Published on: August 25, 2022

ಕಾಮನ್ ವೆಲ್ತ್ ಗೇಮ್ಸ್ (2022)

ಕಾಮನ್ ವೆಲ್ತ್ ಗೇಮ್ಸ್ (2022)

ಸುದ್ದಿಯಲ್ಲಿ ಏಕಿದೆ?

ಕರ್ನಾಟಕ ಸರ್ಕಾರವು ಕ್ರಿಕೆಟ್‌ನಲ್ಲಿ ಬೆಳ್ಳಿ ಪದಕ ವಿಜೇತೆ ರಾಜೇಶ್ವರಿ ಗಾಯಕ್ವಾಡ್ ಅವರಿಗೆ 15 ಲಕ್ಷ ಹಾಗೂ ವೇಟ್ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಗುರುರಾಜ ಪೂಜಾರಿಗೆ 8 ಲಕ್ಷ ನಗದು ಪುರಸ್ಕಾರ, ಬ್ಯಾಡ್ಮಿಂಟನ್ ಮಿಕ್ಸಡ್ ಡಬಲ್ಸ್‌ನಲ್ಲಿ ಬೆಳ್ಳಿ ಗೆದ್ದ ಕನ್ನಡತಿ ಅಶ್ವಿನಿ ಪೊನ್ನಪ್ಪ ಅವರಿಗೆ ರಾಜ್ಯ ಸರ್ಕಾರದಿಂದ 15 ಲಕ್ಷ ರೂ ನಗದು ಪುರಸ್ಕಾರವನ್ನುಘೋಷಿಸಲಾಗಿದೆ.

ಮುಖ್ಯಾಂಶಗಳು

  • ಕರ್ನಾಟಕ ಸರ್ಕಾರ ಈಗಾಗಲೇ ಕ್ರೀಡಾಪಟುಗಳಿಗೆ ಶೇ 2 ರಷ್ಟು ಮೀಸಲಾತಿಯನ್ನು ಪೊಲೀಸ್‌ ಮತ್ತು ಅರಣ್ಯ ಇಲಾಖೆಗಳಲ್ಲಿ ಮೀಸಲಿಟ್ಟಿದೆ. ಮೀಸಲಾತಿಯನ್ನು ಇತರೆ ಇಲಾಖೆಗಳಿಗೂ ವಿಸ್ತರಣೆ ಮಾಡುವ ಕಡತವನ್ನು ಅನುಮೋದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅಮೃತ ಕ್ರೀಡಾ ದತ್ತು ಯೋಜನೆ

  • ಅಮೃತ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕರ್ನಾಟಕದ ಮುಖ್ಯಮಂತ್ರಿಗಳು ಅಮೃತ ಕ್ರೀಡಾ ದತ್ತು ಯೋಜನೆ ಘೋಷಿಸಿದ್ದಾರೆ.
  • ಅಮೃತ ಕ್ರೀಡಾ ದತ್ತು ಯೋಜನೆ ಮೂಲಕ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ 2024 ರ ಪ್ಯಾರಿಸ್ ಓಲಂಪಿಕ್ಸಗೆ ಸಿದ್ದತೆ ಮಾಡಲಾಗುತ್ತಿದೆ.
  • 75 ಕ್ರೀಡಾಪಟುಗಳನ್ನು ವೈಜ್ಞಾನಿಕವಾಗಿ ಗುರುತಿಸಿ ಅಂತರಾಷ್ಟ್ರೀಯ ಮಟ್ಟದ ತರಬೇತಿ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ.
  • ರಾಜ್ಯದಲ್ಲಿ ಗ್ರಾಮೀಣ ಮಟ್ಟದಲ್ಲಿ ಕ್ರೀಡಾಪ್ರತಿಭೆಗಳ ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತಿರುವ, 2.31 ಲಕ್ಷ ಕ್ರೀಡಾಪ್ರತಿಭೆಗಳನ್ನ ಗುರುತಿಸಲಾಗಿದೆ.
  • ಖೇಲೊ ಇಂಡಿಯಾ ಕೇಂದ್ರಗಳಲ್ಲಿ, ಅಮೃತ ಕ್ರೀಡಾ ದತ್ತು ಯೋಜನೆ ಅಡಿ ಪದಕ ಗೆಲ್ಲುವ ಸಾಮರ್ಥ್ಯ ಇರುವ ಆಯ್ದ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಅಂತರಾಷ್ಟ್ರೀಯ ಮಟ್ಟದ ತರಬೇತಿ ಕೊಡುವುದು

