Published on: March 1, 2023
ಚುಟುಕು ಸಮಾಚಾರ – 1 ಮಾರ್ಚ್ 2023
ಚುಟುಕು ಸಮಾಚಾರ – 1 ಮಾರ್ಚ್ 2023
- 2008ರ ನಂತರ ಜನಿಸಿದವರು ಸಿಗರೇಟ್ ಅಥವಾ ತಂಬಾಕು ಉತ್ಪನ್ನಗಳನ್ನು ಖರೀದಿಸುವುದನ್ನು ನಿಷೇಧಿಸುವ ಹೊಸ ಕಾನೂನನ್ನು ಅಂಗೀಕರಿಸಿದ ನ್ಯೂಜಿಲೆಂಡ್ನಿಂದ ಪ್ರೇರಿತವಾಗಿರುವ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯು, 2025 ರ ವೇಳೆಗೆ ತಂಬಾಕು ಮುಕ್ತ ಪೀಳಿಗೆಯನ್ನು (ಜನರೇಷನ್) ರಚಿಸಲು ಇದೇ ಮಾದರಿಯನ್ನು ತರಲು ಮುಂದಾಗಿದೆ.
- ಭಾರತದ ಎರಡನೇ ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾನಿಲಯ ಶಿವಮೊಗ್ಗ ಜಿಲ್ಲೆಯಲ್ಲಿ ಸ್ಥಾಪನೆಗೊಳ್ಳಳಿದ್ದು, 2023ರ ಜೂನ್ನಿಂದ ಪ್ರಾರಂಭವಾಗುವ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ ಮಾಡಲಿದೆ. ಭದ್ರತಾ ವಿಷಯಕ್ಕೆ ಸಂಬಂಧಿಸಿ ಕೋರ್ಸುಗಳ ಡಿಪ್ಲೊಮೋ, ಪದವಿ ತರಗತಿಗಳ ಶಿಕ್ಷಣ ನೀಡಲಾಗುವುದು. ಡಿಪ್ಲೊಮೋ ಇನ್ ಪೊಲೀಸ್ ಸೈನ್ಸ್, ಬೇಸಿಕ್ ಕೋರ್ಸ್ ಇನ್ ಕಾರ್ಪೋರೇಟ್ ಸೆಕ್ಯೂರಿಟಿ ಮ್ಯಾನೇಜ್ಮೆಂಟ್, ಡಿಪ್ಲೊಮೋ ಇನ ಕ್ರಿಮಿನಲ್ ಇನ್ವೆಸ್ಟಿಗೇಶನ್, ಪಿಜಿ ಡಿಪ್ಲೊಮೋ ಇನ್ ಸೈಬರ್ ಸೆಕ್ಯೂರಿಟಿ ಆಂಡ್ ಸೈಬರ್ ಲಾ. ರೋಡ್ ಟ್ರಾಫಿಕ್ ಸೇಪ್ಟಿ ಮ್ಯಾನೇಜ್ಮೆಂಟ್, ದೈಹಿಕ ಸಾಮರ್ಥ್ಯ ನಿರ್ವಹಣೆಯ ಎರಡು ವಾರಗಳ ಸರ್ಟಿಫಿಕೇಟ್ ಕೋರ್ಸ್ ಮತ್ತು ಪಿಜಿ ಡಿಪ್ಲೊಮೋ ಇನ್ ಕೋಸ್ಟಲ್ ಸೆಕ್ಯೂರಿಟಿ ಅಂಡ್ ಎಎಂಪಿ ಲಾ ಎನ್ಫೋರ್ಸ್ಮೆಂಟ್ ಕೋರ್ಸ್ಗಳ ಬೋಧನೆ ಮಾಡಲಾಗುವುದು. ಇದರಿಂದ ಪೊಲೀಸ್ ಮತ್ತು ರಕ್ಷಣಾ ವಿಭಾಗಗಳಿಗೆ ನೇರವಾಗಿ ಅಭ್ಯರ್ಥಿಗಳು ಆಯ್ಕೆಯಾಗಬಹುದಾಗಿದ್ದು, ಇದೊಂದು ವೃತ್ತಿ ಭದ್ರತೆಯ ಶಿಕ್ಷಣವಾಗಿದೆ.
- ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆ ಮತ್ತು ಏರುತ್ತಿರುವ ಉಷ್ಣಾಂಶಕ್ಕೆ ಹೊಂದಿಕೊಳ್ಳಬಲ್ಲ ವಿಶೇಷ ಗೋಧಿ ತಳಿಯನ್ನು ಅಭಿವೃದ್ಧಿಪಡಿಸಿರುವುದಾಗಿ ಭಾರತೀಯ ಕೃಷಿ ಸಂಶೋಧನಾ ಪರಿಷತ್ ಪ್ರಕಟಿಸಿದೆ. ಭಾರತೀಯ ಕೃಷಿ ಸಂಶೋಧನಾ ಮಂಡಳಿಯು ಇತ್ತೀಚೆಗೆ HD-3385 ಎಂಬ ಹವಾಮಾನ-ಸ್ಮಾರ್ಟ್ ಗೋಧಿ ವಿಧವನ್ನು ಅಭಿವೃದ್ಧಿಪಡಿಸಿದ್ದಾರೆ.
- ಪ್ರತಿ ವರ್ಷ ಫೆಬ್ರವರಿ 28 ರಂದು ಸರ್ ಸಿ ವಿ ರಾಮನ್ ರ’ರಾಮನ್ ಪರಿಣಾಮ’ ಅವಿಷ್ಕಾರದ ಸ್ಮರಣಾರ್ಥವಾಗಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಥೀಮ್: ಈ ಬಾರಿ ಜಾಗತಿಕ ಸೌಖ್ಯಕ್ಕಾಗಿ ಜಾಗತಿಕ ವಿಜ್ಞಾನ ಎಂಬ ಘೋಷವಾಕ್ಯವಿದೆ.
- ಚಂದ್ರಯಾನ-3 ಮಿಷನ್ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಒಂದು ಹೆಜ್ಜೆ ಮುಂದಡಿಯಿಟ್ಟಿದ್ದು, ಯೋಜನೆಯ ಕ್ರಯೋಜೆನಿಕ್ ಎಂಜಿನ್ ಪರೀಕ್ಷೆ ಯಶಸ್ವಿಯಾಗಿದೆ. ಚಂದ್ರಯಾನ-3 ಮಿಷನ್ ಉಡಾವಣಾ ವಾಹನದ ಕ್ರಯೋಜೆನಿಕ್ ಮೇಲಿನ ಹಂತಕ್ಕೆ ಶಕ್ತಿ ತುಂಬುವ ಸಿಇ-20 ಕ್ರಯೋಜೆನಿಕ್ ರಾಕೇಟ್ ಎಂಜಿನ್ನ ಹಾರಾಟ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್ನ ಹೈ ಆಲ್ಟಿಟ್ಯೂಡ್ ಟೆಸ್ಟ್ ಫೆಸಿಲಿಟಿಯಲ್ಲಿ ಯೋಜಿತ ಅವಧಿಗೆ 25 ಸೆಕೆಂಡುಗಳ ಕಾಲ ನಡೆದ ಪರೀಕ್ಷೆಯಲ್ಲಿ ಯಶಸ್ವಿಯಾಗಿದೆ.