Published on: October 10, 2023

ಇಂದಿರಾ ಗಾಂಧಿ ಬಾಲಿಕಾ ಸುರಕ್ಷಾ ಯೋಜನೆ

ಇಂದಿರಾ ಗಾಂಧಿ ಬಾಲಿಕಾ ಸುರಕ್ಷಾ ಯೋಜನೆ

ಸುದ್ದಿಯಲ್ಲಿ ಏಕಿದೆ? ಏಕೈಕ ಹೆಣ್ಣು ಮಗುವಿನ ಪೋಷಕರಿಗೆ 2 ಲಕ್ಷ ಪ್ರೋತ್ಸಾಹಧನ ನೀಡಲಾಗುವುದು ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಘೋಷಿಸಿದ್ದಾರೆ.

ಮುಖ್ಯಾಂಶಗಳು

  • ಇಂದಿರಾ ಗಾಂಧಿ ಬಾಲಿಕಾ ಸುರಕ್ಷಾ ಯೋಜನೆಯಡಿ ಪ್ರೋತ್ಸಾಹಧನವನ್ನು ಈಗಿರುವ 35,000 ದಿಂದ 2 ಲಕ್ಷಕ್ಕೆ ಹೆಚ್ಚಿಸಲಾಗುವುದು.
  • ಒಂದು ಹೆಣ್ಣುಮಗು ಜನಿಸಿದ ನಂತರ ಕುಟುಂಬ ಯೋಜನೆ ಅಳವಡಿಸಿಕೊಳ್ಳುವ ಪೋಷಕರಿಗೆ 2 ಲಕ್ಷ, ಎರಡು ಹೆಣ್ಣುಮಕ್ಕಳ ನಂತರ ಇನ್ನೊಂದು ಮಗು ಬೇಡ ಎಂದು ನಿರ್ಧರಿಸುವವರಿಗೆ 1 ಲಕ್ಷ ನೀಡಲಾಗುವುದು.
  • 2018-20ರ ಮಾದರಿ ನೋಂದಣಿ ವ್ಯವಸ್ಥೆಯ ಮಾಹಿತಿಯ ಪ್ರಕಾರ, ಹಿಮಾಚಲ ಪ್ರದೇಶದಲ್ಲಿ ಲಿಂಗ ಅನುಪಾತವು 950ರಷ್ಟಿದೆ. ಇದು ದೇಶದ ಮೂರನೇ ಅತ್ಯುತ್ತಮ ಸಂಖ್ಯೆಯಾಗಿದೆ.

ಉದ್ದೇಶ

  • ಹಿಮಾಚಲ ಪ್ರದೇಶದಲ್ಲಿ ಹೆಣ್ಣುಭ್ರೂಣ ಹತ್ಯೆ ಪಿಡುಗನ್ನು ನಿರ್ಮೂಲನೆ ಮಾಡುವ ಸರ್ಕಾರದ ಪ್ರಯತ್ನಗಳ ಭಾಗವಾಗಿ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ.