Published on: July 13, 2022

ಕವಿ ಸರ್ವಜ್ಞ

ಕವಿ ಸರ್ವಜ್ಞ

ಸುದ್ದಿಯಲ್ಲಿ ಏಕಿದೆ?

ಕವಿ ಸರ್ವಜ್ಞನ ಹುಟ್ಟೂರಾದ ಹಾವೇರಿ ಜಿಲ್ಲೆಯ ಅಬಲೂರಿನಲ್ಲಿ ಅವರ ತಂದೆ ತಾಯಿಯ ಹೆಸರಿನಲ್ಲಿ ಕಟ್ಟಡ ನಿರ್ಮಾಣ ಹಾಗೂ ಮಾಸೂರಿನ ಸಮಾಧಿ ಸ್ಥಳ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಅನುಮೋದನೆ ನೀಡಿದೆ.

ಮುಖ್ಯಾಂಶಗಳು

  • ಜೊತೆಗೆ ಹಿರೇಕೆರೂರು ಪಟ್ಟಣದಲ್ಲಿ ಅಧ್ಯಯನ ಕೇಂದ್ರ ಸ್ಥಾಪಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
  • ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಮುಖಾಂತರ ಕೈಗೊಳ್ಳುಲಾಗುತ್ತದೆ .
  • ಸರ್ವಜ್ಞರ ನೆನಪಿಗೆ ರೂಪಿಸುವ ಯೋಜನೆಗಳನ್ನು ಅರ್ಥಪೂರ್ಣವಾಗಿ ಹಾಗೂ ಆಯಾ ವಿಷಯಗಳ ಪರಿಣತರೊಂದಿಗೆ ಸಮಾಲೋಚನೆ ನಡೆಸಿ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಸರ್ವಜ್ಞ

  • ಸರ್ವಜ್ಞ (ಸಂಸ್ಕೃತ ದಲ್ಲಿ ಎಲ್ಲವನ್ನೂ ತಿಳಿದವ ಎನ್ನಲಾಗಿದೆ). ಈತ ಕನ್ನಡದ ತ್ರಿಪದಿ ಸಾಹಿತ್ಯ ದ ಪ್ರಮುಖ ಕವಿ. ಪ್ರಮುಖವಾಗಿ ತ್ರಿಪದಿಗಳೆಂಬ ಮೂರು ಸಾಲಿನ ವಚನ
  • ಈತನು ಜೀವಿಸಿದ್ದ ಕಾಲ ಸುಮಾರಾಗಿ ೧೬ ನೇ ಶತಮಾನದ ಆದಿಭಾಗ ಎಂದು ಪ್ರತಿಪಾದಿಸಲಾಗಿದೆ
  • ಪುಷ್ಪದತ್ತ ಈತನ ನಿಜನಾಮವಾಗಿದ್ದು, ಸರ್ವಜ್ಞ ಎಂಬುದು ಈತನ ಕಾವ್ಯನಾಮ
  • ಸರ್ವಜ್ಞ ಜನಿಸಿದ್ದು ಇಂದಿನ ಹಾವೇರಿ ಜಿಲ್ಲೆ ಹಿರೇಕೇರೂರು ತಾಲ್ಲೂಕು ಅಬಲೂರು
  • ಒಟ್ಟು ಸುಮಾರು ೧,೦೦೦ ತ್ರಿಪದಿಗಳು ಸರ್ವಜ್ಞನ ಹೆಸರಿನಲ್ಲಿ ದಾಖಲಾಗಿವೆ
  • ಸರ್ವಜ್ಞನನ್ನು ಕುರಿತು ಸರ್ವಜ್ಞ ಮೂರ್ತಿ ಎಂಬ ಕನ್ನಡ ಚಲನ ಚಿತ್ರವು 1965 ರಲ್ಲಿ ತೆರೆಕಂಡಿತು.