Published on: February 10, 2023

ಚುಟುಕು ಸಮಾಚಾರ – 10 ಫೆಬ್ರವರಿ 2023

ಚುಟುಕು ಸಮಾಚಾರ – 10 ಫೆಬ್ರವರಿ 2023

  • ಮೂರು ಉಪಗ್ರಹಗಳನ್ನು ಹೊತ್ತ ಇಸ್ರೊದ ‘ಕಿರು ಉಪಗ್ರಹ ಉಡಾವಣಾ ನೌಕೆ (ಸ್ಮಾಲ್ ಸ್ಯಾಟ್ಲೈಟ್ ಲಾಂಚ್ ವೆಹಿಕಲ್: ಎಸ್ಎಸ್ಎಲ್ವಿ-ಡಿ2)’ ಶ್ರೀ ಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಮೂಲಕ ನಭಕ್ಕೆ ಹಾರಿತು. ಉಪಗ್ರಗಳೆಲ್ಲವೂ ಕಕ್ಷೆಗೆ ಸೇರಿದ್ದು, ಬಾಹ್ಯಾಕಾಶ ಕಾರ್ಯಕ್ರಮ ಯಶಸ್ಸು ಕಂಡಿದೆ ಎಂದು ಇಸ್ರೋ ತಿಳಿಸಿದೆ. ‘ಎಸ್ಎಸ್ಎಲ್ವಿ- ಡಿ2’ ಮೂಲಕ ಇಸ್ರೊ ತನ್ನ ಭೂ ವೀಕ್ಷಣಾ ಉಪಗ್ರಹವಾದ ಇಒಎಸ್– 07, ಅಮೆರಿಕ ಮೂಲದ ‘ಅಂಟಾರಿಸ್’ನ ‘ಜಾನಸ್’ ಮತ್ತು ಚೆನ್ನೈ ನ ‘ಸ್ಪೇ ಸ್ ಕಿಡ್ಜ್ ಇಂಡಿಯಾ’ದ ‘ಆಜಾದಿಸ್ಯಾಟ್–2’ ಅನ್ನು ಕಕ್ಷೆಗೆ ಕಳುಹಿಸಿತು.
  • ದೆಹಲಿ–ಮುಂಬೈ ಎಕ್ಸ್ಪ್ರೆಸ್ವೇನ 270 ಕಿ.ಮೀ. ಉದ್ದದ ಭಾಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ದೆಹಲಿ ಮತ್ತು ಮುಂಬೈ ನಡುವಣ ಪೂರ್ಣ ಹೆದ್ದಾರಿಯು ಸಿದ್ಧವಾದ ನಂತರ ಇದು ದೇಶದ ಅತ್ಯಂತ ಉದ್ದದ ಎಕ್ಸ್ಪ್ರೆಸ್ ಹೆದ್ದಾರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ದೇಶದ ರಾಜಧಾನಿ ದೆಹಲಿ ಮತ್ತು ವಾಣಿಜ್ಯ ರಾಜಧಾನಿ ಎಂದೇ ಖ್ಯಾತವಾಗಿರುವ ಮುಂಬೈ ನಡುವಣ ಈ ಹೆದ್ದಾರಿಯು ಹಲವು ಕೈಗಾರಿಕಾ ಪ್ರದೇಶಗಳು, ವಿಮಾನ ನಿಲ್ದಾಣಗಳು ಮತ್ತು ಬಂದರಿನ ಮಧ್ಯೆ ನೇರ ಸಂಪರ್ಕ ಕಲ್ಪಿಸಲಿದೆ
  • ದೇಶದಲ್ಲಿ ಇದೇ ಮೊದಲ ಬಾರಿಗೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಲಿಥಿಯಂ ನಿಕ್ಷೇಪಗಳು ಪತ್ತೆಯಾಗಿವೆ ಎಂದು ಸರ್ಕಾರ ಹೇಳಿದೆ. ಲಿಥಿಯಂ ಎಂಬುದು ಒಂದು ನಾನ್-ಫೆರಸ್ ಲೋಹ ಇ.ವಿ ಬ್ಯಾಟರಿಗಳ ತಯಾರಿಕೆಗೆ ಲಿಥಿಯಂ ಪ್ರಮುಖ ವಸ್ತುವಾಗಿದೆ. ಭಾರತೀಯ ಭೂಗರ್ಭಶಾಸ್ತ್ರ ಸರ್ವೇಕ್ಷಣಾ ಸಂಸ್ಥೆ ನಡೆಸಿದ ಶೋಧನೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಸಲಾಲ್- ಹೈಮಾನ ಎಂಬಲ್ಲಿ 59 ಲಕ್ಷ ಟನ್ಗಳಷ್ಟು ಲಿಥಿಯಂ ನಿಕ್ಷೇಪವಿರುವುದು ಕಂಡುಬಂದಿವೆ