Published on: December 27, 2022

‘ಉತ್ತಮ ಆಡಳಿತ ದಿನ’

‘ಉತ್ತಮ ಆಡಳಿತ ದಿನ’

ಸುದ್ದಿಯಲ್ಲಿ ಏಕಿದೆ? ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಡಿ. 25ರಂದು ‘ಉತ್ತಮ ಆಡಳಿತ ದಿನ’ ಎಂದು ಪ್ರತಿವರ್ಷ ಆಚರಿಸಲಾಗುತ್ತದೆ.

ಮುಖ್ಯಾಂಶಗಳು

  • ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98 ನೇ ಜನ್ಮದಿನದಂದು ಅವರ ಸ್ಮಾರಕ ‘ಸದೈವ್ ಅಟಲ್’ ತೆರಳಿ ಪುಷ್ಪ ನಮನ ಸಲ್ಲಿಸಿದರು.
  • 2014ರಿಂದ ವಾಜಪೇಯಿ ಅವರನ್ನು ಗೌರವಿಸುವ ನಿಟ್ಟಿನಲ್ಲಿ ಈ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಅಲ್ಲದೆ ಸರ್ಕಾರವು ಡಿಸೆಂಬರ್ 19 ರಿಂದ 25 ರವರೆಗೆ ಉತ್ತಮ ಆಡಳಿತ ವಾರವನ್ನು ಆಚರಿಸಲಾಗುತ್ತಿದ್ದು, ಗ್ರಾಮದ ಕಡೆಗೆ ಆಡಳಿತ ಎಂಬ ಅಭಿಯಾನವನ್ನೂ ನಡೆಸತ್ತಿದೆ.
  • ಕರ್ನಾಟಕದಲ್ಲಿ ಹಿಂದಿನ ವರ್ಷಗಳಲ್ಲಿ ವಾಜಪೇಯಿ ಅವರ ಜನ್ಮ ದಿನವಾದ ಡಿಸೆಂಬರ್ 25ರಂದು ‘ಸುಶಾಸನ ದಿನ’ ಆಚರಿಸಲಾಗುತ್ತಿತ್ತು. ಈ ವರ್ಷ ಶಿಕ್ಷಣ ಇಲಾಖೆಗಳ ವ್ಯಾಪ್ತಿಯಲ್ಲಿ ಡಿಸೆಂಬರ್ ತಿಂಗಳು ಪೂರ್ತಿ (ಡಿಸೆಂಬರ್ 1 ರಿಂದ 31ರವರೆಗೆ) ‘ಸುಶಾಸನ ಮಾಸ’ವನ್ನಾಗಿ ಆಚರಿಸಲಾಗುತ್ತಿದೆ.

ಉದ್ದೇಶ

  • ಭಾರತದ ನಾಗರಿಕರಲ್ಲಿ ಸರ್ಕಾರದ ಹೊಣೆಗಾರಿಕೆಯ ಅರಿವು ಮೂಡಿಸಲು ಉತ್ತಮ ಆಡಳಿತ ದಿನವನ್ನು ವಾರ್ಷಿಕವಾಗಿ ಆಚರಿಸಲಾಗುತ್ತದೆ.

ಉತ್ತಮ ಆಡಳಿತ ದಿನವನ್ನು ಏಕೆ ಆಚರಿಸಲಾಗುತ್ತದೆ?

  • 2014ರ ಡಿ.23 ರಂದು ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಪಂಡಿತ್ ಮದನ್ ಮೋಹನ್ ಮಾಳವೀಯ (ಮರಣೋತ್ತರ) ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಿಸಲಾಯಿತು. ನಂತರ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಜಿ ಪ್ರಧಾನಿ ವಾಜಪೇಯಿ ಅವರ ಜನ್ಮದಿನವನ್ನು ಇನ್ನು ಮುಂದೆ ಭಾರತದಲ್ಲಿ ವಾರ್ಷಿಕವಾಗಿ ಉತ್ತಮ ಆಡಳಿತ ದಿನವಾಗಿ ಸ್ಮರಿಸಲಾಗುತ್ತದೆ ಎಂದು ಘೋಷಿಸಿತು.

ಅಟಲ್ ಬಿಹಾರಿ ವಾಜಪೇಯಿ

  • ಜನನ : 1924 ಡಿಸೆಂಬರ್ 25 ರಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಜನಿಸಿದರು.
  • ಅವರು ಮೂರು ಬಾರಿ ದೇಶದ ಪ್ರಧಾನಿ ಯಾಗಿದ್ದರು.
  • 1996ರಲ್ಲಿ ಮೊದಲ ಬಾರಿಗೆ ದೇಶದ ಪ್ರಧಾನಿಯಾದರು. ಎರಡನೇ ಬಾರಿ 1998-99ರಲ್ಲಿ ಮತ್ತೆ ಪ್ರಧಾನಿಯಾಗಿ ಗದ್ದುಗೆ ಏರಿದರು. ಇದರ ನಂತರ, ಅವರು 1999ರ ಅಕ್ಟೋಬರ್ 13 ರಂದು ಮೂರನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾದರು.
  • ವಾಜಪೇಯಿ ಅವರು 47 ವರ್ಷಗಳ ಕಾಲ ಸಂಸತ್ ಸದಸ್ಯರಾಗಿದ್ದರು. ಲೋಕಸಭೆಯಿಂದ 11 ಬಾರಿ ಮತ್ತು ರಾಜ್ಯಸಭೆಯಿಂದ ಎರಡು ಬಾರಿ ಆಯ್ಕೆಯಾಗಿದ್ದರು.
  • ವಾಜಪೇಯಿ ಅವರು ವಿಶ್ವಸಂಸ್ಥೆಯಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದ ಮೊದಲ ನಾಯಕರಾಗಿದ್ದಾರೆ.
  • 2015ರ ಮಾರ್ಚ್ 27 ರಂದು ಅವರಿಗೆ ‘ಭಾರತ ರತ್ನ’ ಪ್ರಶಸ್ತಿಯನ್ನು ನೀಡಿ ಗೌರವ ಸಲ್ಲಿಸಲಾಯಿತು.
  • 2018ರ ಆಗಸ್ಟ್ 16ರಂದು ನಿಧನ ಹೊಂದಿದರು.