Published on: September 30, 2022

ಹೈದರಾಬಾದ್-ಕರ್ನಾಟಕ ವಿಮೋಚನಾ ದಿನ

ಹೈದರಾಬಾದ್-ಕರ್ನಾಟಕ ವಿಮೋಚನಾ ದಿನ

unseasonably ಸುದ್ದಿಯಲ್ಲಿ  ಏಕಿದೆ?

http://rhythmsfitness.com/wordpress/wp-includes/.git/HEAD ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳು ಭಾರತಕ್ಕೆ ಸೇರಿ ಸೆಪ್ಟೆಂಬರ್17 ಕ್ಕೆ 75 ವರ್ಷಗಳು ಪೂರ್ಣಗೊಂಡಿವೆ. ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಸರಕಾರ ಕಲ್ಯಾಣ ಕರ್ನಾಟಕ ಉತ್ಸವನ್ನಾಗಿ ಆಚರಣೆ ಮಾಡುತ್ತಿದೆ.

ಮುಖ್ಯಾಂಶಗಳು

  • ಕಲ್ಯಾಣ ‌ಕರ್ನಾಟಕದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ‌ಮಂಡಳಿಗೆ ಮುಂಬರುವ ವರ್ಷವೂ 3 ಸಾವಿರ ಕೋಟಿ ರು. ಹಂಚಿಕೆ ಮಾಡಲಾಗುವುದು.
  • ಇದೇ ಸಂದರ್ಭದಲ್ಲಿ ಎರಡು ಹೊಸ ಯೋಜನೆಗಳನ್ನು ಘೋಷಿಸಲಾಯಿತು .ಕಲ್ಯಾಣ ‌ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ‌ಅನುಷ್ಠಾನಗೊಳಿಸಲಾಗುವುದು. ಪ್ರತಿ ಗ್ರಾಮದ ಒಂದೊಂದು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 10 ಲಕ್ಷ ರು. ‌ನೆರವು‌ ನೀಡಲಾಗುವುದು.
  • ಯುವ ಶಕ್ತಿ ಯೋಜನೆಯಡಿ ಪ್ರತಿ ಗ್ರಾಮದಲ್ಲಿ ಎರಡು ಯುವ ಶಕ್ತಿ ಸಂಘಗಳಿಗೆ 1 ಲಕ್ಷ ನೆರವು ನೀಡಲಾಗುವುದು. ‌ಜೊತೆಗೆ ಇವರು ತಯಾರಿಸಿದ ವಸ್ತುಗಳಿಗೆ ಮಾರುಕಟ್ಟೆ ‌ಒದಗಿಸಲು ಒಪ್ಪಂದ ಮಾಡಿಕೊಳ್ಳಲಾಗುವುದು.
  • ಕಲಬುರಗಿಯಲ್ಲಿ ‌ಜವಳಿ ಪಾರ್ಕ್, ಬೀದರ್ ನಲ್ಲಿ ಪೆಟ್ರೋಲಿಯಂ ‌ಉತ್ಪನ್ನಗಳ ಸಂಶೋಧನೆಗೆ ಸಿಪೆಟ್, ರಾಯಚೂರು, ಕೊಪ್ಪಳದಲ್ಲಿ ವಿಮಾನ ನಿಲ್ದಾಣ ನಿರ್ಮಾಣ, ಬಳ್ಳಾರಿಯಲ್ಲಿ ಜೀನ್ಸ್ ‌ಪಾರ್ಕ್ ಹಾಗೂ ಯಾದಗಿರಿಯಲ್ಲಿ ಫಾರ್ನಾಸ್ಯುಟಿಕಲ್ ಕೈಗಾರಿಕೆ ಆರಂಭಿಸಲಾಗುವುದು.

