Published on: January 21, 2023

‘ಸ್ಫೂರ್ತಿ ಯೋಜನೆ’

‘ಸ್ಫೂರ್ತಿ ಯೋಜನೆ’


order provigil europe ಸುದ್ದಿಯಲ್ಲಿ ಏಕಿದೆ? ಕರ್ನಾಟಕ ರಾಜ್ಯದಲ್ಲಿ ಬಾಲ್ಯ ವಿವಾಹವನ್ನು ತಡೆಗಟ್ಟಲು ‘ಸ್ಪೂರ್ತಿ ಯೋಜನೆ’ ಆರಂಭಿಸಲಾಗಿದ್ದು, ಇದಕ್ಕಾಗಿ ರಾಜ್ಯ ಸಚಿವ ಸಂಪುಟ 12.51 ಕೋಟಿ ರೂಪಾಯಿ ಬಿಡುಗಡೆ ಮಾಡಲಿದೆ. ಯೋಜನೆಯ ಭಾಗವಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ವರ್ಷಪೂರ್ತಿ ಜಾಗೃತಿ ಅಭಿಯಾನ ನಡೆಯಲಿದೆ.


cytotec no prescription overnight delivery ಮುಖ್ಯಾಂಶಗಳು

  • ಯೋಜನೆಯನ್ನು ಜಾರಿಗೆ ತರಲು ಸರ್ಕಾರೇತರ ಸಂಸ್ಥೆಗಳನ್ನು ಸಂಪರ್ಕಿಸಲಾಗಿದೆ.
  • ಪ್ರಾಯೋಗಿಕ ಮಾದರಿಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಯೋಜನೆಯನ್ನು ಈಗಾಗಲೇ ಜಾರಿಗೆ ತರಲಾಗಿದ್ದು ಅಲ್ಲಿ ಯಶಸ್ವಿಯಾಗಿದೆ. ಅದನ್ನೀಗ ಇನ್ನಷ್ಟು ಜಿಲ್ಲೆಗಳಿಗೆ ವಿಸ್ತರಿಸಲಾಗುವುದು.
  • ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ ಅವರಲ್ಲಿ ಕೌಶಲ್ಯಾಭಿವೃದ್ಧಿ ಮಾಡಲಾಗುವುದು.
  • ಆರಂಭಿಕ ಹಂತದಲ್ಲಿಪ್ರಾಯೋಗಿಕವಾಗಿ ಕಲಬುರ್ಗಿ, ರಾಯಚೂರು, ಬಾಗಲಕೋಟೆ, ವಿಜಯಪುರ ಮತ್ತುಬೆಳಗಾವಿ ಜಿಲ್ಲೆಗಳ 11 ತಾಲೂಕುಗಳಲ್ಲಿಜಾರಿ ಮಾಡಲು ತೀರ್ಮಾನಿಸಲಾಗಿದೆ.
  • ಕೇಂದ್ರ ಸರ್ಕಾರ ಕೂಡ ಯೋಜನೆಗೆ ನೆರವು ನೀಡಿದೆ.

ಅನುಷ್ಠಾನ: ಹೆಣ್ಣು ಮಕ್ಕಳಿಗೆ ಕೌಶಲ ಆಧಾರಿತ ಶಿಕ್ಷಣ, ಬಾಲ್ಯ ವಿವಾಹ ತಡೆ, ಮಕ್ಕಳಿಗೆ ಸಂಬಂಧಿಸಿದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಜಾಗೃತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿನಿಗಮದ ಮೂಲಕ ಸ್ಪೂರ್ತಿ ಯೋಜನೆ ಅನುಷ್ಠಾನಗೊಳಿಸಲಾಗುವುದು.