Published on: August 30, 2022

ಕೃಷಿ ಅರಣ್ಯ ಯೋಜನೆ:

ಕೃಷಿ ಅರಣ್ಯ ಯೋಜನೆ:

ಸುದ್ದಿಯಲ್ಲಿ ಏಕಿದೆ?

ಕಾವೇರಿ ಜಲಾನಯನ ಪ್ರದೇಶದ ಒಂಬತ್ತು ಜಿಲ್ಲೆಗಳ ವ್ಯಾಪ್ತಿಯಲ್ಲಿ ಈಶಾ ಫೌಂಡೇಷನ್‌ನ ಕಾವೇರಿ ಕೂಗು ಹಾಗೂ ಸರ್ಕಾರದ ವಿವಿಧ ಕೃಷಿ ಅರಣ್ಯ ಯೋಜನೆಗಳ ಕುರಿತು ಜಂಟಿಯಾಗಿ ಪ್ರಚಾರ ನಡೆಸಲು ರಾಜ್ಯ ಸರ್ಕಾರ ಮತ್ತು ಈಶಾ ಔಟ್‌ರೀಚ್‌ ಒಪ್ಪಂದಕ್ಕೆ ಸಹಿ ಹಾಕಿವೆ.

ಮುಖ್ಯಾಂಶಗಳು

  • ಕೊಡಗು, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೃಷಿ ಅರಣ್ಯ ಯೋಜನೆಗಳ ಕುರಿತು ರಾಜ್ಯ ಸರ್ಕಾರ ಹಾಗೂ ಈಶಾ ಔಟ್‌ರೀಚ್‌ ಸಹಭಾಗಿತ್ವದಲ್ಲಿ ಕೆಲಸ ಮಾಡಲಿವೆ.
  • ‘ಮರ ಆಧಾರಿತ ಕೃಷಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಸರ್ಕಾರ ಬದ್ಧತೆ ತೋರಿದೆ. ಈ ಒಪ್ಪಂದವು ಕಾವೇರಿಯನ್ನು ಪುನರುಜ್ಜೀವನಗೊಳಿಸಲು, ಮಣ್ಣಿನ ಸಂರಕ್ಷಣೆ ಮತ್ತು ರೈತರಿಗೆ ನೆರವಾಗಲು ಈ ಯೋಜನೆ ಸಹಕಾರಿಯಾಗಲಿದೆ’.

ಏನಿದು ಕಾವೇರಿ ಕೂಗು?

  • 2019 ರಲ್ಲಿ ಕಾವೇರಿ ನದಿಯ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾವೇರಿ ಕಾಲಿಂಗ್ (ಕಾವೇರಿ ಕೂಗು) ಎಂಬ ಹೆಸರಿನ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಈ ಅಭಿಯಾನದ ಅಡಿಯಲ್ಲಿ ತಮಿಳುನಾಡು ಹಾಗೂ ಕರ್ನಾಟಕದ 28 ಜಿಲ್ಲೆಗಳನ್ನು ವಾಹನಗಳ ಮೇಲೆ ಪ್ರಯಾಣ ಮಾಡುವುದಾಗಿತ್ತು.
  • ತಮಿಳುನಾಡಿನ ವೆಲ್ಲಿಯಂ ಗಿರಿ ಪರ್ವತದ ತಪ್ಪಲಿನಲ್ಲಿ ಸ್ಥಾಪಿತವಾದ 112 ಅಡಿ ಎತ್ತರದ ಆದಿಯೋಗಿಯ ಸಮ್ಮುಖದಿಂದ ಈ ಅಭಿಯಾನಕ್ಕೆ ಈಶ ಫೌಂ ಡೇಶನ್ನ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ ಚಾಲನೆ ನೀಡಿದರು.

ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ

  • ರೈತರು, ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳನ್ನು ಅರಣ್ಯೀಕರಣ ಕಾರ್ಯಕ್ರಮರ್ಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಪ್ರೇರೇಪಿಸುವ ಹಾಗೂ ಅವರ ಸಹಕಾರವನ್ನು ಪಡೆಯುವ ದೃಷ್ಟಿಯಿಂದ ಸಾರ್ವಜನಿಕ ಸಹಬಾಗಿತ್ವದ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ ಎಂಬ ಹೊಸ ಯೋಜನೆಯನ್ನು 2011-12ನೇ ಸಾಲಿನಿಂದ ಪ್ರಾರಂಭಿಸಲಾಗಿದೆ.
  • ಈ ಕಾರ್ಯಕ್ರಮದ ಅನ್ವಯ ರೈತರು, ಸಾರ್ವಜನಿಕರು ರಿಯಾಯಿತಿ ದರದಲ್ಲಿ ಹತ್ತಿರದ ಸಸ್ಯಕ್ಷೇತ್ರಗಳಿಂದ ಸಸಿಗಳನ್ನು ಪಡೆದು ಅವುಗಳನ್ನು ತಮ್ಮ ಜಮೀನಿನಲ್ಲಿ ನೆಟ್ಟು ಪೋಷಿಸಿದರೆ ಪ್ರತಿ ಬದುಕುಳಿದ ಸಸಿಗೆ ಮೊದಲನೇ ವರ್ಷದ ಅಂತ್ಯದಲ್ಲಿ ರೂ. 35/- ಗಳನ್ನು ಹಾಗೂ ಎರಡನೇ ಮತ್ತು ಮೂರನೇ ವರ್ಷದ ಅಂತ್ಯದಲ್ಲಿ ಕ್ರಮವಾಗಿ ರೂ. 40/- ಹಾಗೂ ರೂ. 50/- ಹೀಗೆ ಒಟ್ಟು ರೂ. 125/- ಗಳನ್ನು ಪ್ರೋತ್ಸಾಹ ಧನವನ್ನಾಗಿ ಪಾವತಿಸಲಾಗುತ್ತದೆ.