ಬ್ಯಾಸ್ಕೆಟ್ ಬಾಲ್ ರಾಜ್ಯದ ಕ್ರೀಡೆ : ಕ್ರೀಡಾ ದತ್ತು ಯೋಜನೆ ಜಾರಿಯಲ್ಲಿರುವ ಮೊಟ್ಟ ಮೊದಲ ರಾಜ್ಯ ಕರ್ನಾಟಕ. ಕ್ರೀಡಾಂಗಣಗಳ ಅಭಿವೃದ್ಧಿಯನ್ನೂ ಮಾಡಲಾಗುತ್ತಿದೆ. ಬ್ಯಾಸ್ಕೆಟ್ ಬಾಲ್ ರಾಜ್ಯದ ಕ್ರೀಡೆ ಎಂದು ಅಳವಡಿಸಿಕೊಳ್ಳಲಾಗಿದೆ.

ಕಾಮನ್ ವೆಲ್ತ್ ಗೇಮ್ಸ್ (2022)

  • ಈ ಬಾರಿಯ ಬರ್ಮಿಂಗ್ ಹ್ಯಾಮ್ ನ (2022) ಕಾಮನ್ ವೆಲ್ತ್ ಗೇಮ್ಸ್ ನಲ್ಲಿ 4,500ಕ್ಕೂ ಹೆಚ್ಚು ಅಥ್ಲೆಟ್ ಗಳು 72 ದೇಶಗಳಿಂದ ಭಾಗವಹಿಸಿದ್ದವು. 215 ಕ್ರೀಡಾಪಟುಗಳ ಭಾರತ ತಂಡ 22 ಚಿನ್ನ, 16 ಬೆಳ್ಳಿ ಮತ್ತು 23 ಕಂಚು ಸೇರಿದಂತೆ ಒಟ್ಟಾರೆ 61 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಗಳಿಸಿ ತನ್ನ ಅಭಿಯಾನವನ್ನು ಕೊನೆಗೊಳಿಸಿತು.
  • ಆಸ್ಟ್ರೇಲಿಯಾ, ಆತಿಥೇಯ ಇಂಗ್ಲೆಂಡ್ ಮತ್ತು ಕೆನಡಾ ಅನುಕ್ರಮವಾಗಿ ಮೊದಲ ಮೂರು ಸ್ಥಾನಗಳನ್ನು ಪಡೆದುಕೊಂಡಿವೆ. ಸಾಂಪ್ರದಾಯಿಕವಾಗಿ ಕಾಮನ್ ವೆಲ್ತ್ ಗೇಮ್ಸ್ ಫೆಡರೇಶನ್ ಬರ್ಮಿಂಗ್ಯಾಮ್ ನಲ್ಲಿ ಧ್ವಜವನ್ನು ಇಳಿಸಿ ಮುಂದಿನ ಸಲ 2026ರಲ್ಲಿ ಕಾಮನ್ ವೆಲ್ತ್ ಗೇಮ್ಸ್ ನ ಆತಿಥ್ಯ ವಹಿಸಿಕೊಂಡಿರುವ ದೇಶವಾದ ಆಸ್ಟ್ರೇಲಿಯಾಕ್ಕೆ ಧ್ವಜವನ್ನು ನೀಡಲಾಯಿತು.