Published on: February 6, 2023

ʻಸ್ವಚ್ಛ ಮಂದಿರ ಅಭಿಯಾನʼ

ʻಸ್ವಚ್ಛ ಮಂದಿರ ಅಭಿಯಾನʼ


ಸುದ್ದಿಯಲ್ಲಿ ಏಕಿದೆ? ಕರ್ನಾಟಕ ರಾಜ್ಯದ ದೇವಾಲಯಗಳನ್ನು ಸ್ವಚ್ಛವಾಗಿಡುವ ಸಲುವಾಗಿ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು “ಸ್ವಚ್ಛ ಮಂದಿರ ಅಭಿಯಾನವನ್ನು ಪ್ರಾರಂಭಿಸಿದೆ.


ಮುಖ್ಯಾಂಶಗಳು

  • ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯು ತನ್ನ ವ್ಯಾಪ್ತಿಯ ದೇವಸ್ಥಾನಗಳಲ್ಲಿ ನಿರಂತರ ಹೆಚ್ಚುತ್ತಿರುವ ಘನ ತ್ಯಾಜ್ಯ ನಿರ್ವಹಣೆಯ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಹೊಸ ಯೋಜನೆಯನ್ನ ಅನುಷ್ಠಾನಗೊಳಿಸುತ್ತಿದೆ.
  • ಮುಜರಾಯಿ ದೇಗುಲಗಳ ತ್ಯಾಜ್ಯ ನಿರ್ವಹಣೆ ಸಮಸ್ಯೆ ಪರಿಹಾರಕ್ಕಾಗಿ ರೂಪಿಸಿರುವ ʻಸ್ವಚ್ಛ ಮಂದಿರ ಅಭಿಯಾನʼದ ಮೊದಲ ಹಂತವಾಗಿ ಫೆ.10ಕ್ಕೆ ರಾಜ್ಯದ 12 ದೇಗುಲಗಳಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕ ಲೋಕಾರ್ಪಣೆಯಾಗಲಿದೆ.
  • ಮಂಡ್ಯ- ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಮುಖ್ಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ

ಉದ್ದೇಶ

  • ಈ ಸೌಲಭ್ಯದಿಂದಾಗಿ ಪ್ರತಿದಿನ ಈ ದೇವಸ್ಥಾನಗಳಲ್ಲಿ ಉತ್ಪತ್ತಿಯಾಗುವ ಸುಮಾರು 3500 ರಿಂದ 12 ಸಾವಿರ ಕೆಜಿಗಳಷ್ಟು ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗಲಿದೆ. ಭಕ್ತಾದಿಗಳಿಗೆ ಸ್ವಚ್ಛ, ಸುಂದರ ಹಾಗೂ ನೈರ್ಮಲ್ಯದ ವಾತಾವರಣ ಒದಗಿಸುವುದು ಪ್ರಮುಖ ಉದ್ದೇಶವಾಗಿದೆ

ಸ್ವಚ್ಛ ಮಂದಿರ ಅಭಿಯಾನದ ಘನತ್ಯಾಜ್ಯ ನಿರ್ವಹಣಾ ಘಟಕ

  • ಸ್ವಚ್ಚ ಮಂದಿರ ಅಭಿಯಾನದ ಘನತ್ಯಾಜ್ಯ ನಿರ್ವಹಣಾ ಘಟಕವು, ದೇವಸ್ಥಾನಗಳಲ್ಲಿ ಹಾಗೂ ದೇವಸ್ಥಾನದ ಆವರಣದಲ್ಲಿ ಉತ್ಪತ್ತಿಯಾಗುವ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಗ ನೆರವಾಗುತ್ತದೆ. ಈ ತ್ಯಾಜ್ಯಗಳನ್ನು ವೈಜ್ಞಾನಿಕ ರೀತಿಯಲ್ಲಿ ನಿರ್ವಹಣೆ ಮಾಡುವ ಉದ್ದೇಶ ಇದರದ್ದು. ತ್ಯಾಜ್ಯ ಉತ್ಪಾದನೆಯನ್ನು ಕಡಿಮೆ ಮಾಡಲು ವ್ಯವಸ್ಥಿತ ಕ್ರಮ ತೆಗೆದುಕೊಳ್ಳುವುದು, ದೇವಾಲಯಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಗ್ರಹಿಸುವುದು, ಸಾಗಿಸುವುದು, ಸಂಸ್ಕರಿಸುವುದು ಮತ್ತು ವಿಲೇವಾರಿ ಮಾಡಲು ಅಗತ್ಯವಾದ ಬೆಂಬಲ ವ್ಯವಸ್ಥೆಗಳನ್ನು ಇದು ಒಳಗೊಂಡಿದೆ.
  • ಮೂಲದಲ್ಲಿಯೇ ತ್ಯಾಜ್ಯವನ್ನು ಪ್ರತ್ಯೇಕಿಸುವ ವ್ಯವಸ್ಥೆಯೂ ಇದರಲ್ಲಿದೆ. ತ್ಯಾಜ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಲು ಸೌಲಭ್ಯಗಳನ್ನು ಸ್ಥಾಪಿಸುವ ಮೂಲಕ ದೇವಸ್ಥಾನವನ್ನು ಸುಸ್ಥಿರ ಸಂಸ್ಥೆ ಮತ್ತು ಶೂನ್ಯ ತ್ಯಾಜ್ಯ ಆವರಣವನ್ನಾಗಿ ಮಾಡುವ ಗುರಿಯನ್ನು ಈ ಯೋಜನೆ ಹೊಂದಿದೆ.