Published on: June 6, 2022

ಅಮೃತ ನಗರೋತ್ಧಾನ ಯೋಜನೆ

ಅಮೃತ ನಗರೋತ್ಧಾನ ಯೋಜನೆ

ಸುದ್ಧಿಯಲ್ಲಿ ಏಕಿದೆ?

ಮುಖ್ಯಮಂತ್ರಿಗಳ ಅಮೃತ ನಗರೋತ್ಧಾನ ಯೋಜನೆಯಡಿ  ನಗರ ಸ್ಥಳೀಯ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಮೂರು ವರ್ಷಗಳ ಬದಲಾಗಿ ಎರಡು ವರ್ಷಗಳಲ್ಲಿಯೇ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

9 ಜಿಲ್ಲೆ ಕಾಮಗಾರಿಗೆ ಅನುಮೋದನೆ:

  • ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯಡಿ ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ತುಮಕೂರು ಸೇರಿದಂತೆ ಒಂಬತ್ತು ಜಿಲ್ಲೆಗಳ 503.25 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ ಪೌರಾಡಳಿತ ಇಲಾಖೆ ಅನುಮೋದನೆ ನೀಡಿದೆ.

ಅಮೃತ್‌ 2.0 ಯೋಜನೆ

  • ಕೇಂದ್ರ ಪುರಸ್ಕೃತ ಅಮೃತ್‌ 2.0 ಯೋಜನೆಯಡಿ ಐದು ವರ್ಷಗಳಲ್ಲಿ ರಾಜ್ಯದ ಪಾಲೂ ಸೇರಿದಂತೆ ಒಟ್ಟು 9260 ಕೋಟಿ ರು. ವೆಚ್ಚದಲ್ಲಿ 287 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರು ಮತ್ತು ಒಳಚರಂಡಿ ವ್ಯವಸ್ಥೆ ರೂಪಿಸಲಾಗುತ್ತಿದೆ. ಈ ಯೋಜನೆಯಡಿ, ತಾಂತ್ರಿಕವಾಗಿ ಕಾರ್ಯಸಾಧ್ಯವಾಗಿರುವ ನಗರ ಸ್ಥಳೀಯ ಸಂಸ್ಥೆಗಳನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಿ ಕಾಮಗಾರಿ ಪ್ರಾರಂಭಿಸಬೇಕು

ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆ

  • ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಂಡ್ಯ ಜಿಲ್ಲೆ, ಕೋಲಾರ, ಚಿಕ್ಕಬಳ್ಳಾಪುರ(ಚಿಕ್ಕಬಳ್ಳಾಪುರ ನಗರಸಭೆ ಹೊರತುಪಡಿಸಿ), ದಕ್ಷಿಣ ಕನ್ನಡ(ಉಳ್ಳಾಲ ನಗರಸಭೆ, ಸೋಮೇಶ್ವರ ಮತ್ತು ಕೋಟೆಕಾರು ಪಟ್ಟಣ ಪಂಚಾಯಿತಿ ಹೊರತುಪಡಿಸಿ), ಧಾರವಾಡ, ಗದಗ( ಗದಗ-ಬೆಟಗೇರಿ ನಗರಸಭೆ ಹೊರತುಪಡಿಸಿ), ಕೊಪ್ಪಳ, ಹಾವೇರಿ(ಶಿಗ್ಗಾಂವ, ಬಂಕಾಪುರ, ಸವಣೂರು ಪುರಸಭೆ ಹೊರತುಪಡಿಸಿ), ರಾಯಚೂರು(ಮಾನ್ವಿ, ಜಾಲಹಳ್ಳಿ ಪುರಸಭೆ ಮತ್ತು ಕವಿತಾಳ ಪಟ್ಟಣ ಪಂಚಾತಿಯಿ ಹೊರತುಪಡಿಸಿ), ಯಾದಗಿರಿ, ಬೀದರ್, ಶಿವಮೊಗ್ಗ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ 2022-23 ರಿಂದ 2024-25ನೇ ಸಾಲಿನ ಆರ್ಥಿಕ ವರ್ಷದವರೆಗೆ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಈ ಕಾಮಗಾರಿಗಳನ್ನು ಕೈಗತ್ತಿಕೊಳ್ಳಲಾಗುತ್ತದೆ.