Published on: September 23, 2021

‘ಗ್ರಾಮ ಸೇವಾ ಯೋಜನೆ’

‘ಗ್ರಾಮ ಸೇವಾ ಯೋಜನೆ’

ಸುದ್ಧಿಯಲ್ಲಿ ಏಕಿದೆ?  ಗ್ರಾಮ ಪಂಚಾಯತಿ ಮುಖಾಂತರ ಸರ್ಕಾರದ ಸೇವೆಗಳು ಜನರ ಮನೆಬಾಗಿಲಿಗೆ ಸಿಗುವಂತೆ ಮಾಡುವ ‘ಗ್ರಾಮ ಸೇವಾ ಯೋಜನೆ’ಗೆ 2022ರ ಜನವರಿ 26 ರಂದು ಚಾಲನೆ ನೀಡಲಾಗುವುದು.

ಏನಿದು ಯೋಜನೆ?:

  • ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಎಲ್ಲಾ ನಾಗರಿಕ ಸೇವೆಗಳು ಆನ್ ಲೈನ್ ಮೂಲಕ ಜನರಿಗೆ ಲಭ್ಯವಾಗಬೇಕು. ತಾಂತ್ರಿಕ ಮಟ್ಟದಲ್ಲಿ ಜನರಿಗೆ ಸೇವೆಗಳನ್ನು ನೀಡಲು ಕ್ರಮ ಕೈಗೊಳ್ಳುತ್ತೇವೆ. ಇದರಿಂದ ಗ್ರಾಮ ಪಂಚಾಯತ್, ತಹಶಿಲ್ದಾರ್ ಕಚೇರಿಗಳಿಗೆ ಜನರು ಹೋಗಿ ಸರದಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ಪ್ರಯಾಸಪಡುವುದು ತಪ್ಪುತ್ತದೆ
  • ಆರಂಭದಲ್ಲಿ 5 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುತ್ತಿದ್ದು ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ವಿಸ್ತರಿಸಲಾಗುವುದು