Published on: September 1, 2021

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಸುದ್ಧಿಯಲ್ಲಿ ಏಕಿದೆ ? ಇತ್ತೀಚೆಗಷ್ಟೇ ದೇಶದ ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದ ಕರ್ನಾಟಕದ ನ್ಯಾಯಮೂರ್ತಿ ನಾಗರತ್ನ ಬಿ.ವಿ ಸೇರಿದಂತೆ ದೇಶದ 9 ನ್ಯಾಯಾಮೂರ್ತಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯಾಂಶಗಳು

  • ಕರ್ನಾಟಕದವರಾದ, ರಾಜ್ಯ ಹೈಕೋರ್ಟಿನಲ್ಲಿ ನ್ಯಾಯಾಧೀಶರಾಗಿದ್ದ ನಾಗರತ್ನ ಬಿ.ವಿ. ಸೇರಿ ಮೂವರು ಮಹಿಳಾ ನ್ಯಾಯಮೂರ್ತಿಗಳೂ ಒಳಗೊಂಡಂತೆ ಒಂಬತ್ತು ಹೊಸ ನ್ಯಾಯಮೂರ್ತಿಗಳು ಪ್ರಮಾಣವಚನ ಸ್ವೀಕರಿಸಿದರು.
  • ನಾಗರತ್ನಿ ಬಿವಿ ಅವರೊಂದಿಗೇ ನ್ಯಾಯಮೂರ್ತಿ ಎ.ಎಸ್. ಓಕಾ, ನ್ಯಾಯಮೂರ್ತಿ, ವಿಕ್ರಮ್ ನಾಥ್, ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ, ನ್ಯಾಯಮೂರ್ತಿ ಹಿಮಾ ಕೊಹ್ಲಿ, ನ್ಯಾಯಮೂರ್ತಿ, ಸಿ.ಟಿ. ರವೀಂದ್ರಕುಮಾರ್, ನ್ಯಾಯಮೂರ್ತಿ ಎಂ.ಎಂ. ಸುಂದರೇಶ್ ಮತ್ತು ನ್ಯಾಯಮೂರ್ತಿ ಬೇಲಾ ತ್ರಿವೇದಿ ಹಾಗೂ ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.
  • ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹೊಸದಾಗಿ ನೇಮಕಗೊಂಡ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೊಧಿಸಿದರು.
  • ಈ ಮೂಲಕ ಇದೀಗ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೇರಿ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ.

ಮೂರು ಮಂದಿ ಮಹಿಳೆಯರು!

  • ಇನ್ನು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದವರ ಪೈಕಿ ಮೂರು ಮಂದಿ ಮಹಿಳೆಯರಾಗಿರುವುದು ಕೂಡ ಈ ಬಾರಿಯ ವಿಶೇಷತೆ ಹಾಗೂ ಮೈಲುಗಲ್ಲಾಗಿದೆ. ನ್ಯಾಯಮೂರ್ತಿ ಬಿವಿ ನಾಗರತ್ನಾ, ನ್ಯಾಯಮೂರ್ತಿ ಹಿಮಾ ಕೊಹ್ಲಿ, ನ್ಯಾಯಮೂರ್ತಿ ಬೇಲಾ ತ್ರಿವೇದಿ ಪ್ರಮಾಣ ವಚನ ಸ್ವೀಕರಿಸಿದ ಮಹಿಳಾ ನ್ಯಾಯಮೂರ್ತಿಗಳಾಗಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇಮಕಾತಿ

  • ಭಾರತದ ರಾಷ್ಟ್ರಪತಿಗಳು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನು ನೇಮಿಸುತ್ತಾರೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ (ಎಚ್‌ಸಿ) ನ್ಯಾಯಾಧೀಶರೊಂದಿಗೆ ಸಮಾಲೋಚಿಸಿದ ನಂತರ ಸಿಜೆಐ ಅವರನ್ನು ಅಧ್ಯಕ್ಷರು ನೇಮಕ ಮಾಡುತ್ತಾರೆ. ಸುಪ್ರೀಂ ಕೋರ್ಟ್‌ನ ಇತರ ನ್ಯಾಯಾಧೀಶರನ್ನು ಸಿಜೆಐ ಮತ್ತು ಎಸ್‌ಸಿ ಮತ್ತು ಹೈಕೋರ್ಟ್‌ಗಳ ಇತರ ನ್ಯಾಯಾಧೀಶರೊಂದಿಗೆ ಸಮಾಲೋಚಿಸಿದ ನಂತರ ಅಧ್ಯಕ್ಷರು ನೇಮಕ ಮಾಡುತ್ತಾರೆ. ಮುಖ್ಯ ನ್ಯಾಯಾಧೀಶರನ್ನು ಹೊರತುಪಡಿಸಿ ಇತರ ನ್ಯಾಯಾಧೀಶರ ನೇಮಕಾತಿಗೆ ಸಿಜೆಐ ಜೊತೆ ಸಮಾಲೋಚನೆ ಕಡ್ಡಾಯವಾಗಿದೆ.