Published on: December 29, 2022

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ

ಸುದ್ದಿಯಲ್ಲಿ ಏಕಿದೆ?  ಸಚಿವೆ ಸ್ಮೃತಿ ಇರಾನಿ ಅವರು ದೇವಳದ ಕಿರುಷಷ್ಠಿ ಮಹೋತ್ಸವದ ಕಾರ್ತಿಕ ವೇದಿಕೆಯಲ್ಲಿ  ಪವಿತ್ರ ಶ್ರದ್ಧಾಕೇಂದ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೇಂದ್ರ ಸರ್ಕಾರದ ‘ಸ್ವದೇಶಿ ದರ್ಶನ್’ ಯೋಜನೆಯನ್ನು ಜಾರಿಗೆ ತರಲು ಉತ್ಸುಕಳಾ ಗಿದ್ದೇ ನೆ ಎಂದು ಹೇಳಿದರು.

ಮುಖ್ಯಾಂಶಗಳು

  • ದೇವಳದಿಂದ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಕಳಿಸಿ, ಅಲ್ಲಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಬಂದರೆ ಖಂಡಿತವಾಗಿಯೂ ಯೋಜನೆ ಜಾರಿಗೊಳಿಸಲಾಗುತ್ತದೆ’

ಸ್ವದೇಶ್ ದರ್ಶನ್ ಯೋಜನೆ

  • ದೇಶದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ಮೂಲ ಉದ್ದೇಶದೊಂದಿಗೆ ಕೇಂದ್ರ ಸರ್ಕಾರವು ಸ್ವದೇಶ್ ದರ್ಶನ್ ಯೋಜನೆ ಆರಂಭಿಸಿದೆ.
  • ಸಚಿವಾಲಯ :ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ
  • ಪ್ರಾರಂಭ :2014-15
  • ಯೋಜನೆ: ಪ್ರವಾಸೋದ್ಯಮ ವರ್ತುಲ ಯೋಜನೆ
  • ವಿಭಿನ್ನ ವಿಷಯದ ಪ್ರವಾಸಿ ಸರ್ಕ್ಯೂಟ್‌ಗಳನ್ನು ಸಂಯೋಜಿಸುವ ಮೂಲಕ ಒಟ್ಟಾರೆ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಯೋಜನೆಯನ್ನು ಪ್ರಾರಂಭಿಸಲಾಗಿದೆ.

ಯೋಜನೆಯ ಉದ್ದೇಶಗಳು:

  • ಪ್ರವಾಸೋದ್ಯಮದ ಮೂಲಕ ಆರ್ಥಿಕ ಬೆಳವಣಿಗೆ. ಜೊತೆಗೆ ಉದ್ಯೋಗ ಸೃಷ್ಟಿ.
  • ಸಂಭಾವ್ಯ ಪ್ರವಾಸಿ ತಾಣಗಳ ಯೋಜಿತ ಮತ್ತು ಆದ್ಯತೆಯ ಅಭಿವೃದ್ಧಿ.
  • ಪ್ರವಾಸಿ ಕೇಂದ್ರಗಳ ಆಕರ್ಷಣೆಯನ್ನು ಹೆಚ್ಚಿಸುವುದು ಮತ್ತು ಮೂಲಸೌಕರ್ಯ ಅಭಿವೃದ್ಧಿ.
  • ಸಮುದಾಯ ಆಧಾರಿತ ಅಭಿವೃದ್ಧಿ. ಪ್ರವಾಸಿ ಕೇಂದ್ರಗಳ ಅಭಿವೃದ್ಧಿ ಮೂಲಕ ಬಡವರ ಆರ್ಥಿಕ ಅಭಿವೃದ್ಧಿ.
  • ಪ್ರವಾಸೋದ್ಯಮದ ಮಹತ್ವದ ಬಗ್ಗೆ ಸ್ಥಳೀಯ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಮತ್ತು ಸ್ಥಳೀಯರ ಆರ್ಥಿಕ ಅಭಿವೃದ್ಧಿ ಮತ್ತು ಜೀವನಮಟ್ಟ ಸುಧಾರಣೆ.
  • ವಿಷಯಾಧಾರಿತ ಪ್ರವಾಸೋದ್ಯಮದ ಅಭಿವೃದ್ಧಿಯ ಮೂಲಕ ದೇಶದ ರಾಷ್ಟ್ರೀಯ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿ ತೋರಿಸುವುದು.
  • ಪ್ರವಾಸಿಗರ ಸಂಖ್ಯೆಯನ್ನು ಹೆಚ್ಚಿಸಲು ಪ್ರವಾಸಿ ಕೇಂದ್ರಗಳಲ್ಲಿ ಸೇವಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು.

