Published on: October 25, 2021

ಕಿತ್ತೂರು ಕರ್ನಾಟಕ

ಕಿತ್ತೂರು ಕರ್ನಾಟಕ

ಸುದ್ಧಿಯಲ್ಲಿ ಏಕಿದೆ?  ಹೈದರಾಬಾದ್-ಕರ್ನಾಟಕ ಭಾಗವನ್ನು ಕಲ್ಯಾಣ ಕರ್ನಾಟಕವಾಗಿ ಮರುನಾಮಕರಣ ಮಾಡಿದ ರೀತಿಯಲ್ಲಿಯೇ ಉತ್ತರ ಕರ್ನಾಟಕ ಭಾಗದ ಬಹುದಿನಗಳ ಬೇಡಿಕೆಯಾಗಿರುವ ಮುಂಬೈ-ಕರ್ನಾಟಕ ಪ್ರಾಂತ್ಯವನ್ನು ಕಿತ್ತೂರು ಕರ್ನಾಟಕ ಎಂದು ಘೋಷಿಸಬೇಕೆನ್ನುವ ಕೂಗಿಗೆ ಶೀಘ್ರದಲ್ಲಿಯೇ ಸರ್ಕಾರದ ಅಧಿಕೃತ ಮುದ್ರೆ ಬೀಳಲಿದೆ.

ಇತಿಹಾಸ

  • ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ನಡೆಸಿದ ಹೋರಾಡಿದ್ದಳು . ಚನ್ನಮ್ಮನಿಂದ ಕಿತ್ತೂರು ಪ್ರಸಿದ್ಧವಾಗಿದೆ. ಕಿತ್ತೂರು ಚೆನ್ನಮ್ಮ ಹುಟ್ಟಿದ್ದು 23 ಅಕ್ಟೋಬರ್ 1778ರಲ್ಲಿ. ಬೆಳಗಾವಿಯಿಂದ ಉತ್ತರಕ್ಕೆ ಸುಮಾರು 6 ಕಿ.ಮಿ. ದೂರದಲ್ಲಿರುವ ಕಾಕತಿ ಅವಳ ಹುಟ್ಟೂರು.
  • ಕಿತ್ತೂರು ಚೆನ್ನಮ್ಮ ಝಾನ್ಸಿಯ ರಾಣಿ ಲಕ್ಷ್ಮಿಬಾಯಿಯವರಿಗಿಂತ 40 ವರ್ಷಗಳ ಮೊದಲೇ ಸ್ವಾತಂತ್ರ್ಯಕ್ಕಾಗಿ ಕತ್ತಿ ಝಳಪಿಸಿದ್ದರು. ಈ ಐತಿಹಾಸಿಕ ಸಾಧನೆಯನ್ನು ಜಗತ್ತಿಗೆ ಸಾರುವ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪ್ರಪ್ರಥಮ ಮಹಿಳೆ ಎಂಬುದನ್ನು ಸಾಬೀತುಪಡಿಸಬೇಕಿದೆ. ಬ್ರಿಟೀಷರ ವಿರುದ್ಧ ಹೋರಾಟಕ್ಕೆ ಧುಮುಕಿದ ಕಿತ್ತೂರು ರಾಣಿ ಚೆನ್ನಮ್ಮ ಇಂದಿನ ಯುವ ಸಮುದಾಯ ಹಾಗೂ ಮಹಿಳೆಯರಿಗೆ ಪ್ರೇರಣೆಯಾಗಿದ್ದಾರೆ. ಸಂಗೊಳ್ಳಿ ರಾಯಣ್ಣ ಹಾಗೂ ಚೆನ್ನಮ್ಮ ನಡುವೆ ತಾಯಿ-ಮಗನ‌ ಬಾಂಧವ್ಯವಿತ್ತು.

ಕಿತ್ತೂರು ಉತ್ಸವ-2021

  • ಕಿತ್ತೂರು ವಿಜಯೋತ್ಸವದ ಸವಿನೆನಪಿಗಾಗಿ ಬೆಳಗಾವಿ ಜಿಲ್ಲೆಯಾದ್ಯಂತ ಸಂಚರಿಸಿದ ವೀರಜ್ಯೋತಿಯನ್ನು ಸಂಭ್ರಮದಿಂದ ಬರಮಾಡಿಕೊಂಡು ಧ್ವಜಾರೋಹಣ ನೆರವೇರಿಸುವ ಮೂಲಕ ಕಿತ್ತೂರು ಉತ್ಸವಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು.
  • ಪ್ರತಿವರ್ಷ ನಡೆಯುವ ಉತ್ಸವದ ಸಂಪ್ರದಾಯದಂತೆ ಚೆನ್ನಮ್ಮನ ಸಮಾಧಿ ಸ್ಥಳ ಬೈಲಹೊಂಗಲದಿಂದ ಹೊರಟು ಜಿಲ್ಲೆಯಾದ್ಯಂತ ಸಂಚರಿಸಿದ ವೀರಜ್ಯೋತಿಯನ್ನು ಕಿತ್ತೂರು ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ ಸ್ವಾಗತಿಸಲಾಯಿತು.
  • ಕಿತ್ತೂರು ಉತ್ಸವ 25ವರ್ಷಗಳನ್ನ ಪೂರೈಸುತ್ತಿದೆ.
  • ಈ ಮೊದಲು 1997 ರಲ್ಲಿ ಸರ್ಕಾರದ ವತಿಯಿಂದ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಲಾಗಿತ್ತು. ಅಂದಿನ ಸಿಎಂ ಜೆ.ಹೆಚ್‌. ಪಟೇಲ್ ಉತ್ಸವಕ್ಕೆ ಚಾಲನೆ ನೀಡಿದ್ದರು. ಆ ಬಳಿಕ ಇದೀಗ ಎರಡನೇ ಬಾರಿಗೆ ಕರ್ನಾಟಕ ಮುಖ್ಯಮಂತ್ರಿಯಿಂದ ಕಿತ್ತೂರು ಉತ್ಸವಕ್ಕೆ ಚಾಲನೆ ಲಭಿಸಿದೆ.