Published on: March 13, 2024

ಕಾಟನ್‌ ಕ್ಯಾಂಡಿ ನಿಷೇಧ

ಕಾಟನ್‌ ಕ್ಯಾಂಡಿ ನಿಷೇಧ

ಸುದ್ದಿಯಲ್ಲಿ ಏಕಿದೆ? ಕೃತಕ ಬಣ್ಣ ಬಳಸುವುದರಿಂದ ಆರೋಗ್ಯದ ಮೇಲೆ ಭಾರೀ ದುಷ್ಪರಿಣಾಮ ಬೀರುವುದರಿಂದ ಕರ್ನಾಟಕದಲ್ಲಿ ಕಲರ್‌ ಕಾಟನ್‌ ಕ್ಯಾಂಡಿ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ಜೊತೆಗೆ ಗೋಬಿ ಮಂಚೂರಿ ತಯಾರಿಸುವಾಗ ಕೃತಕ ಬಣ್ಣ ಬಳಸುವುದನ್ನು ಕೂಡ ನಿಷೇಧಿಸಿ ಸರ್ಕಾರ ಆದೇಶಿಸಿದೆ.

ಮುಖ್ಯಾಂಶಗಳು

  • ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬೆರಕೆ ಹಿನ್ನೆಲೆ ಈ ಹಿಂದೆ ವಿವಿಧ ಸ್ಯಾಂಪಲ್ ಗಳ ಪರೀಕ್ಷೆಗೆ ನೀಡಲಾಗಿತ್ತು ಗೋಬಿ ಮಂಚೂರಿಯಲ್ಲಿ ಮಾದರಿಗಳಲ್ಲಿ ಆರೋಗ್ಯಕ್ಕೆ ಮಾರಕವಾದ ಅಂಶ ಹಾಗೂ ಬಳಕೆಯ ಬಣ್ಣ ಸೇರಿದಂತೆ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದೆ.
  • ಕಲಬೆರಕೆ ಕಲರ್ ಬಳಕೆ ಮಾಡೋದು ಮತ್ತು ಟಾರ್‌ಟ್ರಾಸೈನ್‌ ಸನ್ಸೆಟ್‌ ಯೆಲ್ಲೋ‌ ಮತ್ತು ಕಾರ್ಮೋಸಿನ್‌ ಎಂಬ ರಾಸಾಯನಿಕಗಳು ಇದರಲ್ಲಿ ಕಂಡುಬಂದಿವೆ
  • ಕಾಟನ್‌ ಕ್ಯಾಂಡಿಗೆಯಲ್ಲಿ ಕೂಡಾ ಟಾರ್‌ಟ್ರಾಸೈನ್‌ ಸನ್ಸೆಟ್‌ ಯೆಲ್ಲೋ‌ ಮತ್ತು ವಿಶೇಷವಾಗಿ ರೋಡಮೈನ್‌ ಬಿ ಬಳಸಲಾಗಿದೆ.
  • ಕೃತಕ ಬಣ್ಣ ಬಳಕೆ ಮಾಡಿ ಕ್ಯಾಂಡಿ ತಯಾರು ಮಾಡಬಹುದು. ಆದರೆ ರೊಡಮೈನ್ ಬಿ, ಟಾರ್ಟ್ರಾಜಿನ್​ನಂತಹ ಯಾವುದೇ ಬಣ್ಣ ಬಳಸಬಾರದು. ಇದು ಆರೋಗ್ಯಕ್ಕೆ ಹಾನಿಕಾರಕ. ಇದು ಸಂಪೂರ್ಣ ಕಾನೂನು ಬಾಹಿರ. ಪಿಂಕ್ ಕಲರ್ ಬರಲು ರೊಡಮೈನ್ ಬಿ ಬಳಸುತ್ತಾರೆ.
  • ಇದನ್ನು ಉಲ್ಲಂಘಿಸಿದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಅಡಿಯಲ್ಲಿ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಜೊತೆಗೆ 10 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುವುದು.