Published on: October 15, 2023

ಚುಟುಕು ಸಮಾಚಾರ : 12 ಅಕ್ಟೋಬರ್ 2023

ಚುಟುಕು ಸಮಾಚಾರ : 12 ಅಕ್ಟೋಬರ್ 2023

  • ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2020(ಎನ್ ಇಪಿ) ಅನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರ, ಎನ್ಇಪಿ ಬದಲಿಗೆ ರಾಜ್ಯ ಶಿಕ್ಷಣ ನೀತಿ ರೂಪಿಸಲು ವಿಶ್ವ ವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಮಾಜಿ ಅಧ್ಯಕ್ಷ ಪ್ರೊ.ಸುಖ್ದೇವ್ ಥೋರಟ್ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ.
  • ಪ್ರಾಕೃತಿಕ ದುರಂತದ ಸಮಯದಲ್ಲಿ ಸಾರ್ವಜನಿಕರಿಗೆ ಪರಿಣಾಮಕಾರಿ ತುರ್ತು ಸಂವಹ ನೀಡುವ ಸಲುವಾಗಿ ಸೆಲ್ ಬ್ರಾಡ್ಕಾಸ್ಟ್ ಅಲರ್ಟ್ ಸಿಸ್ಟಮ್ ಪ್ರಯೋಗಾರ್ಥ ಪರೀಕ್ಷೆ ನಡೆಸಲಿದೆ.ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ದೂರಸಂಪರ್ಕ ಇಲಾಖೆಯು ಪರೀಕ್ಷೆಯನ್ನು ನಡೆಸುತ್ತಿದೆ. ಪ್ರಾಕೃತಿಕ ದುರಂತದ ಸಮಯದಲ್ಲಿ ನಿಮ್ಮ ಮೊಬೈಲ್ಗೆ ಎಚ್ಚರಿಕೆಯ ಸಂದೇಶಗಳು ಬರಲಿವೆ.
  • ಇಂಟರ್ನ್ಯಾಷನಲ್ ಯೂನಿಯನ್ ಫಾರ್ ಕನ್ಸರ್ವೇಶನ್ ಆಫ್ ನೇಚರ್ (IUCN) ಅಕ್ಟೋಬರ್ 12 ಅನ್ನು ‘ವಿಶ್ವ ಸೋಮಾರಿ ಕರಡಿ ದಿನ’ ಎಂದು ಘೋಷಿಸಿದೆ. ಮೊದಲ ಬಾರಿಗೆ ಈ ದಿನವನ್ನುಅಕ್ಟೋಬರ್ 12, 2022 ರಂದು ಆಗ್ರಾದಲ್ಲಿ ವನ್ಯಜೀವಿ SOS ನಿಂದ IUCN ಮತ್ತು ಉತ್ತರ ಪ್ರದೇಶದ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಆಚರಿಸಲಾಯಿತು.
  • ಯುದ್ಧ ಪೀಡಿತ ಇಸ್ರೇಲ್ ನಿಂದ ಆಪರೇಷನ್ ಅಜಯ್ ಮೂಲಕ ಇಸ್ರೇಲ್ನಿಂದ ಭಾರತೀಯರನ್ನು ಕರೆ ತರುಲಾಗುವುದು.  ಪ್ರಯಾಣಿಕರಿಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಸಚಿವಾಲಯ ತಿಳಿಸಿದೆ. ಅವರ ಎಲ್ಲ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ.