Published on: May 2, 2023

ಕೊಡಚಾದ್ರಿ ಅಂಜನಾದ್ರಿಯಲ್ಲಿ ರೋಪ್ವೆ

ಕೊಡಚಾದ್ರಿ ಅಂಜನಾದ್ರಿಯಲ್ಲಿ ರೋಪ್ವೆ

ಸುದ್ದಿಯಲ್ಲಿ ಏಕಿದೆ? ಜೋಗ ಜಲಪಾತ ಹಾಗೂ ನಂದಿ ಬೆಟ್ಟದಲ್ಲಿ ರೋಪ್ವೇ ನಿರ್ಮಾಣಕ್ಕೆ ಈಗಾಗಲೇ  ಒಪ್ಪಂದ ಮಾಡಿಕೊಂಡಿರುವ ಕರ್ನಾಟಕ ಸರ್ಕಾರ, ಮುಂದಿನ ಹಂತದಲ್ಲಿ ಉಡುಪಿಯ ಕೊಡಚಾದ್ರಿ ಬೆಟ್ಟ ಹಾಗೂ ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲು ತೀರ್ಮಾನಿಸಿದೆ.

ಮುಖ್ಯಾಂಶಗಳು

  • ವಿಸ್ತೃತಯೋಜನಾ ವರದಿಗೆ ಸಿದ್ಧತೆ ನಡೆಸಲಾಗಿದೆ. ಅದೇ ರೀತಿ, ಅಂಜನಾದ್ರಿ ಬೆಟ್ಟದಲ್ಲಿ ಯೋಜನೆ ಅನುಷ್ಠಾನಕ್ಕೆ ಪೂರ್ವ ಕಾರ್ಯ ಸಾಧ್ಯತಾ ಅಧ್ಯಯನ ನಡೆಸಲಾಗಿದೆ.
  • ಪರ್ವತ ಮಾಲಾ ಯೋಜನೆಯಡಿ ರಾಜ್ಯದ 15 ಕಡೆಗಳಲ್ಲಿ ರೋಪ್ವೇಗಳ ನಿರ್ಮಾಣಕ್ಕೆ ಸರ್ಕಾರ ಪ್ರಸ್ತಾವ ಸಲ್ಲಿಸಿತ್ತು.
  • ಚಾಮುಂಡಿ ಬೆಟ್ಟದ ಪ್ರಸ್ತಾವ ಕೈ ಬಿಟ್ಟಿರುವ ಸರ್ಕಾರ, ಉಳಿದ ನಾಲ್ಕು ಕಡೆಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಈಗ ಹೆಚ್ಚಿನ ಒಲವು ತೋರಿಲ್ಲ.
  • ಯೋಜನೆಯ ಉದ್ದೇಶ :ಈ ಯೋಜನೆಯ ಆರಂಭವಾದರೆ ಗುಡ್ಡಗಾಡು ಪ್ರದೇಶಗಳಿಗೆ ಜನರ ಸುಲಲಿತ ಪ್ರಯಾಣಕ್ಕೆ ಅನುಕೂಲವಾಗಲಿದೆ ಹಾಗೂ ಪ್ರವಾಸೋ ದ್ಯಮ ಅಭಿವೃದ್ಧಿಯಾಗಲಿದೆ
  • ಒಪ್ಪಂದ ಮತ್ತು ಅನುಷ್ಠಾನ: ‘ಪ್ರವಾಸೋದ್ಯಮ ಇಲಾಖೆಯ ಮೂಲಕ ಈ ಯೋಜನೆ ಅನುಷ್ಠಾನ ಮಾಡಲಾಗುತ್ತದೆ. ಕೊಡಚಾದ್ರಿ ಹಾಗೂ ಅಂಜನಾದ್ರಿ ಬೆಟ್ಟದಲ್ಲಿ ರೋಪ್ವೇ ನಿರ್ಮಾಣಕ್ಕೆ ಮುನ್ನ ಐಡೆಕ್ ಸಂಸ್ಥೆಯುಕಾರ್ಯ ಸಾಧ್ಯತಾ ಅಧ್ಯಯನ ನಡೆಸಲಿದೆ. ಬಳಿಕ ಯೋಜನೆ ಅನುಷ್ಠಾನಕ್ಕೆ ನ್ಯಾಷನಲ್ ಹೈ ವೇ ಲಾಜಿಸ್ಟಿಕ್ಸ್ ಮ್ಯಾನೇಜ್ಮೆಂಟ್ ಲಿಮಿಟೆಡ್(ಎನ್ಎಚ್ಎಲ್ಎಂ ಎಲ್) ಜತೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತದೆ’.

ಹಿನ್ನೆಲೆ

  • ಕಳೆದ ವರ್ಷದ ಕೇಂದ್ರ ಬಜೆಟ್ನಲ್ಲಿ ಪರ್ವತಮಾಲಾ ಯೋಜನೆಯನ್ನು ಪ್ರಕಟಿಸಲಾಗಿತ್ತು.
  • ಹೆದ್ದಾರಿ ಸಚಿವಾಲಯ, ರೋಪ್ವೇ ಯೋಜನೆಗಳಿಗಾಗಿ ಸಾಮಾನ್ಯ ಕಾರ್ಯಾಚರಣೆಯ ವಿಧಾನ ಅಭಿವೃದ್ಧಿಪಡಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ತು.