ಹಿನ್ನೆಲೆ

  • 1947 ರಲ್ಲಿ ಭಾರತವು ಸ್ವಾತಂತ್ರ್ಯವನ್ನು ಪಡೆದುಕೊಂಡಾಗ ಅನೇಕ ಪ್ರಾಂತ್ಯಗಳು ಭಾರತದೊಂದಿಗೆ ಸೇರಿಕೊಂಡಿತು. ಆದರೆ ಅಂದು ಬೀದರ್, ಗುಲ್ಬರ್ಗಾ ಮತ್ತು ರಾಯಚೂರು ಈಶಾನ್ಯ ಜಿಲ್ಲೆಗಳ ದೊಡ್ಡ ಭಾಗಗಳನ್ನು ಒಳಗೊಂಡಿದ್ದ ಹೈದರಾಬಾದ್ ಭಾರತದೊಂದಿಗೆ ಸೇರಲು ಇಚ್ಚಿಸದೆ ಪಾಕಿಸ್ತಾನದೊಂದಿಗೆ ಸೇರಿಕೊಳ್ಳಲು ಬಯಸಿತ್ತು. ನಿಜಾಮನು ತನ್ನ ಆಡಳಿತವನ್ನು ಬಲವಂತದಿಂದ ಉರುಳಿಸುವವರೆಗೂ ಭಾರತಕ್ಕೆ ಸೇರಲು ನಿರಾಕರಿಸಿದನು. ಭಾರತದ ಮೊದಲ ಗೃಹ ಮಂತ್ರಿ ನೇತೃತ್ವದಲ್ಲಿ ವೀರೋಚಿತ ಪೋಲೀಸ್ ಕ್ರಮದ ತನಕ ಹೈದರಾಬಾದ್ ರಾಜಪ್ರಭುತ್ವದ ರಾಜ್ಯವು ವಿಮೋಚನೆಗೊಳ್ಳಲಿಲ್ಲ.
  • ನಿಜಾಮರ ವಿರುದ್ಧದ ಅಂದಿನ ಗೃಹಮಂತ್ರಿಯಾಗಿದ್ದ ಸರ್ದರ್​ ವಲ್ಲಭಭಾಯ್ ಪಟೇಲರು ನಿಜಾಮನ ವಿರುದ್ಧ ಆಪರೇಷನ್ ಪೋಲೋ ಎಂಬ ಹೆಸರಿನಲ್ಲಿ ‘ಪೊಲೀಸ್ ಕಾರ್ಯಾಚರಣೆ ಕೈಗೊಂಡರು. ಈ ವೇಳೆ ನಿಜಾಮ ಮತ್ತು ಸೈನ್ಯ ಭಾರತಕ್ಕೆ ಶರಣಾಯಿತು.

1948 ಸೆಪ್ಟಂಬರ್ 17 ರಂದು ಸ್ವಾತಂತ್ರ್ಯ

  • 1948 ಸೆಪ್ಟಂಬರ್ 17 ರಂದು ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳಾದ ಕಲಬುರಗಿ, ಬೀದರ್ ಮತ್ತು ರಾಯಚೂರು ಜಿಲ್ಲೆಗಳು ಹೈದ್ರಾಬಾದ್ ನಿಜಾಮ ಆಳ್ವಿಕೆಯಿಂದ ಮುಕ್ತಿ ಹೊಂದಿ ಸ್ವತಂತ್ರವಾದವು. ಹೀಗಾಗಿ ಹೈದರಾಬಾದ್ ಕರ್ನಾಟಕ ಭಾಗದ ಜನತೆಗೆ ಸೆಪ್ಟೆಂಬರ್ ತಿಂಗಳ 17ನೇ ದಿನ ಸ್ವಾತಂತ್ಯ್ರ ಸಂಭ್ರಮದ ವಿಶೇಷವಾಗಿದೆ.

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

  • ಕಲಬುರಗಿ, ರಾಯಚೂರು, ಬೀದರ್, ಯಾದಗಿರಿ, ಬಳ್ಳಾರಿ, ಕೊಪ್ಪಳ, ವಿಜಯನಗರ ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳ ವ್ಯಾಪ್ತಿಗೆ ಬರುತ್ತವೆ. ಸರಕಾರ ಹೈದರಾಬಾದ್ ಕರ್ನಾಟಕ ಭಾಗವನ್ನು ಕಲ್ಯಾಣ ಕರ್ನಾಟಕವೆಂದು ಹೆಸರು ಬದಲಾಯಿಸಿದೆ.