Published on: November 18, 2021

ಕರ್ತಾರ್ಪುರ ಕಾರಿಡಾರ್

ಕರ್ತಾರ್ಪುರ ಕಾರಿಡಾರ್

ಸುದ್ಧಿಯಲ್ಲಿ ಏಕಿದೆ ?  ಕರ್ತಾರ್‌ಪುರ ಕಾರಿಡಾರ್ ನ್ನು ಮತ್ತೆ ತೆರೆಯುವ ಭಾರತ ಸರ್ಕಾರದ ನಿರ್ಧಾರವನ್ನು ಪಾಕಿಸ್ತಾನದ ಉನ್ನತ ಸಿಖ್ ಸಂಸ್ಥೆ ಮತ್ತು ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ) ಸ್ವಾಗತಿಸಿದೆ, ಇದು ಸಿಖ್ ಧರ್ಮದ ಸಂಸ್ಥಾಪಕ ಗುರುನಾನಕ್ ದೇವ್ ಅವರ ಕೊನೆಯ ನಿವಾಸಕ್ಕೆ ಯಾವುದೇ ಅಡೆತಡೆಯಿಲ್ಲದೆ ಭೇಟಿ ನೀಡಲು ಭಾರತೀಯ ಸಿಖ್ಖರಿಗೆ ಸಹಾಯ ಮಾಡುತ್ತದೆ

ಕರ್ತಾರ್‌ಪುರ ಕಾರಿಡಾರ್

  • ಸಿಖ್ ಧರ್ಮದ ಸ್ಥಾಪಕ ಗುರುನಾನಕ್ ದೇವ್ ಅವರು ಅಂತಿಮ ಕ್ಷಣಗಳನ್ನು ಕಳೆದ ಪಾಕಿಸ್ತಾನದ ಗುರುದ್ವಾರ ದರ್ಬಾರ್ ಸಾಹಿಬ್ ನಿಂದ ಗುರುದಾಸ್ ಪುರ ಜಿಲ್ಲೆಯ ದೇರಾ ಬಾಬಾ ನಾನಕ್ ದೇಗುಲಕ್ಕೆ ಈ ಕರ್ತಾರ್ ಪುರ್ ಕಾರಿಡಾರ್ ಸಂಪರ್ಕ ಕಲ್ಪಿಸುತ್ತದೆ.
  • ಕಾರಿಡಾರ್ ಪಾಕಿಸ್ತಾನದ ಗುರುದ್ವಾರ ದರ್ಬಾರ್ ಸಾಹಿಬ್, ಗುರುನಾನಕ್ ದೇವ್ ಅವರ ಅಂತಿಮ ವಿಶ್ರಾಂತಿ ಸ್ಥಳವನ್ನು ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಡೇರಾ ಬಾಬಾ ನಾನಕ್ ದೇಗುಲಕ್ಕೆ ಸಂಪರ್ಕಿಸುತ್ತದೆ.
  • ಗುರುನಾನಕ್ ಜನ್ಮ ದಿನಾಚರಣೆಗೆ ಇನ್ನೂ ಮೂರು ದಿನಗಳು ಬಾಕಿಯಿರುವಂತೆಯೇ ಈ ಕಾರಿಡಾರ್ ಪುನರಾರಂಭಿಸುವ ಭಾರತ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಇದರಿಂದ ಭಾರತದ ಪಂಜಾಬ್ ನಿಂದ ಸಿಖ್ಖರು ಕರ್ತಾರ್ ಪುರ ಗುರುದ್ವಾರಕ್ಕೆ ಬರಲು ಅವಕಾಶವಾಗುತ್ತದೆ