Published on: January 10, 2022
ಕರ್ನಾಟಕ ಕೋವಿಡ್ ವಾರ್ ರೂಮ್ಗೆ ರಾಷ್ಟ್ರ ಪ್ರಶಸ್ತಿ
ಕರ್ನಾಟಕ ಕೋವಿಡ್ ವಾರ್ ರೂಮ್ಗೆ ರಾಷ್ಟ್ರ ಪ್ರಶಸ್ತಿ
ಸುದ್ಧಿಯಲ್ಲಿ ಏಕಿದೆ ? ಕರ್ನಾಟಕದಲ್ಲಿ ಕೊರೊನಾ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ಮನ್ನಣೆ ದೊರೆತಿದೆ. ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ನಡೆಸುತ್ತಿರುವ ನಿರ್ವಹಣೆಯಲ್ಲಿ ತೊಡಗಿರುವ ಕೋವಿಡ್ ರೂಮ್‌ಗೆ ಈಗ ರಾಷ್ಟ್ರಪ್ರಶಸ್ತಿ ದೊರೆತಿದೆ.
ಮುಖ್ಯಾಂಶಗಳು
- ಕೋವಿಡ್ ನಿರ್ವಹಣೆಯಲ್ಲಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಬಳಸುವ ವಿಭಾಗದಲ್ಲಿ ಈ ಪ್ರಶಸ್ತಿ ದೊರೆತಿದೆ. ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೋವಿಡ್ ವಾರ್ ರೂಮ್ ಮುಖ್ಯಸ್ಥ ಮುನೀಶ್ ಮೌದ್ಗಿಲ್ ತಂಡಕ್ಕೆ ಈ ಪ್ರಶಸ್ತಿ ಸಂದಿದೆ.
- ಹೈದರಾಬಾದ್‌ನಲ್ಲಿ ನಡೆದ ಇ-ಆಡಳಿತದ 24ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
- 2020ರ ಮಾರ್ಚ್‌ನಲ್ಲಿ ಕೋವಿಡ್ ಮೊದಲ ಅಲೆ ರಾಜ್ಯಕ್ಕೆ ಅಪ್ಪಳಿಸಿತ್ತು. ಮೊದಲ ಅಲೆ ಆರಂಭವಾದ 2- 3 ದಿನಗಳಲ್ಲಿ ವಾರ್‌ರೂಮ್ ಸ್ಥಾಪಿಸಲಾಗಿತ್ತು. ಕೊರೊನಾ ವಾಚ್ ಮೊಬೈಲ್ ಅಪ್ಲಿಕೇಶನ್ ಅನ್ನು ಮೊದಲು ರಚಿಸಲಾಯಿತು. ಸೋಂಕಿತರ ಸಂಪರ್ಕ ಪತ್ತೆ ಹಚ್ಚುವಿಕೆಗಾಗಿ ಅಪ್ಲಿಕೇಶನ್ ಅನ್ನು ಬಳಸುತ್ತಿರುವ ಏಕೈಕ ರಾಜ್ಯ ಕರ್ನಾಟಕವಾಗಿದೆ.