Published on: September 17, 2021

ಕಲ್ಯಾಣ ಕರ್ನಾಟಕ ಉತ್ಸವ

ಕಲ್ಯಾಣ ಕರ್ನಾಟಕ ಉತ್ಸವ

ಸುದ್ಧಿಯಲ್ಲಿ ಏಕಿದೆ? ಸೆಪ್ಟೆಂಬರ್ 17 ರಂದು ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಗುತ್ತದೆ. ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಅವಧಿಯಲ್ಲಿ ಹೈದ್ರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಲಾಗಿದೆ. ಅಲ್ಲದೇ ಸೆಪ್ಟೆಂಬರ್ 17 ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ.

‘ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ’

  • ಬೀದರ್ ಮತ್ತು ಅವಿಭಜಿತ ಕಲಬುರ್ಗಿ, ರಾಯಚೂರು ಜಿಲ್ಲೆಗಳು ಹಿಂದೆ ಹೈದರಾಬಾದ್ ನಿಜಾಮರ ಆಡಳಿತಕ್ಕೆ ಒಳಪಟ್ಟಿದ್ದವು. ಆಗಸ್ಟ್ 15, 1947 ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ದೊರೆಯಿತು. ಆದರೆ, ಹೈದರಾಬಾದ್ ನಿಜಾಮ ತನ್ನ ಸಂಸ್ಥಾವನ್ನು ಸ್ವತಂತ್ರ ಭಾರತದಲ್ಲಿ ವಿಲೀನಗೊಳಿಸಲು ಒಪ್ಪದ ಕಾರಣ ಹೈದರಾಬಾದ್ ಕರ್ನಾಟಕದ ಈ ಭಾಗಕ್ಕೆ ಸ್ವಾತಂತ್ರ್ಯ ದೊರೆಯಲೇ ಇಲ್ಲ.
  • ಅಂದಿನ ಕೇಂದ್ರ ಗೃಹ ಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಬಿಗಿ ನಿಲುವಿನಿಂದಾಗಿ ಹೈದರಾಬಾದ್ ನಿಜಾಮ ಸಂಸ್ಥಾನ 1948 ಸೆಪ್ಟೆಂಬರ್ 17 ರಂದು ಭಾರತ ಒಕ್ಕೂಟದಲ್ಲಿ ವಿಲೀನವಾಯಿತು. ಈ ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಸೆ.17ರಂದು. ಹೀಗಾಗಿ ಪ್ರತಿ ವರ್ಷವೂ ಸೆಪ್ಟೆಂಬರ್ 17ನ್ನು ಈ ಜಿಲ್ಲೆಗಳಲ್ಲಿ ‘ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ’ ಎಂದು ಆಚರಿಸಲಾಗುತ್ತಿತ್ತು.