Published on: November 15, 2021

ಉತ್ತರ ಪ್ರದೇಶದಲ್ಲಿ ಗೋವುಗಳಿಗೂ ಬಂತು ಆಂಬುಲೆನ್ಸ್ ಸೇವೆ

ಉತ್ತರ ಪ್ರದೇಶದಲ್ಲಿ ಗೋವುಗಳಿಗೂ ಬಂತು ಆಂಬುಲೆನ್ಸ್ ಸೇವೆ

ಸುದ್ಧಿಯಲ್ಲಿ ಏಕಿದೆ ? ದೇಶದಲ್ಲೇ ಮೊದಲ ಬಾರಿಗೆ ಉತ್ತರ ಪ್ರದೇಶದಲ್ಲಿ ಹಸುಗಳಿಗೆ  ಆಂಬುಲೆನ್ಸ್ ಸೇವೆಯನ್ನು ಒದಗಿಸುವ ಯೋಜನೆಗೆ ಚಾಲನೆ ನೀಡಲಾಗುತ್ತಿದೆ.

ಮುಖ್ಯಾಂಶಗಳು

  • ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಹಸುಗಳಿಗೆ ತ್ವರಿತವಾಗಿ ಚಿಕಿತ್ಸೆ ಲಭ್ಯವಾಗುವಂತೆ ಮಾಡಲು ರಾಜ್ಯ ಸರ್ಕಾರ ಆಂಬುಲೆನ್ಸ್ ಸೇವೆಯನ್ನು ಜಾರಿಗೆ ತರುತ್ತಿದೆ
  • ಪ್ರಾರಂಭಿಕ ಹಂತದಲ್ಲಿ ಈ ಯೋಜನೆಯಡಿ 515 ಆಂಬುಲೆನ್ಸ್ ಗಳು ಕಾರ್ಯನಿರ್ವಹಣೆ ಮಾಡಲಿದ್ದು, ದೇಶದಲ್ಲೇ ಮೊದಲ ಬಾರಿಗೆ ಇಂತಹ ಯೋಜನೆ ಜಾರಿಗೊಳ್ಳುತ್ತಿದೆ.
  • 112 ತುರ್ತು ಸೇವೆ ನಂಬರ್ ನಂತೆಯೇ ಈ ಸೇವೆಯೂ ಕಾರ್ಯನಿರ್ವಹಣೆ ಮಾಡಲಿದ್ದು, ತೀವ್ರವಾದ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಹಸುಗಳು ಬೇಗ ಚೇತರಿಸಿಕೊಳ್ಳುವುದಕ್ಕೆ ತ್ವರಿತವಾದ ಚಿಕಿತ್ಸೆ ಲಭ್ಯವಾಗಲು ಈ ಯೋಜನೆ ಸಹಕಾರಿಯಾಗಿದೆ.
  • ಡಿಸೆಂಬರ್ ನಲ್ಲಿ ಇದಕ್ಕಾಗಿ ಪ್ರತ್ಯೇಕ ಕಾಲ್ ಸೆಂಟರ್ ಪ್ರಾರಂಭವಾಗಲಿದ್ದು, ಕರೆ ಮಾಡಿದ 15-20 ನಿಮಿಷಗಳಲ್ಲಿ ಆಂಬುಲೆನ್ಸ್ ನಿಗದಿತ ಸ್ಥಳಕ್ಕೆ ಆಗಮಿಸಲಿದೆ.
  • ಇದೇ ವೇಳೆ ಉತ್ತಮ ಗುಣಮಟ್ಟದ ವೀರ್ಯ ಹಾಗೂ ಭ್ರೂಣ ಕಸಿ ತಂತ್ರಜ್ಞಾನದ ಮೂಲಕ ರಾಜ್ಯದಲ್ಲಿ ತಳಿ ಸುಧಾರಣೆ, ಅಭಿವೃದ್ಧಿ ಯೋಜನೆಗೂ ಹೆಚ್ಚಿನ ಒತ್ತು ನೀಡಲಿದ್ದೇವೆ