Published on: September 15, 2023

ʻನನ್ನ ಮೈತ್ರಿʼಯೋಜನೆ

ʻನನ್ನ ಮೈತ್ರಿʼಯೋಜನೆ

ಸುದ್ದಿಯಲ್ಲಿ ಏಕಿದೆ? ಕರ್ನಾಟಕ ರಾಜ್ಯದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ ಸಂರಕ್ಷಣೆಗಾಗಿ ಋತುಸ್ರಾವ ಕಪ್ (ಮೆನ್ಸ್ಟ್ರುಯಲ್ ಕಪ್) ವಿತರಿಸುವ ಮಹತ್ವದ ʻನನ್ನ ಮೈತ್ರಿʼ ಯೋಜನೆಗೆ ಚಾಲನೆ ನೀಡಲಾಯಿತು.

ಮುಖ್ಯಾಂಶಗಳು

  • ಸ್ಯಾನಿಟರಿ‌ ನ್ಯಾಪ್ಕಿನ್ ಗೆ ಪರ್ಯಾಯವಾಗಿ ಪರಿಸರ ಸ್ನೇಹಿ ಹಾಗೂ ದೀರ್ಘ ಬಾಳಿಕೆ ಬರುವ ಮೆನ್ ಸ್ಟ್ರುಯಲ್ ಕಪ್ (ಮುಟ್ಟಿನ ಕಪ್)  ಗಳನ್ನ ವಿದ್ಯಾರ್ಥಿನಿಯರಿಗೆ ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿದೆ.
  • ಪ್ರಾಯೋಗಿಕವಾಗಿ ದಕ್ಷಿಣ ಕನ್ನಡ ಹಾಗೂ ಚಾಮರಾಜನಗರ ಎರಡು ಜಿಲ್ಲೆಗಳಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ.
  • ರಾಜ್ಯದಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಸಲಾದ ದಕ್ಷಿಣಕನ್ನಡ ಜಿಲ್ಲೆಯಲ್ಲಿ 11,000 ವಿದ್ಯಾರ್ಥಿನಿಯರು ಹಾಗೂ ಚಾಮರಾಜ ನಗರದ 4,000 ವಿದ್ಯಾರ್ಥಿನಿಯರಿಗೆ ಕಪ್‌ ವಿತರಿಸಲಾಯಿತು.
  • ಸರಕಾರಿ ಹಾಗೂ ಅನುದಾನಿತ ಕಾಲೇಜಿನಲ್ಲಿ ಕಲಿಯುತ್ತಿರುವ 17-18 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಲಾ ಒಂದರಂತೆ ಒಟ್ಟು 15,000 ಕಪ್‌ ವಿತರಿಸಲಾಗುತ್ತದೆ.
  • ಈ ಪ್ರಯೋಗ ಯಶಸ್ವಿಯಾದ ಬಳಿಕ ಉಳಿದ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು.

ರಾಯಭಾರಿ: ‘ಕಾಂತಾರ’ ಸಿನಿಮಾ ಖ್ಯಾತಿಯ ನಟಿ ಸಪ್ತಮಿ ಗೌಡ

ಉದ್ದೇಶ

  • ಹೆಣ್ಣು ಮಕ್ಕಳಲ್ಲಿ ಮುಟ್ಟಿನ ನಿರ್ವಹಣೆಗೆ ಸೂಕ್ತ ಸಾಧನ ಮೆನ್‌ಸ್ಟ್ರುಯಲ್ ಕಪ್. ಮರು ಬಳಕೆಗೆ ಅನುಕೂಲ, ಪರಿಸರ ಸ್ನೇಹಿಯಾಗಿರುವ ಹಿನ್ನೆಲೆಯಲ್ಲಿ ಈ ಕಪ್ ಬಳಕೆಗೆ ಪ್ರೋತ್ಸಾಹಿಸಲಾಗುತ್ತಿದೆ. ಸ್ಯಾನಿಟರಿ ನ್ಯಾಪ್‌ಕಿನ್‌ಗೆ ಪರ್ಯಾಯವಾಗಿ ಮುಟ್ಟಿನ ಕಪ್ ಬಳಸುವುದರಿಂದ ಇದನ್ನು ಮರುಬಳಕೆ ಮಾಡುವುದರಿಂದ ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದು ಮತ್ತು ವೆಚ್ಚವನ್ನು ಕಡಿಮೆ ಮಾಡುತ್ತದೆ.