Published on: April 15, 2023

ಚುಟುಕು ಸಮಾಚಾರ : 14 ಏಪ್ರಿಲ್ 2023

ಚುಟುಕು ಸಮಾಚಾರ : 14 ಏಪ್ರಿಲ್ 2023

  • ಭಾರತದ ಮೊದಲ 3ಡಿ-ಮುದ್ರಿತ ಅಂಚೆ ಕಚೇರಿ ಬೆಂಗಳೂರಿನ ಹಲಸೂರು ಬಜಾರ್ ನಲ್ಲಿ ನಿರ್ಮಾಣವಾಗುತ್ತಿದೆ. ನಿರ್ಮಾಣ : ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಯೋಜನೆಗೆ ಅನುಮೋದನೆ ನೀಡಿದ್ದು, ಇದರ ನಿರ್ಮಾಣವನ್ನು ಭಾರತೀಯ ಬಹುರಾಷ್ಟ್ರೀಯ ಸಂಘಟಿತ ಸಂಸ್ಥೆಯಾದ ಲಾರ್ಸೆನ್ ಮತ್ತು ಟೂಬ್ರೊ ನಿರ್ವಹಿಸುತ್ತಿದೆ.
  • ಪ್ರತಿ ವರ್ಷ ಏಪ್ರಿಲ್ 14ರಂದು ಭಾರತದ ಸಂವಿಧಾನ ಶಿಲ್ಪಿ, ಡಾ.ಬಿ.ಆರ್. ಅಂಬೇಡ್ಕರ್  ಜಯಂತಿಯನ್ನು ಆಚರಣೆ ಮಾಡಲಾಗುತ್ತದೆ. ಇದು ಅವರ 134 ನೇ ಜನ್ಮದಿನವಾಗಿದೆ. ಡಾ. ಭೀಮರಾವ್ ಅಂಬೇಡ್ಕರ್ ಅವರು ಮಧ್ಯಪ್ರದೇಶದ ಮೋವ್ನಲ್ಲಿ 1891 ರ ಏಪ್ರಿಲ್ 14 ರಂದು ಜನಿಸಿದರು. ಮಹಾರ ಜಾತಿಯಲ್ಲಿ ಜನಿಸಿದ ಇವರು, ಮೂಲತಃ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಖೇಡಾ ತಾಲ್ಲೂಕಿನ ಅಂಬೆವಾಡ ಗ್ರಾಮದವರು.
  • ಗ್ರಾಮೀಣ ಭಾರತದ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಬಳಸಿಕೊಳ್ಳಲು, ಸರ್ಕಾರವು ದೇಶಾದ್ಯಂತ ಒಂದು ಲಕ್ಷಕ್ಕೂ ಹೆಚ್ಚು ಹಳ್ಳಿಗಳ ವಿಶಿಷ್ಟ ಲಕ್ಷಣಗಳನ್ನು ಗುರುತಿಸಿ ದಾಖಲಿಸಿದೆ.ಇದನ್ನು ‘ಮೇರಾ ಗಾಂವ್ ಮೇರಿ ಧರೋಹರ್’ (ನನ್ನ ಗ್ರಾಮ ನನ್ನ ಪರಂಪರೆ) ಕಾರ್ಯಕ್ರಮದ ಅಡಿಯಲ್ಲಿ ಕೈಗೊಳ್ಳಲಾಗಿದೆ.
  • ಅಜ್ಮೀರ್-ದೆಹಲಿ ಕಂಟೋನ್ಮೆಂಟ್ ಮಾರ್ಗದಲ್ಲಿ ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ಗೆ ಪ್ರಧಾನಿ ನರೇಂದ್ರ ಮೋದಿ  ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ. ರೈಲು ದೆಹಲಿ ಕಂಟೋನ್ಮೆಂಟ್ ಮತ್ತು ಅಜ್ಮೀರ್ ನಡುವಿನ ದೂರವನ್ನು 5 ಗಂಟೆ 15 ನಿಮಿಷಗಳಲ್ಲಿ ಕ್ರಮಿಸುತ್ತದೆ. ಅಜ್ಮೀರ್-ದೆಹಲಿ ಕಂಟೋನ್ಮೆಂಟ್ ವಂದೇ ಭಾರತ್ ಎಕ್ಸ್ಪ್ರೆಸ್ ಎತ್ತರದ ಓವರ್ಹೆಡ್ ಎಲೆಕ್ಟ್ರಿಕ್ ಪ್ರದೇಶದಲ್ಲಿ ವಿಶ್ವದ ಮೊದಲ ಸೆಮಿ-ಹೈ ಸ್ಪೀಡ್ ಪ್ಯಾಸೆಂಜರ್ ರೈಲು ಆಗಿರುತ್ತದೆ.