವನಿ ಹಾಗೂ ಚಿತ್ರಗಳನ್ನು ಎಲ್ಲಿಯೂ ಬಳಕೆ ಮಾಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.ನಟ ಅಮಿತಾಭ್ ಬಚ್ಚನ್ ಅವರ ಧ್ವನಿ, ಚಿತ್ರ ಅಥವಾ ಯಾವುದೇ ವ್ಯಕ್ತಿಯಿಂದ ಪ್ರತ್ಯೇಕವಾಗಿ ಗುರುತಿಸಬಹುದಾದ ಇತರ ಯಾವುದೇ ಗುಣಲಕ್ಷಣಗಳನ್ನು ಅನಧಿಕೃತವಾಗಿ ಬಳಸುವುದನ್ನು ತಡೆಯುವ ಮಧ್ಯಂತರ ಆದೇಶವನ್ನು ದೆಹಲಿ ಹೈಕೋರ್ಟ್ ನೀಡಿದೆ.
- ಪ್ರಧಾನಿ ನರೇಂದ್ರ ಮೋದಿ ಇ-ಕೋರ್ಟ್ ಯೋಜನೆಯಡಿ ವರ್ಚುವಲ್ ಜಸ್ಟಿಸ್ ಕ್ಲಾಕ್, JustIS ಮೊಬೈಲ್ ಅಪ್ಲಿಕೇಶನ್ 2.0, ಡಿಜಿಟಲ್ ಕೋರ್ಟ್ ಮತ್ತು S3WaaS ವೆಬ್ಸೈಟ್ಗಳು ಸೇರಿದಂತೆ ವಿವಿಧ ಹೊಸ ಉಪಕ್ರಮಗಳಿಗೆ ಚಾಲನೆ ನೀಡಿದರು.
- ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ ಪಿಎಸ್ಎಲ್ವಿ-ಸಿ 54 ರಾಕೆಟ್ ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಓಷನ್ ಸ್ಯಾಟ್-3 (Oceansat-3) ಎಂದೂ ಕರೆಯಲ್ಪಡುವ EOS-06 ಮತ್ತು 8 ನ್ಯಾನೊ ಉಪಗ್ರಹಗಳನ್ನು ಹೊತ್ತ ರಾಕೆಟ್ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಂಡಿತು.
- ಪ್ರತಿ ವರ್ಷ ನವೆಂಬರ್ 26 ರಂದು ಭಾರತದ ಸಂವಿಧಾನ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ರಾಷ್ಟ್ರೀಯ ಕಾನೂನು ದಿನ ಅಥವಾ ನ್ಯಾಷನಲ್ ಲಾ ಡೇ ಎಂದೂ ಕರೆಯಲಾಗುತ್ತದೆ. ಭಾರತದ ಸಂವಿಧಾನವನ್ನು ಅಳವಡಿಸಿಕೊಂಡ ಸಂದರ್ಭದ ಸ್ಮರಣೆಗಾಗಿ ಈ ದಿನವನ್ನ ಆಚರಿಸಲಾಗುತ್ತದೆ.