Published on: August 30, 2022

ಕರ್ನಾಟಕ ವಿವಿ ಕಾಯ್ದೆ ತಿದ್ದುಪಡಿ

ಕರ್ನಾಟಕ ವಿವಿ ಕಾಯ್ದೆ ತಿದ್ದುಪಡಿ

ಸುದ್ದಿಯಲ್ಲಿ ಏಕಿದೆ?

ಎಂಟು ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುವು ಮಾಡಿಕೊಡುವ ಉದ್ದೇಶದಿಂದ ‘ಕರ್ನಾಟಕ ವಿವಿಗಳ ಕಾಯ್ದೆ-2000’ಕ್ಕೆ ತಿದ್ದುಪಡಿ ತರಲು ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇದರಿಂದಾಗಿ ಚಾಮರಾಜನಗರ, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಬಾಗಲಕೋಟೆ, ಬೀದರ್ ಮತ್ತು ಮಂಡ್ಯ ವಿ.ವಿ.ಗಳ ಸ್ಥಾಪನೆ ಸುಗಮವಾಗಿ ನಡೆಯಲಿದೆ.

ಮುಖ್ಯಾಂಶಗಳು

  • ಹೊಸ ವಿ.ವಿ.ಗಳ ಪೈಕಿ ಕ್ರಮವಾಗಿ ಚಾಮರಾಜನಗರ ವಿ.ವಿ.ಯಲ್ಲಿ 18,  ಹಾಸನ ವಿ.ವಿ.ಯಲ್ಲಿ 36, ಹಾವೇರಿ 40, ಬೀದರ್ 140,  ಕೊಡಗು 24,  ಕೊಪ್ಪಳ 40 ಮತ್ತು ಬಾಗಲಕೋಟೆ ವಿವಿಗಳು 71 ಕಾಲೇಜುಗಳನ್ನು ಹೊಂದಿರಲಿವೆ. ಇವುಗಳ ಜತೆಗೆ ಮಂಡ್ಯ ವಿ.ವಿ. ವ್ಯಾಪ್ತಿಗೆ ಆ ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳು  ಬರಲಿವೆ.
  • ಮಂಡ್ಯ ವಿವಿ ಒಂದನ್ನು ಹೊರತುಪಡಿಸಿ ಮಿಕ್ಕ 7 ವಿ.ವಿ.ಗಳ ಆರಂಭವನ್ನು ಈ ವರ್ಷದ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ಇದಕ್ಕಾಗಿ ಈಗಾಗಲೇ ತಲಾ 2 ಕೋಟಿ ರೂ.ಗಳಂತೆ ಒಟ್ಟು 14 ಕೋಟಿ ರೂಪಾಯಿ ಒದಗಿಸಲಾಗಿದೆ. ಏಕೀಕೃತ ವಿವಿಯಾಗಿದ್ದ ಮಂಡ್ಯದ ಸರಕಾರಿ ಕಾಲೇಜನ್ನು ಪೂರ್ಣ ಪ್ರಮಾಣದ ವಿವಿಯಾಗಿ ಮಾಡುವ ತೀರ್ಮಾನವನ್ನು ಇತ್ತೀಚೆಗೆ ಕೈಗೊಳ್ಳಲಾಗಿತ್ತು.
  • ನೂತನ ವಿ.ವಿ.ಗಳ ಸ್ಥಾಪನೆಗೆ ಆರ್ಥಿಕ ಮತ್ತು ಯೋಜನಾ ಇಲಾಖೆಗಳು ಒಪ್ಪಿಗೆ ನೀಡಿವೆ. ಇವು ಕಡಿಮೆ ಸ್ಥಳ, ಕಡಿಮೆ ಸಿಬ್ಬಂದಿ ಮತ್ತು ಕಡಿಮೆ ವೆಚ್ಚದೊಂದಿಗೆ ಕಾರ್ಯ ಚಟುವಟಿಕೆ ನಡೆಸಲಿವೆ.

ಉದ್ದೇಶ

  • ಜಿಲ್ಲೆಗೊಂದು ವಿವಿ ಇರಬೇಕು ಎನ್ನುವುದು ಸರಕಾರದ ತೀರ್ಮಾನವಾಗಿದೆ. ಈ ಮೂಲಕ ಶೈಕ್ಷಣಿಕ ಅಸಮತೋಲನ ನಿವಾರಣೆ ಮಾಡಲಾಗುವುದು. ಜೊತೆಗೆ, ಯುವಜನರಿಗೆ ಮನೆ ಬಾಗಿಲಲ್ಲೇ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶವನ್ನು ಹೊಂದಲಾಗಿದೆ.