ಆರ್ಥಿಕ ನೆರವು

  • ಸ್ವದೇಶ್ ದರ್ಶನ್ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಹಯೋಗದಲ್ಲಿ ಅನುಷ್ಠಾನ ಮಾಡಲಾಗುತ್ತಿದೆ. ಈ ಯೋಜನೆಯು ಶೇ.100 ರಷ್ಟು ಕೇಂದ್ರ ಪುರಸ್ಕೃತವಾಗಿದೆ.
  • ರಾಜ್ಯ ಸರ್ಕಾರವು ಇತರ ಯೋಜನೆಗಳೊಂದಿಗೆ ‘ಸಿಎಸ್‌ಆರ್’ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯ ಮೂಲಕವೂ ನಿಧಿಯನ್ನು ಸಂಗ್ರಹಿಸಬಹುದು.
  • ಯೋಜನೆಗೆ ಹಣಕಾಸು ಒದಗಿಸಲು ಸರ್ಕಾರಿ- ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿಯೂ ಹೂಡಿಕೆ ಮಾಡಬಹುದು.

ಪ್ರವಾಸಿ ಸರ್ಕ್ಯೂಟ್

  • ಕನಿಷ್ಠ ಮೂರು ಪ್ರಮುಖ ಪ್ರವಾಸಿ ಸ್ಥಳಗಳನ್ನು ಹೊಂದಿರುವ ಮಾರ್ಗಕ್ಕೆ ಪ್ರವಾಸಿ ಸರ್ಕ್ಯೂಟ್ ಎಂದು ವ್ಯಾಖ್ಯಾನಿಸಲಾಗಿದೆ. ಪ್ರವಾಸಿಗರು ಆರಾಮದಾಯಕ ಪ್ರಯಾಣ ಮತ್ತು ಪ್ರವಾಸಿ ಸ್ಥಳದ ಆಕರ್ಷಣೆಯನ್ನು ಆನಂದಿಸಬಹುದು. ಸರ್ಕ್ಯೂಟ್ ಒಂದು ರಾಜ್ಯಕ್ಕೆ ಸೀಮಿತವಾಗಿರಬಹುದು ಅಥವಾ ಹಲವಾರು ರಾಜ್ಯಗಳಿಗೆ ವಿಸ್ತರಿಸಬಹುದು.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ

  • ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಸುಬ್ರಹ್ಮಣ್ಯ ಗ್ರಾಮದಲ್ಲಿರುವ ಹಿಂದೂ ದೇವಾಲಯವಾಗಿದೆ.
  • ಈ ದೇವಾಲಯವು ಪಶ್ಚಿಮ ಘಟ್ಟಗಳ ಶ್ರೇಣಿಯಲ್ಲಿ ಕುಮಾರ ಧಾರಾ ನದಿ ದಂಡೆಯಲ್ಲಿದೆ. ನದಿಯ ಮೂಲವು ಕುಮಾರ ಪರ್ವತದಲ್ಲಿದೆ.
  • ಕುಕ್ಕೆ ಸುಬ್ರಹ್ಮಣ್ಯವು ನಾಗದೋಷಕ್ಕೆ ಸಂಬಂಧಿಸಿದ ಪೂಜೆಗಳಿಗೆ ಹೆಚ್ಚು ಹೆಸರುವಾಸಿಯಾಗಿದೆ. ಅವುಗಳಲ್ಲಿ ಮುಖ್ಯವಾಗಿ ಆಶ್ಲೇಷ ಬಲಿ ಪೂಜೆ ಮತ್ತು ಸರ್ಪ ಸಂಸ್ಕಾರ ಈ 2 ಪೂಜೆಯನ್ನು ವಿಶೇಷವಾಗಿ ನೆರವೇರಿಸಲಾಗುತ್ತದೆ.